ಮಂಗಳೂರು : ಗುಂಡು ಹಾರಿಸಿಕೊಂಡು ಮಹಿಳಾ ಪಿಎಸ್ಐ ಒಬ್ಬರು ಆತ್ಮಹತ್ಯೆಗೆ ಯತ್ನಿಸಿದ ಘಟನೆ ಮಂಗಳೂರಿನಲ್ಲಿ ನಡೆದಿದೆ.
ಆತ್ಮಹತ್ಯೆಗೆ ಯತ್ನಿಸಿದವರನ್ನು ಜ್ಯೋತಿ (36) ಎಂದು ಗುರುತಿಸಲಾಗಿದೆ. ಪಣಂಬೂರು ನವಮಂಗಳೂರು ಬಂದರು ಪ್ರಾಧಿಕಾರದ ಮೊದಲ ಗೇಟ್ ನಲ್ಲಿ ಕರ್ತವ್ಯ ನಿರತ ಸಿಐಎಸ್ಎಫ್ ನ ಪಿಎಸ್ಐ ಜ್ಯೋತಿ ಡೆತ್ ನೋಟ್ ಬರೆದಿಟ್ಟು ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾರೆ.
ಗುಂಡೇಟಿನಿಂದ ಗಂಭೀರವಾಗಿ ಗಾಯಗೊಂಡಿದ್ದ ಜ್ಯೊತಿ ಅವರನ್ನು ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಕೌಟುಂಬಿಕ ಕಲಹದಿಂದ ಬೇಸತ್ತು ಈ ಕೃತ್ಯ ಎಸಗಿದ್ದಾರೆ ಎನ್ನಲಾಗಿದೆ. ಪಣಂಬೂರು ಪೊಲೀಸರು ತನಿಖೆ ಮುಂದುವರೆಸಿದ್ದಾರೆ. ಸದ್ಯಅವರ ಸ್ಥಿತಿ ಗಂಭೀರವಾಗಿದೆ ಎನ್ನಲಾಗಿದೆ.
BIGG NEWS: ಬೆಂಗಳೂರಿನಲ್ಲಿ ಕುಡಿದ ಮತ್ತಿನಲ್ಲಿ ಅಡ್ಡಾದಿಡ್ಡಿ ಕಾರು ಸಂಚಾರ; ನಿವೃತ್ತ ಯೋಧ ಸಾವು