ಕುಂದಾಪುರ : ಕುಂದಾಪುರದಲ್ಲಿ ಘೋರ ದುರಂತವೊಂದು ಸಂಭವಿಸಿದ್ದು, ಕುಡಿದ ಮತ್ತಿನಲ್ಲಿ ಪತ್ನಿಯನ್ನು ಕೊಂದು ಪತಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.
BIGG NEWS : ಕಾಂಗ್ರೆಸ್ `ಮಡಿಕೇರಿ ಚಲೋ’ ಪ್ರತಿಯಾಗಿ ಬಿಜೆಪಿಯಿಂದ ಜನಜಾಗೃತಿ ಸಮಾವೇಶ
ಕುಂದಾಪುರದ ದೇವಲ್ಕುಂದದಲ್ಲಿ ಇಂದು ಬೆಳಗ್ಗೆ ಕುಡಿದ ಮತ್ತಿನಲ್ಲಿ ಪತ್ನಿಯನ್ನು ಹತ್ಯೆ ಮಾಡಿ ಬಳಿಕ ಪತಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.ಸೊರಬ ನಿವಾಸಿ ಪೂರ್ಣಿಮಾ ಆಚಾರ್ಯ(38) ಕೊಲೆಯಾದ ಮಹಿಳೆ. ರವಿ ಆಚಾರ್ಯ (42) ಕೊಲೆ ಆರೋಪಿಯಾಗಿದ್ದು, ಆತ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
ಘಟನಾ ಸ್ಥಳಕ್ಕೆ ಕುಂದಾಪುರ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ.