ಬೆಂಗಳೂರು : ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಸುರಿದ ಭಾರಿ ಮಳೆಯಿಂದ ಬೆಂಗಳೂರಿನಲ್ಲಿ ಪ್ರವಾಹ ಸ್ಥಿತಿ ನಿರ್ಮಾಣವಾಗಿದೆ. ಈ ಹಿನ್ನೆಲೆ ಅರೆಬರೆ ಒತ್ತುವರಿ ತೆರವಿಗೆ ಹೈಕೋರ್ಟ್(High Court) ಅಸಮಾಧಾನ ಹೊರ ಹಾಕಿದೆ.
ರಾಜಕಾಲುವೆ ಒತ್ತುವರಿ ಕುರಿತಾದ ಸಿಎಜಿ ವರದಿ ಜಾರಿಗೊಳಿಸಿ ಬಿಬಿಎಂಪಿಗೆ ಹೈಕೋರ್ಟ್ ವಿಭಾಗೀಯ ಪೀಠ ನಿರ್ದೇಶನ ನೀಡಿದೆ. 2021ರ ಸೆಪ್ಟೆಂಬರ್ನಲ್ಲೇ ಸಿಎಜಿ ವರದಿ ನೀಡಿದ್ರೂ ಕ್ರಮ ಕೈಗೊಂಡಿಲ್ಲ ಎಂದು ಸಿಎಜಿ ವರದಿ ಜಾರಿಗೆ 3 ಅಧಿಕಾರಿಗಳ ಸಮಿತಿ ರಚಿಸಲು ಸೂಚನೆ ನೀಡಿದೆ.
ಸಮಿತಿಯು ಸಿಎಜಿ ವರದಿ ಜಾರಿ ಬಗ್ಗೆ ನಿಗಾ ವಹಿಸಬೇಕು. 15 ದಿನಗಳಿಗೊಮ್ಮೆ ಹೈಕೋರ್ಟ್ಗೆ ವರದಿ ಸಲ್ಲಿಸಲು ಸೂಚಿಸಲಾಗಿದೆ. ಎಲ್ಲ ಒತ್ತುವರಿ ತೆರವುಗೊಳಿಸಿ 15 ದಿನಕ್ಕೊಮ್ಮೆ ವರದಿ ಸಲ್ಲಿಸಬೇಕು. ಹೈಕೋರ್ಟ್ ಆದೇಶ ಪಾಲಿಸದಿದ್ರೆ ಗಂಭೀರವಾಗಿ ಪರಿಗಣಿಸಲಾಗುವುದು ಎಂದು ಹೈಕೋರ್ಟ್ ಖಡಕ್ ಆದೇಶ ಹೊರಡಿಸಿದೆ.
ಇನ್ನೂ, ಬೆಂಗಳೂರಿನಲ್ಲಿ ಕೆರೆ ಒತ್ತುವರಿ ಕುರಿತು ತನಿಖೆ ಮಾಡಲು ರಾಜ್ಯ ಸರ್ಕಾರವು ಸಿದ್ಧವಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಣೆ ಮಾಡಿದ್ದಾರೆ. ಕೆರೆ ಒತ್ತುವರಿ ಕುರಿತು ತನಿಖೆ ಮಾಡಲು ಸರ್ಕಾರ ಸಿದ್ದವಾಗಿದ್ದು, ಒತ್ತುವರಿ ಬಗ್ಗೆ ತನಿಖೆ ಮಾಡಿಯೇ ಮಾಡುತ್ತೇವೆ. ತನಿಖೆಯ ಸ್ವರೂಪದ ಕುರಿತು ಮುಂದೆ ಮಾಹಿತಿ ನೀಡುತ್ತೇನೆ. ಕೆರೆ ಯಾವ ರೀತಿ ಒತ್ತುವರಿ ಮಾಡಲಾಯ್ತು? ಕೆರೆಗಳನ್ನು ಹೇಗೆ ಮುಚ್ಚಲಾಯ್ತು? ಅನುಮತಿ ಕೊಟ್ಟವರು ಯಾರು? ಈ ಎಲ್ಲದರ ಬಗ್ಗೆಯೂ ತನಿಖೆ ಮಾಡಲಾಗುತ್ತದೆ ಎಂದರು.
‘ಅಲ್ಪಸಂಖ್ಯಾತ’ ಸಮುದಾಯದ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ : ‘ವಿದ್ಯಾಸಿರಿ’ ವಿದ್ಯಾರ್ಥಿ ವೇತನಕ್ಕಾಗಿ ಅರ್ಜಿ ಆಹ್ವಾನ