ಬೆಂಗಳೂರು:ಬಿಜೆಪಿ ಜೆಡಿಎಸ್ ಮೈತ್ರಿ ಅಭ್ಯರ್ಥಿಯಾಗಿ ಕುಪೇಂದ್ರ ರೆಡ್ಡಿ ಅವರನ್ನು ರಾಜ್ಯಸಭೆಯ ಕಣಕ್ಕೆ ಇಳಿಸಲು ತೀರ್ಮಾನಿಸಲಾಗಿದೆ ಅಂತ ಮಾಜಿ ಸಿಎಂ ಕುಮಾರಸ್ವಾಮಿ ತಿಳಿಸಿದ್ದಾರೆ.
ಅವರು ಇಂದು ವಿಧಾನಸೌಧದಲ್ಲಿ ಸುದ್ದಿಗಾರರ ಜೊತೆಗೆ ಮಾತನಾಡುತ್ತ ಈ ಬಗ್ಗೆ ತಿಳಿಸಿದರು. ಇದೇ ವೇಳೆ ಅವರು ಮಾತನಾಡಿ ಬಿಜೆಪಿಯ ರಾಷ್ಟ್ರೀಯ ನಾಯಕರು, ರಾಜ್ಯ ನಾಯಕರು ಸಲಹೆ ಕೊಟ್ಟಿದ್ದಾರೆ. ಮತಗಳ ಕೊರತೆ ಬಗ್ಗೆ ಚುನಾವಣೆ ವೇಳೆ ನಿರ್ಧಾರ ಆಗುತ್ತೆ. ಬಿಜೆಪಿ ಹಾಗೂ ಜೆಡಿಎಸ್ಗೆ ಹೆಚ್ಚುವರಿ ಮತಗಳಿವೆ ಅಂತ ಹೇಳಿದರು. ಇನ್ನೂ ಮಂಗಳೂರಿನಲ್ಲಿ ಬಿಜೆಪಿ ನಾಯಕರ ವಿರುದ್ಧ ಪ್ರಕರಣ ದಾಖಲಾಗಿರುವ ಬಗ್ಗೆ ಪ್ರತಿಕ್ರಿಯಿಸಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, “ಜೈ ಶ್ರೀರಾಮ್ ಘೋಷಣೆ ಕೂಗುವುದು ಪ್ರಜಾಪ್ರಭುತ್ವ ವಿರೋಧಿಯೇ? ಸಿದ್ದರಾಮಯ್ಯ ಅವರ ನಾಯಕತ್ವದಲ್ಲಿ, ಭಗವಾನ್ ರಾಮನ ಮಾತನ್ನು ಕೇಳಿ ಅವರು ತೊಂದರೆಗೀಡಾಗುತ್ತಿದ್ದಾರೆ… ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಅವರು ಸಂಪೂರ್ಣವಾಗಿ ಭರವಸೆ ಕಳೆದುಕೊಳ್ಳುತ್ತಿದ್ದಾರೆ. ಅದಕ್ಕಾಗಿಯೇ ಅವರು ಬಿಜೆಪಿ ನಾಯಕರ ವಿರುದ್ಧ ಎಫ್ಐಆರ್ ದಾಖಲಿಸುವ ಮೂಲಕ ಬಹಳ ಆತುರದಿಂದ ವರ್ತಿಸುತ್ತಿದ್ದಾರೆ” ಎಂದು ಕಿಡಿಕಾರಿದ್ದಾರೆ.
#WATCH | Karnataka JD (S) leader HD Kumaraswamy says, "BJP national president and national leaders and BJP state leaders joined together and ultimately we decided to file the nomination paper as an NDA candidate. JDS-BJP coalition candidate, Kupendra Reddy we selected from both… pic.twitter.com/ROQj9G4Pgk
— ANI (@ANI) February 15, 2024