ಬೆಂಗಳೂರು : ಪುತ್ರ ‘ಹೆಚ್.ಡಿ ಕುಮಾರಸ್ವಾಮಿ’ ಭವಿಷ್ಯದ ಬಗ್ಗೆ ತಂದೆ, ಜೆಡಿಎಸ್ ವರಿಷ್ಟ ದೇವೇಗೌಡ ಭವಿಷ್ಯ ನುಡಿದಿದ್ದು, ಹೆಚ್.ಡಿ.ಕುಮಾರಸ್ವಾಮಿ ಮತ್ತೆ ಮುಖ್ಯಮಂತ್ರಿ ಆಗುತ್ತಾರೆ ಎಂದಿದ್ದಾರೆ.
ಜೆಡಿಎಸ್ ಜನತಾ ಮಿತ್ರ ಸಮಾರೋಪ ಸಮಾವೇಶದಲ್ಲಿ ಮಾತನಾಡಿದ ಮಾಜಿ ಪ್ರಧಾನಿ ಎಚ್ಡಿ ದೇವೇಗೌಡ, ನನ್ನ ಕಣ್ಣ ಮುಂದೆ ಜೆಡಿಎಸ್ಗೆ ಪವರ್ ಬರೋದು ಸತ್ಯ. ಹೆಚ್.ಡಿ.ಕುಮಾರಸ್ವಾಮಿ ಮತ್ತೆ ಮುಖ್ಯಮಂತ್ರಿ ಆಗುತ್ತಾರೆ. ಇದನ್ನು ತಪ್ಪಿಸಲು ಯಾರಿಂದಲೂ ಸಾಧ್ಯವಿಲ್ಲ ಎಂದರು.
ನನ್ನ ಆರೋಗ್ಯ ಇನ್ನು ಸುಧಾರಣೆ ಆಗುತ್ತೆ ಅನ್ನುವ ನಂಬಿಕೆ ಇದೆ. ನಾನು ಒಂದು ಕಡೆ ಇರುತ್ತೇನೆ ಎಂದು ಭಾವಿಸಬೇಡಿ. ಸ್ವಲ್ಪ ದಿನಗಳು ಆದಮೇಲೆ ರಾಜ್ಯದ ಹಲವು ಕಡೆ ಭೇಟಿ ನೀಡುತ್ತೇನೆ, ಕುಮಾರಸ್ವಾಮಿ ಪಕ್ಷವನ್ನು ಉಳಿಸುವುದಕ್ಕೆ 10 ವರ್ಷಗಳಿಂದ ಏನು ಮಾಡಿದ್ದಾರೆ ಎನ್ನುವುದು ಗೊತ್ತು. ನನಗೆ ಇನ್ನು ಹೋರಾಟ ಮಾಡುವ ಶಕ್ತಿ ಇದೆ. ಮತ್ತೆ ಜೆಡಿಎಸ್ ಅಧಿಕಾರಕ್ಕೆ ಬರಲಿದೆ. ನನ್ನ ಕಣ್ಣ ಮುಂದೆ ಜೆಡಿಎಸ್ಗೆ ಪವರ್ ಬರೋದು ಸತ್ಯ. ಹೆಚ್.ಡಿ.ಕುಮಾರಸ್ವಾಮಿ ಮತ್ತೆ ಮುಖ್ಯಮಂತ್ರಿ ಆಗುತ್ತಾರೆ. ಇದನ್ನು ತಪ್ಪಿಸಲು ಯಾರಿಂದಲೂ ಸಾಧ್ಯವಿಲ್ಲ ಎಂದರು.
ಬಹಳ ದಿನಗಳಿಂದ ಅನಾರೋಗ್ಯದ ಹಿನ್ನೆಲೆ ಮನೆಯಲ್ಲಿ ವಿಶ್ರಾಂತಿ ಪಡೆಯುತ್ತಿದ್ದ ದೇವೇಗೌಡರು ಇಂದು ಬೆಂಗಳೂರಿನ ನ್ಯಾ಼ಷನಲ್ ಕಾಲೇಜು ಮೈದಾನದಲ್ಲಿ ನಡೆದ ಜೆಡಿಎಸ್ ಜನತಾ ಮಿತ್ರ ಸಮಾರೋಪ ಸಮಾವೇಶದಲ್ಲಿ ಭಾಗವಹಿಸಿದ್ದರು. ಅನಾರೋಗ್ಯದ ಹಿನ್ನೆಲೆ ದೇವೇಗೌಡರು ಮನೆಯಲ್ಲಿ ಕೆಲಕಾಲ ವಿಶ್ರಾಂತಿ ಪಡೆದಿದ್ದರು. ದೇವೇಗೌಡರನ್ನು ರಾಜ್ಯದ ವಿವಿಧ ಪಕ್ಷದ ಮುಖಂಡರು ಭೇಟಿಯಾಗಿ ಆರೋಗ್ಯ ವಿಚಾರಿಸಿದ್ದರು. ಬಹಳ ಸಮಯದ ನಂತರ ದೇವೇಗೌಡರು ಬಹಿರಂಗ ಸಮಾವೇಶದಲ್ಲಿ ಭಾಗಿಯಾಗಿದ್ದು, ಜೆಡಿಎಸ್ ಕಾರ್ಯಕರ್ತರು ಹಾಗೂ ಮುಖಂಡರನ್ನು ಹುರಿದುಂಬಿಸಿದ್ದಾರೆ. ಮತ್ತೆ ಜೆಡಿಎಸ್ ಅಧಿಕಾರದ ಗದ್ದುಗೆ ಹಿಡಿಯಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.