ವಿಜಯಪುರ : ಸರ್ಕಾರಿ ವಸತಿ ಶಾಲೆ, ಕಾಲೇಜುಗಳಲ್ಲಿ ಧಾರ್ಮಿಕ ಹಬ್ಬಗಳ ಆಚರಣೆ ವಿಚಾರವಾಗಿ ಒಂದು ಸುತ್ತೋಲೆ ಹೊರಡಿಸಿ ಅದಿನ್ನೇನು ವಿವಾದ ಆಗುತ್ತಿದ್ದಂತೆಯೇ ವಾಪಸ್ ಪಡೆದಿದ್ದ ಸರ್ಕಾರ ಇದೀಗ ಮತ್ತೊಂದು ಯಡವಟ್ಟು ಮಾಡಿಕೊಳ್ಳಲು ಮುಂದಾಗಿದೆಯಾ ಎಂಬ ಅನುಮಾನ ಸೃಷ್ಟಿಯಾಗಿದೆ.
‘ಓ ಚೇತನ ಆಗೂ ನೀ ಅನಿಕೇತನ’ ಎಂಬ ರಾಷ್ಟ್ರಕವಿ ಕುವೆಂಪು ಅವರು ಬರೆದಿರುವ ಸಾಹಿತ್ಯವಿದು.ಅದೇ ರೀತಿ ಅವರು ಶಿಕ್ಷಣಕ್ಕೆ ಎಷ್ಟು ಮಹತ್ವ ಕೊಟ್ಟಿದ್ದರು ಎಂಬುದಕ್ಕೆ ‘ಜ್ಞಾನ ದೇಗುಲವಿದು ಕೈ ಮುಗಿದು ಒಳಗೆ ಬಾ’ ಎಂಬ ಬರಹ. ಇದೀಗ ‘ಜ್ಞಾನ ದೇಗುಲವಿದು ಧೈರ್ಯವಾಗಿ ಪ್ರಶ್ನಿಸಿ’ ಎಂದು ಬರಹ ಬದಲಾದ ಘಟನೆ ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ಘಾಜಿಪುರದ ಮೊರಾರ್ಜಿ ವಸತಿ ಶಾಲೆಯಲ್ಲಿ ನಡೆದಿದೆ.
ಸಿದ್ದರಾಮಯ್ಯ ವಿರುದ್ಧ ಹೈಕೋರ್ಟ್ 10 ಸಾವಿರ ದಂಡ ವಿಧಿಸಿದ ಪ್ರಕರಣ : ಇಂದು ಸುಪ್ರೀಂನಲ್ಲಿ ಅರ್ಜಿ ವಿಚಾರಣೆ
ಹೌದು ಮೋರಾರ್ಜಿ ದೇಸಾಯಿ ವಸತಿ ಶಾಲೆಯ ಪ್ರವೇಶ ದ್ವಾರದಲ್ಲಿ ಕುವೆಂಪು ಅವರ ಬರಹ ಬದಲಾಗಿದೆ. ಶಾಲೆಗಳಲ್ಲಿ ರಾಷ್ಟ್ರಕವಿ ಕುವೆಂಪು ಅವರ ಬರಹಕ್ಕೆ ಕೊಕ್ ನೀಡಲಾಗಿದೆ ಎಂದು ಹೇಳಲಾಗುತ್ತಿದೆ. ಗೋಡೆ ಬರಹದಲ್ಲಿ ರಾಷ್ಟ್ರಕವಿ ಕುವೆಂಪು ಅವರ ಬರಬರಹಗಳಿಗೆ ಬದಲಾವಣೆ ರೂಪ ನೀಡಲಾಗಿದೆ.
ಜ್ಞಾನದೇ ಗೆಲುವಿದು ಕೈಮುಗಿದು ಒಳಗೆ ಬಾ ಸಾಲಿಗೆ ಬ್ರೇಕ್ ಹಾಕಲಾಗಿದೆ ಎಂದು ತಿಳಿದು ಬಂದಿದೆ.ಜ್ಞಾನ ದೇಗುಲವಿದು ಧೈರ್ಯವಾಗಿ ಪ್ರಶ್ನಿಸಿ ಎಂಬ ಬರಹ ಮುದ್ದೇಬಿಹಾಳ ತಾಲೂಕಿನ ಘಾಜಿಪೂರಿಯ ಶಾಲೆ ಹಾಗೂ ವಸತಿ ಶಾಲೆಯ ಪ್ರವೇಶ ದ್ವಾರದಲ್ಲಿ ಕುವೆಂಪು ಅವರ ಬರಹ ಬದಲಾಗಿದೆ. ಈ ಮೂಲಕ ಅವರ ಬರಹಕ್ಕೆ ಅವಮಾನಿಸಲಾಗಿದೆ ಎಂದು ಹೇಳಲಾಗುತ್ತಿದೆ.ಈ ಕುರಿತು ತನಿಖೆ ನಡೆಯುವ ಸಾಧ್ಯತೆ ಇದೆ ಎನ್ನಲಾಗಿದೆ.
ರಾಜ್ಯ ಸರ್ಕಾರದ ಸುತ್ತೋಲೆ ಪ್ರಕಾರ ‘ಜ್ಞಾನ ದೇಗುಲವಿದು, ಧೈರ್ಯವಾಗಿ ಪ್ರಶ್ನಿಸಿ’ ಎಂದು ಬರಹ ಬದಲಾವಣೆ ಮಾಡಲಾಗಿದೆ. ಮೊರಾರ್ಜಿ ವಸತಿ ಶಾಲಾ ವಿದ್ಯಾರ್ಥಿಗಳ ಪೋಷಕರು ಧೈರ್ಯವಾಗಿ ಪ್ರಶ್ನೆ ಮಾಡಲಿ. ಮಕ್ಕಳ ಶಿಕ್ಷಣ, ವಸತಿ, ಊಟ ಸೇರಿದಂತೆ ವಸತಿ ಶಾಲೆಯ ಎಲ್ಲಾ ವಿಚಾರಗಳ ಕುರಿತು ಪ್ರಶ್ನೆ ಮಾಡಲಿ.ವಿದ್ಯಾರ್ಥಿಗಳಿಗೆ ಉತ್ತಮ ಶಿಕ್ಷಣ ಸಿಗಲಿ. ಪೋಷಕರು ಧೈರ್ಯವಾಗಿ ಮಾತನಾಡಲಿ ಎಂಬ ಉದ್ದೇಶ ಮಾತ್ರ ಬರಹ ಬದಲಾಯಿಸಿದ್ದರ ಹಿಂದಿರುವುದು ಎಂದು ಉದ್ದೇಶವಾಗಿದೆ ಎಂದು ವಿಜಯಪುರ ಜಿಲ್ಲಾ ಸಮಾಜ ಕಲ್ಯಾಣ ಇಲಾಖೆ ಉಪ ನಿರ್ದೇಶಕ ಪುಂಡಲೀಕ ಮಾನವರ ತಿಳಿಸಿದ್ದಾರೆ.
UPDATE : ಪರ್ಫ್ಯೂಮ್ ಫ್ಯಾಕ್ಟರಿಯಲ್ಲಿ ಅಗ್ನಿ ಅವಘಡ ಪ್ರಕರಣ : ಮಾಲೀಕನ ವಿರುದ್ಧ FIR ದಾಖಲು