ಕಲಬುರಗಿ: ಆಳಂದ ಪಟ್ಟಣದ ಲಾಡ್ಲೆ ಮಶಾಕ್ ದರ್ಗಾದ ಆವರಣದಲ್ಲಿ ಶಿವಲಿಂಗ ಎನ್ನಲಾಗುತ್ತಿರುವ ರಾಘವ ಚೈತನ್ಯ ಶಿವಲಿಂಗಕ್ಕೆ ಮಾರ್ಚ್ 8 ರಂದು ಶಿವರಾತ್ರಿ ನಿಮಿತ್ತ ಪೂಜೆ ಸಲ್ಲಿಸಲು ಶರತ್ತು ಬದ್ಧ ಅನುಮತಿ ನೀಡಿ ಕಲಬುರಗಿ ಉಚ್ಚ ನ್ಯಾಯಾಲಯ ಪೀಠ ಆದೇಶ ಹೊರಡಿಸಿದೆ.
BREAKING : ಧಾರವಾಡ ಪ್ರವೇಶಿಸಲು ‘ವಿನಯ್ ಕುಲಕರ್ಣಿ’ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ‘ಸುಪ್ರೀಂ ಕೋರ್ಟ್’
ದರ್ಗಾದ ಆವರಣದಲ್ಲಿ ಮಹಾಶಿವರಾತ್ರಿಯ ದಿನವಾದ ಶುಕ್ರವಾರದಂದು ಮಧ್ಯಾಹ್ನದ ನಂತರ ಪೂಜೆಗೆ 15ಜನ ಹಿಂದೂಗಳಿಗೆ ಅವಕಾಶ ಕೊಟ್ಟಿದೆ. ಪೂಜೆ ಸಲ್ಲಿಸುವ 15 ಜನರ ಪಟ್ಟಿಯನ್ನು ಸಲ್ಲಿಸುವಂತೆ ನ್ಯಾಯಾಲಯವು ಸೂಚಿಸಿದೆ. ಇಲ್ಲದಿದ್ದರೆ ಅನುಮತಿ ನೀಡಲಾಗುವುದಿಲ್ಲ ಎಂದು ಸೂಚಿಸಿದೆ.
ಸಾರ್ವಜನಿಕರೇ ಗಮನಿಸಿ: ಬೇಸಿಗೆ ಕಾಲದಲ್ಲಿ ಏನು ಮಾಡಬೇಕು? ಏನು ಮಾಡಬಾರದು? ಇಲ್ಲಿದೆ ಆರೋಗ್ಯ ಇಲಾಖೆಯ ಮಾರ್ಗಸೂಚಿ!
ಕಳೆದ ಬಾರಿಯೂ ಸಹ ಇದೇ ರೀತಿಯಲ್ಲಿ ಉಚ್ಚ ನ್ಯಾಯಾಲಯವು ಅನುಮತಿ ಕೊಟ್ಟಿದ್ದು, ಆದಾಗ್ಯೂ, ಪೂಜೆಯ ನಂತರದಲ್ಲಿ ಹಿಂಸಾತ್ಮಕ ಘಟನೆಗಳು ಸಂಭವಿಸಿದ್ದವು. ಕೇಂದ್ರ ಸಚಿವ ಭಗವಂತ್ ಖೂಬಾ, ಶಾಸಕರಾಗಿದ್ದ ಬಸವರಾಜ್ ಮತ್ತಿಮೂಡ್, ಜಿಲ್ಲಾಧಿಕಾರಿ, ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿಗಳ ಕಾರುಗಳ ಮೇಲೆ ಕಲ್ಲು ತೂರಾಟ ನಡೆದಿತ್ತು. ಈ ಬಾರಿ ಹಿಂದಿನ ಹಿಂಸಾತ್ಮಕ ಘಟನೆಗಳು ಸಂಭವಿಸದಂತೆ ಸೂಕ್ತ ಬಂದೋಬಸ್ತ್ ಕಲ್ಪಿಸಬೇಕು ಎಂದು ನ್ಯಾಯಾಲಯವು ಜಿಲ್ಲಾಡಳಿತಕ್ಕೆ ಸೂಚಿಸಿದೆ.
ಈಗಾಗಲೇ ವಕ್ಸ್ ನ್ಯಾಯ ಮಂಡಳಿಯು ಲಾಡ್ಲೆ ಮಶಾಕ್ ದರ್ಗಾದಲ್ಲಿ ಮಹಾ ಶಿವರಾತ್ರಿಯಂದು ಹಿಂದೂಗಳು ರಾಘವ ಚೈತನ್ಯರ ಲಿಂಗಕ್ಕೆ ಪೂಜೆ ಸಲ್ಲಿಸುವುದಕ್ಕೆ ಅನುಮತಿ ನಿರಾಕರಿಸಿತ್ತು. ಈಗ ಉಚ್ಚ ನ್ಯಾಯಾಲಯದ ತೀರ್ಪಿನಿಂದಾಗಿ ವಕ್ಸ್ ನ್ಯಾಯ ಮಂಡಳಿಯ ತೀರ್ಪಿಗೆ ಹಿನ್ನಡೆಯಾಗಿದೆ.