ಬೆಂಗಳೂರು: ನಾಳೆಯಿಂದ ಬೆಂಗಳೂರಿನ ಲಾಲ್ ಬಾಗ್ ನಲ್ಲಿ ಗಣರಾಜ್ಯೋತ್ಸವದ ಪ್ರಯುಕ್ತ ತೇಜಸ್ವಿ-ವಿಸ್ಮಯ ವಿಷಯಾಧಾರಿತ ಲಾಲ್ ಬಾಗ್ ಫಲಪುಷ್ಪ ಪ್ರದರ್ಶನ ಆರಂಭಗೊಳ್ಳಲಿದೆ.
ಕೆ.ಪಿ.ಪೂರ್ಣಚಂದ್ರ ತೇಜಸ್ವಿ ಬದುಕು–ಬರಹ ವಿಷಯ ಆಧಾರಿತ ಗಣರಾಜ್ಯೋತ್ಸವ ಫಲಪುಷ್ಪ ಪ್ರದರ್ಶನವು ಲಾಲ್‌ಬಾಗ್‌ನಲ್ಲಿ ಜ.14ರಿಂದ 26ರವರೆಗೆ ನಡೆಯಲಿದೆ. ಈ ಪ್ರದರ್ಶನಕ್ಕೆ ಪೂರಕವಾಗಿ ವಿವಿಧ ಪುಷ್ಪಾಧಾರಿತ ಕಲೆಗಳ (ಇಕೆಬಾನ, ಜಾನೂರ್, ಥಾಯ್ ಆರ್ಟ್, ತರಕಾರಿ ಕೆತ್ತನೆ, ಪುಷ್ಪ ರಂಗೋಲಿ) ಪ್ರದರ್ಶನ ಹಾಗೂ ಸ್ಪರ್ಧೆಗಳನ್ನು ಏರ್ಪಡಿಸಲಾಗಿದೆ.
ಸ್ಪರ್ಧೆಗಳಲ್ಲಿ ಭಾಗವಹಿಸಲು ಆಸಕ್ತರು ಹಾಗೂ ಪ್ರದರ್ಶಕರು ಜನವರಿ 14ರೊಳಗಾಗಿ ಅರ್ಜಿ ಸಲ್ಲಿಸಿ. ತೋಟಗಾರಿಕೆ ಅಪರ ನಿರ್ದೇಶಕರ ಕಚೇರಿ (ಯೋಜನೆ), ಲಾಲ್‌ಬಾಗ್, ಬೆಂಗಳೂರು ಇವರಿಂದ ಅರ್ಜಿಯನ್ನು ಪಡೆಯಬಹುದು.
ಕೆ.ಪಿ.ಪೂರ್ಣಚಂದ್ರ ತೇಜಸ್ವಿ ಬದುಕು–ಬರಹ ವಿಷಯ ಆಧಾರಿತ ಗಣರಾಜ್ಯೋತ್ಸವ ಫಲಪುಷ್ಪ ಪ್ರದರ್ಶನವು ಲಾಲ್‌ಬಾಗ್‌ನಲ್ಲಿ ಜ.14ರಿಂದ 26ರವರೆಗೆ ನಡೆಯಲಿದೆ. ಈ ಪ್ರದರ್ಶನಕ್ಕೆ ಪೂರಕವಾಗಿ ವಿವಿಧ ಪುಷ್ಪಾಧಾರಿತ ಕಲೆಗಳ (ಇಕೆಬಾನ, ಜಾನೂರ್, ಥಾಯ್ ಆರ್ಟ್, ತರಕಾರಿ ಕೆತ್ತನೆ, ಪುಷ್ಪ ರಂಗೋಲಿ) ಪ್ರದರ್ಶನ ಹಾಗೂ ಸ್ಪರ್ಧೆಗಳನ್ನು ಏರ್ಪಡಿಸಲಾಗಿದೆ.… pic.twitter.com/3cNIC17cQC
— DIPR Karnataka (@KarnatakaVarthe) January 13, 2026








