ಬೆಂಗಳೂರು: ರಾಜ್ಯದಲ್ಲಿ 24 ಸಮುದಾಯ ಬಾನುಲಿ ಕೇಂದ್ರಗಳು ಕಾರ್ಯ ನಿರ್ವಹಿಸುತ್ತಿದ್ದಾವೆ. ಇವುಗಳು ಆರ್ಥಿಕ ಸಂಪನ್ಮೂಲದ ಕೊರತೆಯಿಂದ ಬಳಸುತ್ತಿರುವುದರಿಂದ, ಸರ್ಕಾರದಿಂದ ಆರ್ಥಿಕ ಸಬಲೀಕರಣಗೊಳಿಸುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳುವಂತೆ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಸಿಎಂ ಸಿದ್ಧರಾಮಯ್ಯಗೆ ಪತ್ರದಲ್ಲಿ ಮನವಿ ಮಾಡಿದ್ದಾರೆ.
ಈ ಕುರಿತಂತೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರಿಗೆ ಪತ್ರ ಬರೆದಿರುವಂತ ಅವರು, ಸುದ್ದಿಮನೆಯಲ್ಲಿ ಸಮುದಾಯ ಬಾನುಲಿ ಕೇಂದ್ರಗಳು, ಶಿಕ್ಷಣ, ಕೃಷಿ, ಆರೋಗ್ಯ, ಕಲೆ, ಸಂಸ್ಕೃತಿ ಭಾಷೆಯ ವಿಷಯ ಸೇರಿದಂತೆ ಸರ್ಕಾರದ ಅಭಿವೃದ್ಧಿ ಕಾರ್ಯಕ್ರಮಗಳ ಕುರಿತು ಜನರಲ್ಲಿ ಅರಿವು ಮೂಡಿಸುತ್ತಾ ಬರುತ್ತಿರುವುದು ತಮಗೂ ಕೂಡ ತಿಳಿದ ಸಂಗತಿಯಾಗಿದೆ ಎಂದಿದ್ದಾರೆ.
ರಾಜ್ಯದಲ್ಲಿ 24 ಸಮುದಾಯ ಬಾನುಲಿ ಕೇಂದ್ರಗಳು ಆರ್ಥಿಕ ಸಂಪನ್ಮೂಲ ಕೊರತೆಯಿಂದ ನಿರ್ವಹಿಸುತ್ತಿದ್ದು ಆರ್ಥಿಕ ಸಂಪನ್ಮೂಲ ಕೊರತೆಯಿಂದ ಬಳಲುತ್ತಿವೆ. ಆದುದರಿಂದ ಈ ಬಗ್ಗೆ ಸರ್ಕಾರದ ಇಲಾಖೆಗಳ ಮೂಲಕ ಜಾಹೀರಾತು ನೆರವು ಕೊಡಿಸುವಂತೆ ಕರ್ನಾಟಕ ಸಮುದಾಯ ಬಾನುಲಿ ಕೇಂದ್ರಗಳ ಸಂಘ ವಿನಂತಿಸಿಕೊಂಡಿದ್ದು, ಅದರ ಮನವಿಯನ್ನು ಇದರೊಂದಿಗೆ ಲಗತ್ತಿಸಿದೆ ಎಂದಿದ್ದಾರೆ.
ಸಮುದಾಯ ಬಾನುಲಿ ಕೇಂದ್ರಗಳನ್ನು ಆರ್ಥಿಕವಾಗಿ ಸಬಲೀಕರಣ ಮಾಡುವ ನಿಟ್ಟಿನಲ್ಲಿ ವಾರ್ತಾ ಇಲಾಖೆ ಮೂಲಕ ಜರೂರು ಕ್ರಮ ತೆಗೆದುಕೊಳ್ಳಬೇಕೆಂದು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ವಿನಂತಿಸುತ್ತಿದೆ ಎಂದು ಹೇಳಿದ್ದಾರೆ.
ದರ್ಶನ್-ಪವಿತ್ರಾ ಲಿವ್ ಇನ್ ರಿಲೇಷನ್ ಶಿಪ್‌ನಲ್ಲಿದ್ದರು: ಸುಪ್ರೀಂ ಕೋರ್ಟ್ ನಲ್ಲಿ ಸರ್ಕಾರದ ಪರ ವಕೀಲ
`ಪ್ಯಾರಸಿಟಮಾಲ್’ ಬಳಸಿ ಬಟ್ಟೆಗಳ ಕಲೆಗಳನ್ನು ತೆಗೆಯಬಹುದು : ವಿಡಿಯೋ ವೈರಲ್ | WATCH VIDEO