ಬೆಂಗಳೂರು : ಇಂದು 24 ಮಂದಿ ನೂತನ ಸಚಿವರು ಪ್ರಮಾಣ ವಚನ ಸ್ವೀಕರಿಸಲಿದ್ದು, ರಾಜಭವನದದಲ್ಲಿ ಪದಗ್ರಹಣ ಸಮಾರಂಭಕ್ಕೆ ಕ್ಷಣಗಣನೆ ಆರಂಭವಾಗಿದೆ.
ಲಕ್ಷ್ಮಣ ಸವದಿಗೆ ಸಚಿವ ಸ್ಥಾನ ಕೈ ತಪ್ಪಿದ ಹಿನ್ನೆಲೆ ಅಸಮಾಧಾನ ಸ್ಪೋಟವಾಗಿದೆ. ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಹಾಕಿ ಬೆಂಬಲಿಗರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಬೆಳಗಾವಿ ಜಿಲ್ಲೆಯಲ್ಲಿ ಕಾಂಗ್ರೆಸ್ಗೆ ಹೆಚ್ಚು ಸ್ಥಾನ ಬರಲು ಲಕ್ಷ್ಮಣ ಸವದಿ ಕಾರಣ. ಆದರೆ ಲಕ್ಷ್ಮಣ ಸವದಿಗೆ ಮೋಸ ಮಾಡಲಾಗಿದೆ. ಅವರಿಗೆ ಸಚಿವ ಸ್ಥಾನ ನೀಡಬೇಕಿತ್ತು, ಆದರೆ ಮಂತ್ರಿ ಆಗದಂತೆ ಕೆಲವರು ಕುತಂತ್ರ ನಡೆಸಿದ್ದಾರೆಂದು ಆರೋಪ ಮಾಡಿದ್ದಾರೆ. ಲಕ್ಷ್ಮಣ ಸವದಿಗೆ ಸಚಿವ ಸ್ಥಾನ ಕೈ ತಪ್ಪಿದ ಹಿನ್ನೆಲೆ ಸಿಎಂ ಸಿದ್ದರಾಮಯ್ಯ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಹಾಕಿ ಆಕ್ರೋಶ ಹೊರ ಹಾಕಿದ್ದಾರೆ.
ಮುಖ್ಯಮಂತ್ರಿ ಸಿದ್ಧರಾಮಯ್ಯ ಸಚಿವ ಸಂಪುಟಕ್ಕೆ ಮೊದಲ ಬಾರಿಗೆ 8 ಶಾಸಕರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ್ದರು. ಈ ಬೆನ್ನಲ್ಲೇ ಇಂದು ನೂತನ ಸಚಿವರಾಗಿ 24 ಮಂದಿ ಶಾಸಕರು ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಹೌದು, ಇಂದು 24 ಮಂದಿ ನೂತನ ಸಚಿವರು ಸಿದ್ದರಾಮಯ್ಯ ಸಂಪುಟ ಸೇರಲಿದ್ದಾರೆ.
BREAKING NEWS : ತೆಲುಗು, ಕನ್ನಡ ಚಿತ್ರರಂಗದ ಜನಪ್ರಿಯ ನಿರ್ದೇಶಕ ಕೆ.ವಾಸು ಇನ್ನಿಲ್ಲ |Director K.Vasu No More
‘ಸರ್ಕಾರಿ ಬಸ್ ನಲ್ಲಿ ಮಹಿಳೆಯ ಜಡೆ ಸವರಿ ಪುಂಡಾಟ’ : ಕಾಮುಕನ ಬೆನ್ನು ಬಿದ್ದ ಪೊಲೀಸರು