ಬೆಂಗಳೂರು: ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘದ (Karnataka Union of Working Journalists -KUWJ) ನೂತನ ಸಾಲಿನ ಪದಾಧಿಕಾರಿಗಳ ರಾಜ್ಯ ಮಟ್ಟದ ಅಧಿಕಾರ ಸ್ವೀಕಾರ ಸಮಾರಂಭ ನ.24ರಂದು ಬೆಳಿಗ್ಗೆ 11 ಗಂಟೆಗೆ ಗಾಂಧಿ ಭವನದಲ್ಲಿ ಆಯೋಜಿಸಲಾಗಿದೆ.
ಕಾನೂನು ಮತ್ತು ಸಂಸದೀಯ ಸಚಿವರಾದ ಎಚ್.ಕೆ.ಪಾಟೀಲ್ ಅವರು ಕಾರ್ಯಕ್ರಮ ಉದ್ಘಾಟನೆ ಮಾಡಲಿದ್ದು, ಪ್ರಮಾಣ ವಚನ ಬೋಧನೆ ಮಾಡುವರು. ಹಿರಿಯ ಪತ್ರಕರ್ತೆ ನಾಗಮಣಿ ಎಸ್ ರಾವ್, ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಮತ್ತು ಗಾಂಧಿ ಭವನದ ಅಧ್ಯಕ್ಷರಾದ ವೂಡೆ ಪಿ ಕೃಷ್ಣ ಅವರು ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದು, ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷರಾದ ಶಿವಾನಂದ ತಗಡೂರು ಅಧ್ಯಕ್ಷತೆ ವಹಿಸಲಿದ್ದಾರೆ.
ಅಧಿಕಾರ ಸ್ವೀಕಾರ ಸಮಾರಂಭದಲ್ಲಿ ಎಲ್ಲಾ ಜಿಲ್ಲಾ ಘಟಕಗಳ ನೂತನ ಸಾಲಿನ ಪದಾಧಿಕಾರಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಬೇಕು ಎಂದು ಸಂಘದ ಪ್ರಧಾನ ಕಾರ್ಯದರ್ಶಿ ಜಿ.ಸಿ.ಲೋಕೇಶ ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Good News: ಸಹಕಾರ ಸಂಘದ ನೇಮಕಾತಿಗಳಲ್ಲಿ ಸಹಕಾರ ಪದವಿ ಪಡೆದವರಿಗೆ ಆದ್ಯತೆ: ಸಿಎಂ ಸಿದ್ಧರಾಮಯ್ಯ
ರೈಲ್ವೆ ಸುರಕ್ಷತಾ ಕೆಲಸ ಹಿನ್ನಲೆ: ಮೈಸೂರು ವಿಭಾಗದ ಈ ರೈಲುಗಳ ಸಂಚಾರ ರದ್ದು, ನಿಯಂತ್ರಣ








