ಬೆಂಗಳೂರು : ದೆಹಲಿಯಲ್ಲಿ UNI ಸುದ್ದಿ ಸಂಸ್ಥೆಯ ಮೇಲೆ ಪೊಲೀಸರು ನಡೆಸಿರುವ ದಾಳಿಯನ್ನು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ತೀವ್ರವಾಗಿ ಖಂಡಿಸುತ್ತದೆ. ಈ ಕ್ರಮವು ಮಾಧ್ಯಮ ಸ್ವಾತಂತ್ರ್ಯಕ್ಕೆ ಧಕ್ಕೆ ತರುವಂತದ್ದಾಗಿದ್ದು, ಪ್ರಜಾಪ್ರಭುತ್ವದ ಮೂಲ ಮೌಲ್ಯಗಳಿಗೂ ವಿರುದ್ಧವಾಗಿದೆ.
ಪತ್ರಕರ್ತರ ಖಾಸಗಿ ವಸ್ತುಗಳನ್ನು ತೆಗೆದುಕೊಳ್ಳಲು ಅವಕಾಶ ನೀಡದೆ, ಮಹಿಳೆ ಎನ್ನುವುದನ್ನೂ ಲೆಕ್ಕಿಸದೇ ನಡೆಸಿದ ವರ್ತನೆ ಅಕ್ಷಮ್ಯ ಮತ್ತು ಖಂಡನೀಯ. ಈ ಘಟನೆ ಮಾಧ್ಯಮಗಳ ಮೇಲೆ ಅನಗತ್ಯ ಒತ್ತಡ ಹೇರಲು ಪ್ರಯತ್ನಿಸಿರುವುದನ್ನು ಸ್ಪಷ್ಟಪಡಿಸುತ್ತದೆ.
ಸಂಬಂಧಪಟ್ಟ ಅಧಿಕಾರಿಗಳ ವಿರುದ್ಧ ತಕ್ಷಣ ಕ್ರಮ ಕೈಗೊಳ್ಳಬೇಕು ಹಾಗೂ ಭವಿಷ್ಯದಲ್ಲಿ ಇಂತಹ ಘಟನೆಗಳು ಮರುಕಳಿಸದಂತೆ ಸರ್ಕಾರ ಸೂಕ್ತ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಕೆಯುಡಬ್ಲ್ಯೂಜೆ ರಾಜ್ಯಾಧ್ಯಕ್ಷರಾದ ಶಿವಾನಂದ ತಗಡೂರು ಆಗ್ರಹಿಸಿದ್ದಾರೆ








