ಬೆಂಗಳೂರು: ಗಣರಾಜ್ಯೋತ್ಸವದ ಪ್ರಯುಕ್ತ ನಾಳೆಯಿಂದ ಲಾಲ್ ಬಾಗ್ ಫಲ ಪುಷ್ಪ ಪ್ರದರ್ಶನ ನಡೆಯಲಿದೆ. ಜನವರಿ 14ರ ನಾಳೆಯಿಂದ ಜನವರಿ.26ರವರೆಗೆ ನಡೆಯಲಿದೆ.
ಈ ಕುರಿತಂತೆ ತೋಟಗಾರಿಕಾ ಇಲಾಖೆಯಿಂದ ಮಾಹಿತಿ ನೀಡಿದ್ದು, ಜನವರಿ.14ರಿಂದ 26ರವರೆಗೆ ಲಾಲ್ ಬಾಗ್ ಗಣರಾಜ್ಯೋತ್ಸವ ಫಲಪುಷ್ಪ ಪ್ರದರ್ಶನ ಏರ್ಪಡಿಸಲಾಗಿದೆ. 3.2 ಕೋಟಿದಿಂದ ಆಯೋಜಿಸಲಾಗಿದೆ. 35 ಲಕ್ಷಕ್ಕೂ ಹೆಚ್ಚು ಪ್ರದರ್ಶನಕ್ಕೆ ಹೂವುಗಳನ್ನು ಬಳಕೆ ಮಾಡಲಾಗಿದೆ. 136 ಉದ್ಯಾನದಲ್ಲಿ ಸಿಸಿಟಿವಿ ಸುರಕ್ಷತೆಗಾಗಿ ಅಳವಡಿಸಲಾಗಿದೆ ಎಂದಿದೆ.
ಲಾಲ್ ಬಾಗ್ ಫಲಪುಷ್ಪ ಪ್ರದರ್ಶನಕ್ಕೆ ವಯಸ್ಕರಿಗೆ 80 ರೂಪಾಯಿ, ರಜಾ ದಿನಗಳಲ್ಲಿ 100 ರುಪಾಯಿ ಹಾಗೂ ಮಕ್ಕಳಿಗೆ 30 ರೂಪಾಯಿ ನಿಗದಿ ಪಡಿಸಲಾಗಿದೆ. ಸಮವಸ್ತ್ರ ಧರಿಸಿ ಬರುವ ಎಲ್ಲಾ ಶಾಲಾ ವಿದ್ಯಾರ್ಥಿಗಳಿಗೆ ಉಚಿತ ಪ್ರವೇಶ ಇರಲಿದೆ ಎಂದು ತಿಳಿಸಿದೆ.
ನಾಳೆಯಿಂದ ಆರಂಭಗೊಳ್ಳುತ್ತಿರುವಂತ ಲಾಲ್ ಬಾಗ್ ಫಲಪುಷ್ಪ ಪ್ರದರ್ಶನವು ಬೆಳಗ್ಗೆ 6ರಿಂದ ಸಂಜೆ 7ರವರೆಗೆ ಇರಲಿದೆ. ಟಿಕೆಟ್ ಗಳನ್ನು ಲಾಲ್ ಬಾಗ್ ಗೇಟ್ ನಲ್ಲಿನ ಟಿಕೆಟ್ ಕೌಂಟರ್ ನಲ್ಲಿ ಖರೀದಿಸಬಹುದಾಗಿ ಎಂದಿದೆ.
ಕೆ.ಪಿ.ಪೂರ್ಣಚಂದ್ರ ತೇಜಸ್ವಿ ಬದುಕು–ಬರಹ ವಿಷಯ ಆಧಾರಿತ ಗಣರಾಜ್ಯೋತ್ಸವ ಫಲಪುಷ್ಪ ಪ್ರದರ್ಶನವು ಲಾಲ್‌ಬಾಗ್‌ನಲ್ಲಿ ಜ.14ರಿಂದ 26ರವರೆಗೆ ನಡೆಯಲಿದೆ.#Lalbagh #FlowerShow pic.twitter.com/2Rz0gDPuY1
— DIPR Karnataka (@KarnatakaVarthe) January 13, 2026








