ಕೆಎನ್ಎನ್ಡಿಜಿಟಲ್ ಡೆಸ್ಕ್ : ಕೇಂದ್ರ ಮತ್ತು ರಾಜ್ಯ ಸರಕಾರಗಳು ಮಹಿಳೆಯರ ಸ್ವಾವಲಂಬನೆಗಾಗಿ ಹಲವು ಯೋಜನೆಗಳನ್ನ ಜಾರಿಗೊಳಿಸುತ್ತಿವೆ. ಬಡ ಮತ್ತು ಮಧ್ಯಮ ವರ್ಗದ ಜನರಿಗೆ ಅನುಕೂಲ ಕಲ್ಪಿಸಲು ಈ ಯೋಜನೆಗಳನ್ನ ಜಾರಿಗೊಳಿಸಲಾಗಿದೆ. ಇದರ ಭಾಗವಾಗಿ ಕೇಂದ್ರ ಸರ್ಕಾರ ಮಹತ್ತರವಾದ ಉಚಿತ ಹೊಲಿಗೆ ಯಂತ್ರ ವಿತರಣಾ ಯೋಜನೆಯನ್ನ ಜಾರಿಗೆ ತಂದಿದೆ. ಈ ಯೋಜನೆಯಡಿ, ಅರ್ಹ ಮಹಿಳೆಯರಿಗೆ ಸರ್ಕಾರವು ಉಚಿತ ಹೊಲಿಗೆ ಯಂತ್ರಗಳನ್ನ ನೀಡುತ್ತದೆ. ಇದು ಸಂಪೂರ್ಣವಾಗಿ ಉಚಿತವಾಗಿದೆ.
ಅರ್ಹ ಮಹಿಳೆಯರಿಗೆ ಮಾತ್ರ ಈ ಯೋಜನೆಯಡಿ ಹೊಲಿಗೆ ಯಂತ್ರಗಳನ್ನು ವಿತರಿಸಲಾಗುವುದು. ಅದ್ರಂತೆ, ಮಹಿಳೆಯರು ತಮ್ಮ ಅರ್ಹತೆಯ ಆಧಾರದ ಮೇಲೆ ಅರ್ಜಿ ಸಲ್ಲಿಸಿದ್ರೆ, ಸರ್ಕಾರ ಅವರಿಗೆ ಹೊಲಿಗೆ ಯಂತ್ರಗಳನ್ನ ನೀಡುತ್ತದೆ. ಈ ಉಚಿತ ಹೊಲಿಗೆ ಯಂತ್ರಗಳನ್ನ ಪಡೆಯಲು ಅರ್ಹತೆಗಳೇನು? ಯಾವ ರೀತಿಯ ಅರ್ಜಿ ಸಲ್ಲಿಸಬೇಕು? ಸಂಪೂರ್ಣ ವಿವರ ಮುಂದಿದೆ.
ಯೋಜನೆಯಡಿ ಉಚಿತ ಹೊಲಿಗೆ ಯಂತ್ರ ಪಡೆಯಲು ಬೇಕಾದ ಅರ್ಹತೆ..!
* 20 ರಿಂದ 40 ವರ್ಷ ವಯಸ್ಸಿನ ಮಹಿಳೆಯರು
* ಕಾರ್ಮಿಕರು, ಕುಟುಂಬದ ಆದಾಯ 12 ಸಾವಿರ ರೂಪಾಯಿಗಿಂತ ಹೆಚ್ಚಿರಬಾರದು.
* ಗ್ರಾಮೀಣ ಮತ್ತು ನಗರ ಪ್ರದೇಶಗಳಲ್ಲಿ ವಾಸಿಸುವ ಬಡ ಮಹಿಳೆಯರು ಈ ಯೋಜನೆಗೆ ಅರ್ಹರು.
* ಆರ್ಥಿಕವಾಗಿ ದುರ್ಬಲವಾಗಿರುವ ಮಹಿಳೆಯರು ಈ ಯೋಜನೆಗೆ ಅರ್ಹರು.
ಈ ರೀತಿ ಅರ್ಜಿ ಸಲ್ಲಿಸಿ.!
1. ಉಚಿತ ಹೊಲಿಗೆ ಯಂತ್ರವನ್ನು ಪಡೆಯಲು ಮೊದಲು ಅಧಿಕೃತ ವೆಬ್ಸೈಟ್ www.india.gov.in ಗೆ ಹೋಗಿ.
2. ಅದರ ನಂತರ ಉಚಿತ ಹೊಲಿಗೆ ಯಂತ್ರ ಯೋಜನೆಗೆ ಸಂಬಂಧಿಸಿದ ಅಪ್ಲಿಕೇಶನ್ ಇಲ್ಲಿರುತ್ತೆ. ಫಾರ್ಮ್ ಡೌನ್ಲೋಡ್ ಮಾಡಿಕೊಂಡು, ಭರ್ತಿ ಮಾಡಿ. ಭರ್ತಿ ಮಾಡಿದ ನಮೂನೆಯೊಂದಿಗೆ ಅಗತ್ಯ ಪ್ರಮಾಣಪತ್ರಗಳನ್ನ ಲಗತ್ತಿಸಬೇಕು.
3. ನಮೂನೆ ಮತ್ತು ಪ್ರಮಾಣಪತ್ರಗಳನ್ನು ಲಗತ್ತಿಸಿ ಮತ್ತು ಸಂಬಂಧಪಟ್ಟ ಕಚೇರಿಯಲ್ಲಿ ಸಲ್ಲಿಸಿ. ಈ ಅರ್ಜಿಯನ್ನು ಅಧಿಕಾರಿಗಳು ಪರಿಶೀಲಿಸಿ ಅನುಮೋದನೆ ನೀಡಿದ್ರೆ, ನಿಮಗೆ ಉಚಿತವಾಗಿ ಹೊಲಿಗೆ ಯಂತ್ರ ನೀಡಲಾಗುತ್ತೆ.