ಬೆಂಗಳೂರು: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ( Karnataka Union of Working Journalists – KUWJ) ದ 20 ಜಿಲ್ಲೆಗಳ ಕಾರ್ಯಕಾರಿ ಸಮಿತಿಗಳಿಗೆ ಇಂದು ಮತದಾನ ನಡೆಯುತ್ತಿದ್ದು, ಮದ್ಯಾಹ್ನ 12 ಗಂಟೆ ವೇಳೆಗೆ ಶೇಕಡ 60 ಮತದಾನ ಆಗಿದೆ.
ಬೆಳಗ್ಗೆ 9 ಗಂಟೆಯಿಂದ ಮತದಾನ ಆರಂಭವಾಗಿದ್ದು ಪತ್ರಕರ್ತ ಸದಸ್ಯರು ಉತ್ಸಾಹದಿಂದ ಮತದಾನದಲ್ಲಿ ಪಾಲ್ಗೊಂಡಿದ್ದರು.
ಗದಗ, ಚಿತ್ರದುರ್ಗ,ತುಮಕೂರು, ಕೋಲಾರ ಜಿಲ್ಲಾ ಘಟಕಗಳ ತೀವ್ರ ಪೈಪೋಟಿಯ ಸ್ಪರ್ಧೆ ನಡೆದಿವೆ.
KUWJ ರಾಜ್ಯ ಮುಖ್ಯ ಚುನಾವಣಾಧಿಕಾರಿಗಳಾದ ಎನ್.ರವಿಕುಮಾರ್ ಅವರು ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ , ಕೋಲಾರ ಮಾತಕೇಂದ್ರಗಳಿಗೆ ಭೇಟಿ ನೀಡಿ ಪರಿಶೀಲಿಸಿದರು.
ಮತದಾನ ಮದ್ಯಾಹ್ನ 3 ಗಂಟೆಗೆ ಕೊನೆಗೊಳ್ಳಲಿದ್ದು, ನಂತರ ಮತ ಎಣಿಕೆ ನಡೆಯಲಿದೆ.
ಮತಗಟ್ಟೆಗೆ ಮುಖ್ಯ ಚುನಾವಣಾಧಿಕಾರಿ ರವಿಕುಮಾರ್ ಟೆಲೆಕ್ಸ್ ಭೇಟಿ, ಪರಿಶೀಲನೆ
ಬೆಂಗಳೂರು ಗ್ರಾಮಾಂತರ ಜಿಲ್ಲಾ ಘಟಕದಲ್ಲಿ ನಡೆಯುತ್ತಿದ್ದ ಮತಗಟ್ಟೆಗೆ ಮುಖ್ಯ ಚುನಾವಣಾ ಅಧಿಕಾರಿ ರವಿಕುಮಾರ್ ಟೆಲೆಕ್ಸ್ ಹಾಗೂ ರಾಜ್ಯ ಅಧ್ಯಕ್ಷರಾದಂತ ಶಿವಾನಂದ ತಗಡೂರ ಭೇಟಿ ನೀಡಿ ಪರಿಶೀಲನೆ ನಡೆಸಿದರು.
-ವಸಂತ ಬಿ ಈಶ್ವರಗೆರೆ, ಸಂಪಾದಕರು







