ಖಾಸಗಿ ಪ್ರಯೋಗ ಶಾಲಾ ತಂತ್ರಜ್ಞರು, ಡೇಟಾ ಎಂಟ್ರಿ ಆಪರೇಟರ್‍ ಗಳ ನೇಮಕಕ್ಕೆ ಅರ್ಜಿ ಆಹ್ವಾನ – Kannada News Now


Jobs State

ಖಾಸಗಿ ಪ್ರಯೋಗ ಶಾಲಾ ತಂತ್ರಜ್ಞರು, ಡೇಟಾ ಎಂಟ್ರಿ ಆಪರೇಟರ್‍ ಗಳ ನೇಮಕಕ್ಕೆ ಅರ್ಜಿ ಆಹ್ವಾನ

ಮೈಸೂರು : ಕೋವಿಡ್-19 ಸೋಂಕು ತಡೆಗಟ್ಟುವ ಉದ್ದೇಶದಿಂದ ಕೋವಿಡ್ ಸೋಂಕು ಸಂಬಂಧಪಟ್ಟಂತೆ ಪರೀಕ್ಷೆಗಳನ್ನು ಹೆಚ್ಚುಗೊಳಿಸುವ ಅಗತ್ಯತೆ ಇರುವುದರಿಂದ ಆರೋಗ್ಯ ಇಲಾಖೆಯಲ್ಲಿ ಸಿಬ್ಬಂದಿಗಳ ಕೊರತೆ ಹಿನ್ನೆಲೆ ಖಾಸಗಿ ಪ್ರಯೋಗ ಶಾಲಾ ತಂತ್ರಜ್ಞರು ಹಾಗೂ ದತ್ತಾಂಶ ನಮೂದಕರನ್ನು (Data Entry Operators) ನೇಮಿಸಿಕೊಳ್ಳಲು ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ.

ರಾಜ್ಯ ಆರೋಗ್ಯ ಇಲಾಖೆ ಗುತ್ತಿಗೆ, ಹೊರಗುತ್ತಿಗೆ ನೌಕರರ ಪ್ರತಿಭಟನೆ ಹಿಂಪಡೆದಿಲ್ಲ – ಸಂಘದ ರಾಜ್ಯಾಧ್ಯಕ್ಷ ವಿಶ್ವರಾಧ್ಯ ಸ್ಪಷ್ಟನೆ

ಪ್ರಯೋಗ ಶಾಲಾ ತಂತ್ರಜ್ಞರು ಲಭ್ಯವಿಲ್ಲದಿದ್ದಲ್ಲಿ Nursing and Paramedical personnel, Diploma Holders, ವಿಜ್ಞಾನ ಪದವೀಧರರನ್ನು ನಿಯೋಜಿಸಿಕೊಳ್ಳಲು ಅವಕಾಶ ಕಲ್ಪಿಸಲಾಗಿದೆ.

ಕೊರೋನಾ ಪರೀಕ್ಷೆಗೆ ನೇಮಕ ಮಾಡಿಕೊಳ್ಳಲಾಗುವವರಿಗೆ ಸರ್ಕಾರವು ನಿಗದಿಪಡಿಸಿರುವ ದರದಲ್ಲಿ ಪ್ರಯೋಗ ಶಾಲಾ ತಂತ್ರಜ್ಞರಿಗೆ 10,000 ರೂ. ಜೊತೆಗೆ ಪ್ರತಿ ಗಂಟಲುದ್ರವ ತೆಗೆಯುವಿಕೆಗೆ 15 ರೂ, ಹಾಗೂ ದತ್ತಾಂಶ ನಮೂದಕರಿಗೆ 14,000 ರೂ. ಸಂಭಾವನೆಯನ್ನು ಮಾಸಿಕವಾಗಿ ನೀಡಲಾಗುವುದು.

BIG BREAKING : ಖ್ಯಾತ ಗಾಯಕ ‘ಎಸ್ ಪಿ ಬಾಲಸುಬ್ರಹ್ಮಣ್ಯಂ’ ವಿಧಿವಶ

ಆಸಕ್ತರು ಸೆಪ್ಟೆಂಬರ್ 30 ರೊಳಗೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಚೇರಿ ಅಥವಾ ಸಂಬಂಧಪಟ್ಟ ತಾಲ್ಲೂಕು ವೈದ್ಯಾಧಿಕಾರಿಗಳ ಕಚೇರಿಯಲ್ಲಿ ಅಗತ್ಯ ದಾಖಲಾತಿಗಳೊಂದಿಗೆ ಮನವಿಯನ್ನು ಸಲ್ಲಿಸಿ ನೋಂದಾಯಿಸಿಕೊಳ್ಳುವಂತೆ ಜಿಲ್ಲಾಧಿಕಾರಿಗಳಾದ ಶರತ್ ಬಿ. ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.




error: Content is protected !!