ಬೆಂಗಳೂರು: ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘದ(ಕೆಯುಡಬ್ಲೂಜೆ) 2025-2028ನೇ ಸಾಲಿನ ಚುನಾವಣೆಯಲ್ಲಿ ಆಯ್ಕೆಯಾಗಿರುವ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಅವರ ನೇತೃತ್ವದ ರಾಜ್ಯ ಪದಾಧಿಕಾರಿಗಳು ಸೋಮವಾರ ಸಂಘದ ಸಭಾಂಗಣದಲ್ಲಿ ನಡೆದ ಸರಳ ಕಾರ್ಯಕ್ರಮದಲ್ಲಿ ಅಧಿಕಾರ ಸ್ವೀಕಾರ ಮಾಡಿತು.
ಚುನಾವಣಾ ಲಿತಾಂಶವನ್ನು ಅಧಿಕೃತವಾಗಿ ಘೋಷಣೆ ಮಾಡಿದ ಮುಖ್ಯ ಚುನಾವಣಾಧಿಕಾರಿ ಎನ್.ರವಿಕುಮಾರ್ (ಟೆಲೆಕ್ಸ್) ಅವರು, ನೂತನ ಪದಾಧಿಕಾರಿಗಳಿಗೆ ಪ್ರಮಾಣ ವಚನ ಬೋದನೆ ಮಾಡಿದರು.

ಅಧ್ಯಕ್ಷರಾಗಿ ಶಿವಾನಂದ ತಗಡೂರು, ಉಪಾಧ್ಯಕ್ಷರಾಗಿ ಹೆಚ್.ಬಿ.ಮದನಗೌಡ, ಅಜ್ಜಮಾಡ ರಮೇಶ್ ಕುಟ್ಟಪ್ಪ, ಮತ್ತಿಕೆರೆ ಜಯರಾಮ, ಪ್ರಧಾನ ಕಾರ್ಯದರ್ಶಿ ಜಿ.ಸಿ.ಲೋಕೇಶ, ಕಾರ್ಯದರ್ಶಿಗಳಾಗಿ ನಿಂಗಪ್ಪ ಚಾವಡಿ, ಪುಂಡಲೀಕ ಭೀ ಬಾಳೋಜಿ, ಸೋಮಶೇಖರ ಕೆರೆಗೋಡು, ಖಜಾಂಚಿಯಾಗಿ ವಾಸುದೇವ ಹೊಳ್ಳ ಅವರು ಪ್ರಮಾಣ ವಚನ ಸ್ವೀಕರಿಸಿದರು.
ಇದೇ ಸಂದರ್ಭದಲ್ಲಿ ನೂತನ ಪದಾಧಿಕಾರಿಗಳಿಗೆ ಚುನಾವಣಾ ಪ್ರಮಾಣ ಧೃಢೀಕರಣ ಪತ್ರ ಮತ್ತು ಹೂ ಬೊಕ್ಕೆ ಮತ್ತು ಪುಸ್ತಕ ನೀಡುವ ಮೂಲಕ ಅಭಿನಂದಿಸಲಾಯಿತು.

ಸಂಘದ ಜವಬ್ದಾರಿ ನಿಭಾಯಿಸಿರುವೆ:
ಇದೇ ಸಂದರ್ಭದಲ್ಲಿ ಮಾತನಾಡಿದ ಮುಖ್ಯ ಚುನಾವಣಾಧಿಕಾರಿ ಎನ್.ರವಿಕುಮಾರ್ ಅವರು, ಸಂಘವು ತನಗೆ ವಹಿಸಿದ್ದ ಜವಬ್ದಾರಿಯನ್ನು ಬೈಲಾ ಮತ್ತು ಸಂಘದ ನಿಯಮಾವಳಿಗಳ ಅಡಿಯಲ್ಲಿ ಅತ್ಯಂತ ಪಾರದರ್ಶಕವಾಗಿ ನಿಭಾಯಿಸಿದ ತೃಪ್ತಿ ನನಗಿದೆ. ಚುನಾವಣಾ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದ ಎಲ್ಲರಿಗೂ ಮತ್ತು ಚುನಾವಣೆಯಲ್ಲಿ ಆಯ್ಕೆಯಾದ ನೂತನ ಸಾಲಿನ ಎಲ್ಲಾ ಪದಾಧಿಕಾರಿಗಳನ್ನು ಅಭಿನಂದಿಸುತ್ತೇನೆ ಎಂದರು.
ನೂತನ ಪದಾಧಿಕಾರಿಗಳಿಗೆ ಅಭಿನಂದನೆ:
ಸಂಘದ ರಾಜ್ಯಾಧ್ಯಕ್ಷರಾಗಿ ಅಧಿಕಾರ ಸ್ವೀಕಾರ ಮಾಡಿದ ಶಿವಾನಂದ ತಗಡೂರು ಮಾತನಾಡಿ, ಸಂಘದ ಚುನಾವಣೆ ನಡೆಸುವುದು ಹಲವು ಸವಾಲಿನ ಕೆಲಸ. ಅದಕ್ಕಾಗಿ ಕಳೆದ ಮೂರು ತಿಂಗಳಿಂದಲೂ ಸಿದ್ಧತೆಯನ್ನು ನಡೆಸಲಾಗಿತ್ತು. ರಾಜ್ಯ ಘಟಕ, 31 ಜಿಲ್ಲಾ ಘಟಕ ಮತ್ತು 2 ಹೊರನಾಡಿನ ಘಟಕಗಳಿಗೆ ಏಕಕಾಲದಲ್ಲಿ ಶಾಂತಿಯುತವಾಗಿ ಚುನಾವಣೆ ನಡೆದಿದೆ. ಅದಕ್ಕಾಗಿ ಚುನಾವಣಾಧಿಕಾರಿ ರವಿಕುಮಾರ್ ನೇತೃತ್ವದಲ್ಲಿ ಎಲ್ಲಾ ಚುನಾವಣಾ ಸಿಬ್ಬಂದಿಯನ್ನು ಅಭಿನಂದಿಸುವುದಾಗಿ ತಿಳಿಸಿದರು. ನೂತನ ಸಾಲಿನ ಪದಾಧಿಕಾರಿಗಳಾಗಿ ಆಯ್ಕೆಯಾಗಿರುವ ಎಲ್ಲಾ ಜಿಲ್ಲಾ ಘಟಕಗಳ ಪದಾಧಿಕಾರಿಗಳು ಮತ್ತು ಕಾರ್ಯಕಾರಿ ಸಮಿತಿ ಸದಸ್ಯರನ್ನು ಅಭಿನಂದಿಸಿದರು.

ಚುನಾವಣಾಧಿಕಾರಿಗೆ ಸನ್ಮಾನ:
ಯಶಸ್ವಿಯಾಗಿ ಕಾರ್ಯ ನಿರ್ವಹಣೆ ಮಾಡಿದ ಮುಖ್ಯ ಚುನಾವಣಾಧಿಕಾರಿ ಎನ್.ರವಿಕುಮಾರ್ ಅವರನ್ನು ಭೂ ಕಬಳಿಕೆ ನಿಷೇಧ ನ್ಯಾಯಾಲಯದ ನ್ಯಾಯಾಧೀಶ ಕೆ.ಎಚ್.ಅಶ್ವತ್ಥನಾರಾಯಣಗೌಡ ಅವರು ನೆನಪಿನ ಕಾಣಿಕೆ ನೀಡಿ ಸನ್ಮಾನಿಸಿದರು. ಇದೇ ಸಂದರ್ಭದಲ್ಲಿ ಅವರು ನೂತನ ಸಾಲಿಗೆ ಆಯ್ಕೆಯಾಗಿರುವ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ನೇತೃತ್ವದ ಎಲ್ಲಾ ಪದಾಧಿಕಾರಿಗಳನ್ನು ಅಭಿನಂದಿಸಿದರು. ಇತ್ತೀಚಿನ ಕಾಲಘಟ್ಟದಲ್ಲಿ ಕೆಯುಡಬ್ಲೂೃಜೆ ಕ್ರೀಯಾಶೀಲವಾಗಿ ಕೆಲಸ ಮಾಡುವ ಮೂಲಕ ಮಹತ್ವದ ಹೆಜ್ಜೆ ಗುರುತು ಮೂಡಿಸುತ್ತಿರುವುದು ಅಭಿನಂದನೀಯ ಎಂದು ಅಶ್ವತ್ಥನಾರಾಯಣಗೌಡ ಅವರು ಶ್ಲಾಘಿಸಿದರು.
BIG NEWS: ದೀರ್ಘಾವಧಿಯ ‘ಬಾಡಿಗೆದಾರ’ನು ಮನೆಯ ‘ಮಾಲೀಕ’ನಾಗಲು ಸಾಧ್ಯವಿಲ್ಲ: ಸುಪ್ರೀಂ ಕೋರ್ಟ್








