ಕೋಲ್ಕತಾ : ಮಣಿಪುರ ರಾಜ್ಯಪಾಲ ಲಾ ಗಣೇಶನ್ ಅವ್ರು ಪಶ್ಚಿಮ ಬಂಗಾಳದ ಹಂಗಾಮಿ ರಾಜ್ಯಪಾಲರಾಗಿ ಕೋಲ್ಕತಾದ ರಾಜಭವನದಲ್ಲಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ಸಮ್ಮುಖದಲ್ಲಿ ಸೋಮವಾರ ಪ್ರಮಾಣ ವಚನ ಸ್ವೀಕರಿಸಿದರು. ಬಂಗಾಳದ ಮಾಜಿ ರಾಜ್ಯಪಾಲ ಜಗದೀಪ್ ಧಂಕರ್ ಅವರನ್ನ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಮೈತ್ರಿಕೂಟ (ಎನ್ಡಿಎ) ಉಪಾಧ್ಯಕ್ಷ ಅಭ್ಯರ್ಥಿಯಾಗಿ ನಾಮನಿರ್ದೇಶನ ಮಾಡಿದ ನಂತರ ಈ ಬೆಳವಣಿಗೆ ನಡೆದಿದೆ.
ಲಾ ಗಣೇಶನ್ ಅವರು ಬಿಜೆಪಿಯ ಹಿರಿಯ ನಾಯಕ ಮತ್ತು ತಮಿಳುನಾಡಿನ ಮಾಜಿ ಆರ್ಎಸ್ಎಸ್ ಪ್ರಚಾರಕರಾಗಿದ್ದಾರೆ. ಆಗಸ್ಟ್ 10 ರಂದು ನಜ್ಮಾ ಹೆಪ್ತುಲ್ಲಾ ಅವರ ನಿವೃತ್ತಿಯ ನಂತರ ಈ ಹುದ್ದೆ ಖಾಲಿಯಾದ ನಂತರ ಗಣೇಶನ್ ಅವರನ್ನು 2021 ರಲ್ಲಿ ಮಣಿಪುರ ರಾಜ್ಯಪಾಲರಾಗಿ ನೇಮಿಸಲಾಯಿತು.
ಗಣೇಶನ್, ಬಿಜೆಪಿ ತಮಿಳುನಾಡು ಘಟಕದ ಪ್ರಧಾನ ಕಾರ್ಯದರ್ಶಿಯಾಗಿ ನೇಮಕಗೊಳ್ಳುವ ಮೊದಲು ಆರ್ಎಸ್ಎಸ್ ಪ್ರಚಾರಕರಾಗಿದ್ದರು. ಅವರು ರಾಷ್ಟ್ರೀಯ ಮತ್ತು ರಾಜ್ಯ ಮಟ್ಟದಲ್ಲಿ ಹಲವಾರು ಹುದ್ದೆಗಳಲ್ಲಿ ಪಕ್ಷದಲ್ಲಿ ಕೆಲಸ ಮಾಡಿದ್ದು, ಸಂಸತ್ತಿನ ಮೇಲ್ಮನೆಯಲ್ಲಿ ಮಧ್ಯಪ್ರದೇಶವನ್ನ ಪ್ರತಿನಿಧಿಸಿದ್ದರು.
ಇದಕ್ಕೂ ಮುನ್ನ ಪ್ರಧಾನಿ ನರೇಂದ್ರ ಮೋದಿ ಮತ್ತು ಇತರ ಹಿರಿಯ ಕೇಂದ್ರ ಸಚಿವರ ಸಮ್ಮುಖದಲ್ಲಿ ಜಗದೀಪ್ ಧಂಕರ್ ನಾಮಪತ್ರ ಸಲ್ಲಿಸಿದರು. ಪ್ರಜಾಪ್ರಭುತ್ವದ ಮೌಲ್ಯಗಳನ್ನು ಹೆಚ್ಚಿಸಲು ತಾನು ಯಾವಾಗಲೂ ಶ್ರಮಿಸುತ್ತೇನೆ ಎಂದು 71 ವರ್ಷದ ಗಣೇಶನ್ ಹೇಳಿದರು.