Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಗ್ರೇಟರ್ ಬೆಂಗಳೂರು ಜೆಡಿಎಸ್ ಸಮಾವೇಶಕ್ಕೆ ಬರದ ಸಿದ್ಧತೆ: ಮಹಿಳಾ ವಿಭಾಗದ ಸಭೆ ನಡೆಸಿದ ಹೆಚ್.ಎಂ.ರಮೇಶ್ ಗೌಡ

09/04/2026 9:44 PM

40ನೇ ರಾಜ್ಯ ಪತ್ರಕರ್ತರ ಸಮ್ಮೇಳನಕ್ಕೆ ಸರ್ವ ಸಜ್ಜಾದ ಬೀದರ್: ಏ.11ರಂದು ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆಶಿ ಉದ್ಘಾಟನೆ

09/04/2026 9:38 PM

BREAKING: ಮುಂಬೈ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್-1ರಲ್ಲಿ ಅಗ್ನಿ ಅವಘಡ

09/04/2026 9:07 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಇಂದಿನಿಂದ ಬೆಂಗಳೂರಲ್ಲಿ ‘ಲಾಲ್ ಬಾಗ್ ಫಲಪುಷ್ಪ ಪ್ರದರ್ಶನ’ ಆರಂಭ: ಈ ಸಂಚಾರ ಮಾರ್ಗ ಬದಲಾವಣೆ | Lalbag Flower Show
KARNATAKA

ಇಂದಿನಿಂದ ಬೆಂಗಳೂರಲ್ಲಿ ‘ಲಾಲ್ ಬಾಗ್ ಫಲಪುಷ್ಪ ಪ್ರದರ್ಶನ’ ಆರಂಭ: ಈ ಸಂಚಾರ ಮಾರ್ಗ ಬದಲಾವಣೆ | Lalbag Flower Show

By kannadanewsnow0916/01/2025 5:10 AM

ಬೆಂಗಳೂರು: ಇಂದಿನಿಂದ ನಗರದ ಲಾಲ್ ಬಾಗ್ ನಲ್ಲಿ ಫಲಪುಷ್ಪ ಪ್ರದರ್ಶನ ಆರಂಭಗೊಳ್ಳಲಿದೆ. ಇಂದಿನಿಂದ ಜನವರಿ 26ರವರೆಗೆ ಗಣರಾಜ್ಯೋತ್ಸವದ ಪ್ರಯುಕ್ತ ಫಲಪುಷ್ಪ ಪ್ರದರ್ಶ ನಡೆಯಲಿದೆ. ಈ ಹಿನ್ನಲೆ ಸಂಚಾರ ಮಾರ್ಗ ಬದಲಾವಣೆಯನ್ನು ಮಾಡಲಾಗಿದೆ. 

ಈ ಕುರಿತಂತೆ ಪತ್ರಿಕಾ ಪ್ರಕಟಣೆಯಲ್ಲಿ ಬೆಂಗಳೂರು ನಗರ ಸಂಚಾರ ಪೊಲೀಸರು ಮಾಹಿತಿ ನೀಡಿದ್ದು,  ತೋಟಗಾರಿಕೆ ಇಲಾಖೆಯ ವತಿಯಿಂದ ದಿನಾಂಕ:16/01/2025 ರಿಂದ ದಿನಾಂಕ:26/01/2025 ರವರೆಗೆ ಒಟ್ಟು 11 ದಿನಗಳ ವರೆಗೆ ಲಾಲ್‌ಬಾಗ್‌ನಲ್ಲಿ “ಗಣರಾಜ್ಯೋತ್ಸವ ದಿನಾಚರಣೆ ಪ್ರಯುಕ್ತ ಫಲಪುಷ್ಪ ಪ್ರದರ್ಶನವನ್ನು ಆಯೋಜಿಸಲಾಗಿರುತ್ತದೆ. ಈ ಫಲಪುಷ್ಪ ಪ್ರದರ್ಶನಕ್ಕೆ ಗಣ್ಯವ್ಯಕ್ತಿಗಳು, ಸಾರ್ವಜನಿಕರು, ಪ್ರವಾಸಿಗರು ದೇಶ-ವಿದೇಶಿ ಪ್ರೇಕ್ಷಕರು ಹಾಗೂ ಶಾಲಾ ಮಕ್ಕಳುಗಳನ್ನೊಳಗೊಂಡಂತೆ ಸುಮಾರು 8 ರಿಂದ 10 ಲಕ್ಷ ಜನ ಆಗಮಿಸುವ ನಿರೀಕ್ಷೆ ಇರುವುದರಿಂದ ವಿಲ್ಸನ್ ಗಾರ್ಡನ್ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿ ಹಾಗು ಸುತ್ತಮುತ್ತಲ್ಲಿನ ರಸ್ತೆಗಳಲ್ಲಿ ಸಂಚಾರ ದಟ್ಟಣೆ ಉಂಟಾಗಲಿದ್ದು, ಸುಗಮ ಸಂಚಾರ ಏರ್ಪಡಿಸುವ ನಿಟ್ಟಿನಲ್ಲಿ ಈ ಕೆಳಕಂಡಂತೆ ಕ್ರಮ ಕೈಗೊಳ್ಳಲಾಗಿದೆ ಎಂದಿದೆ.

 ವಾಹನಗಳ ನಿಲುಗಡೆಗೆ ಅವಕಾಶ ಕಲ್ಪಿಸಿರುವ ಸ್ಥಳಗಳು

1. ಡಾ|| ಮರಿಗೌಡ ರಸ್ತೆ, ಆಲ್ ಅಮೀನ್ ಕಾಲೇಜ್ ಆವರಣದಲ್ಲಿ ದ್ವಿ-ಚಕ್ರ ವಾಹನಗಳನ್ನು ನಿಲುಗಡೆ ಮಾಡಬಹುದಾಗಿದೆ. 2. ಕೆ.ಹೆಚ್.ರಸ್ತೆ, ಶಾಂತಿನಗರ ಬಿ.ಎಂ.ಟಿ.ಸಿ. ಬಸ್ ನಿಲ್ದಾಣದ ಮೇಲೆ ನಾಲ್ಕು ಚಕ್ರದ ವಾಹನಗಳನ್ನು ನಿಲುಗಡೆ ಮಾಡಬಹುದಾಗಿದೆ.
3. ಡಾ|| ಮರಿಗೌಡ ರಸ್ತೆ-ಹಾಪ್ ಕಾಮ್ಸ್ ನಲ್ಲಿ ದ್ವಿ-ಚಕ್ರ ಹಾಗೂ ನಾಲ್ಕು ಚಕ್ರದ ವಾಹನಗಳನ್ನು ನಿಲುಗಡೆ ಮಾಡಬಹುದಾಗಿದೆ.
4. ಜೆ.ಸಿ. ರಸ್ತೆ ಕಾರ್ಪೋರೇಷನ್ ಪಾರ್ಕಿಂಗ್ ಸ್ಥಳದಲ್ಲಿ ದ್ವಿ-ಚಕ್ರ ಹಾಗೂ ನಾಲ್ಕು ಚಕ್ರದ ವಾಹನಗಳನ್ನು ನಿಲುಗಡೆ ಮಾಡಬಹುದಾಗಿದೆ.

ವಾಹನಗಳ ನಿಲುಗಡೆ ನಿಷೇಧಿಸಿರುವ ರಸ್ತೆಗಳು

1.ಡಾ: ಮರಿಗೌಡ ರಸ್ತೆ, ಲಾಲ್‌ ಬಾಗ್ ಮುಖ್ಯದ್ವಾರದಿಂದ ನಿಮ್ಹಾನ್ಸ್ ವರೆಗೆ ರಸ್ತೆಯ ಎರಡೂ ಬದಿಗಳಲ್ಲಿ.
2. ಕೆ.ಹೆಚ್.ರಸ್ತೆ, ಕೆ.ಹೆಚ್.ವೃತ್ತದಿಂದ ಶಾಂತಿನಗರ ಜಂಕ್ಷನ್ ವರೆಗೆ ರಸ್ತೆಯ ಎರಡೂ ಬದಿಗಳಲ್ಲಿ.
3. ಲಾಲ್‌ಬಾಗ್ ರಸ್ತೆ, ಸುಬ್ಬಯ್ಯ ವೃತ್ತದಿಂದ ಲಾಲ್‌ಬಾಗ್ ಮುಖ್ಯದ್ವಾರದ ವರೆಗೆ.
4. ಸಿದ್ದಯ್ಯ ರಸ್ತೆ, ಊರ್ವಶಿ ಥಿಯೇಟರ್ ಜಂಕ್ಷನ್ ನಿಂದ ವಿಲ್ಸನ್ ಗಾರ್ಡನ್ 12ನೇ ಕ್ರಾಸ್ ವರೆಗೆ.
5. ಬಿಟಿಎಸ್ ಬಸ್ ಸ್ಟಾಪ್ ಬಿಎಂಟಿಸಿ ಜಂಕ್ಷನ್ ನಿಂದ ಪೋಸ್ಟ್ ಆಫೀಸ್ ರಸ್ತೆಯ ಎರಡೂ ಬದಿಗಳಲ್ಲಿ.
6. ಕೃಂಬಿಗಲ್ ರಸ್ತೆಯ ಎರಡೂ ಕಡೆಗಳಲ್ಲಿ.
7. ಲಾಲ್‌ಬಾಗ್ ವೆಸ್ಟಿಗೇಟ್‌ನಿಂದ ಆರ್.ವಿ. ಟೀಚರ್ ಕಾಲೇಜ್‌ವರೆಗೆ
8. ಆರ್‌ವಿ ಟೀಚರ್ ಕಾಲೇಜ್‌ನಿಂದ ಅಶೋಕ ಪಿಲ್ಲರ್ ವರೆಗೆ.
9. ಅಶೋಕ ಪಿಲ್ಲರ್‌ನಿಂದ ಸಿದ್ದಾಪುರ ಜಂಕ್ಷನ್‌ ವರೆಗೆ.

ಡಾ|| ಮರೀಗೌಡ ರಸ್ತೆ, ಲಾಲ್‌ಬಾಗ್ ರಸ್ತೆ, ಕೆ.ಹೆಚ್. ರಸ್ತೆಯಲ್ಲಿ ವಾಹನ ಸಂಚಾರ ದಟ್ಟಣೆ ಹೆಚ್ಚಾಗುವುದರಿಂದ ಸಾರ್ವಜನಿಕರು ಸಾಧ್ಯವಾದಷ್ಟು ಮಟ್ಟಿಗೆ ಸಮೂಹ ಸಾರಿಗೆ ವಾಹನಗಳಾದ ಬಿಎಂಟಿಸಿ ಬಸ್‌ಗಳು, ಮೆಟ್ರೋ, ಕ್ಯಾಬ್‌ಗಳನ್ನು ಬಳಸಲು ಹಾಗೂ ವಾಹನಗಳ ನಿಲುಗಡೆಗೆ ಮಾಡಲಾಗಿರುವ ವ್ಯವಸ್ಥೆಯನ್ನು ಅನುಸರಿಸಲು ಕೋರಲಾಗಿದೆ.

Share. Facebook Twitter LinkedIn WhatsApp Email

Related Posts

ಗ್ರೇಟರ್ ಬೆಂಗಳೂರು ಜೆಡಿಎಸ್ ಸಮಾವೇಶಕ್ಕೆ ಬರದ ಸಿದ್ಧತೆ: ಮಹಿಳಾ ವಿಭಾಗದ ಸಭೆ ನಡೆಸಿದ ಹೆಚ್.ಎಂ.ರಮೇಶ್ ಗೌಡ

09/04/2026 9:44 PM2 Mins Read

40ನೇ ರಾಜ್ಯ ಪತ್ರಕರ್ತರ ಸಮ್ಮೇಳನಕ್ಕೆ ಸರ್ವ ಸಜ್ಜಾದ ಬೀದರ್: ಏ.11ರಂದು ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆಶಿ ಉದ್ಘಾಟನೆ

09/04/2026 9:38 PM3 Mins Read

ಹೊಸದುರ್ಗದ ಕಬ್ಬಳ ಗ್ರಾಮದಲ್ಲಿ ಕತ್ತಿಕಲ್ಲಾಂಭ ದೇವಿಯ ಅದ್ದೂರಿ ರಥೋತ್ಸವ: ಭಕ್ತಿಭಾವದ ಸಿಡಿ ಉತ್ಸವಕ್ಕೆ ಸಾಕ್ಷಿಯಾದ ಸಾವಿರಾರು ಭಕ್ತರು

09/04/2026 8:28 PM2 Mins Read
Recent News

ಗ್ರೇಟರ್ ಬೆಂಗಳೂರು ಜೆಡಿಎಸ್ ಸಮಾವೇಶಕ್ಕೆ ಬರದ ಸಿದ್ಧತೆ: ಮಹಿಳಾ ವಿಭಾಗದ ಸಭೆ ನಡೆಸಿದ ಹೆಚ್.ಎಂ.ರಮೇಶ್ ಗೌಡ

09/04/2026 9:44 PM

40ನೇ ರಾಜ್ಯ ಪತ್ರಕರ್ತರ ಸಮ್ಮೇಳನಕ್ಕೆ ಸರ್ವ ಸಜ್ಜಾದ ಬೀದರ್: ಏ.11ರಂದು ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆಶಿ ಉದ್ಘಾಟನೆ

09/04/2026 9:38 PM

BREAKING: ಮುಂಬೈ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್-1ರಲ್ಲಿ ಅಗ್ನಿ ಅವಘಡ

09/04/2026 9:07 PM

BREAKING: ಪಠ್ಯಪುಸ್ತಕಗಳಿಲ್ಲದಿದ್ದರೂ 7 ದಿನಗಳಲ್ಲಿ ತ್ರಿಭಾಷಾ ಸೂತ್ರ ಜಾರಿಗೆ ತರಲು ಸಿಬಿಎಸ್‌ಇ ಶಾಲೆಗಳಿಗೆ ಆದೇಶ

09/04/2026 9:01 PM
State News
KARNATAKA

ಗ್ರೇಟರ್ ಬೆಂಗಳೂರು ಜೆಡಿಎಸ್ ಸಮಾವೇಶಕ್ಕೆ ಬರದ ಸಿದ್ಧತೆ: ಮಹಿಳಾ ವಿಭಾಗದ ಸಭೆ ನಡೆಸಿದ ಹೆಚ್.ಎಂ.ರಮೇಶ್ ಗೌಡ

By kannadanewsnow0909/04/2026 9:44 PM KARNATAKA 2 Mins Read

ಬೆಂಗಳೂರು: ಈ ತಿಂಗಳ 11ರಂದು ನಗರದಲ್ಲಿ ನಡೆಯಲಿರುವ ಜೆಡಿಎಸ್ ಪಕ್ಷದ ಗ್ರೇಟರ್ ಬೆಂಗಳೂರು ಸಮಾವೇಶವನ್ನು ಯಶಸ್ವಿಗೊಳಿಸುವ ನಿಟ್ಟಿನಲ್ಲಿ ಗ್ರೇಟರ್ ಬೆಂಗಳೂರು…

40ನೇ ರಾಜ್ಯ ಪತ್ರಕರ್ತರ ಸಮ್ಮೇಳನಕ್ಕೆ ಸರ್ವ ಸಜ್ಜಾದ ಬೀದರ್: ಏ.11ರಂದು ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆಶಿ ಉದ್ಘಾಟನೆ

09/04/2026 9:38 PM

ಹೊಸದುರ್ಗದ ಕಬ್ಬಳ ಗ್ರಾಮದಲ್ಲಿ ಕತ್ತಿಕಲ್ಲಾಂಭ ದೇವಿಯ ಅದ್ದೂರಿ ರಥೋತ್ಸವ: ಭಕ್ತಿಭಾವದ ಸಿಡಿ ಉತ್ಸವಕ್ಕೆ ಸಾಕ್ಷಿಯಾದ ಸಾವಿರಾರು ಭಕ್ತರು

09/04/2026 8:28 PM

ಶಿವಮೊಗ್ಗ: ದ್ವಿತೀಯ ಪಿಯುಸಿಯಲ್ಲಿ ಸೊರಬದ ಉಳವಿಯ ಪ್ರಕಾಶ್ ಪುತ್ರ ಶಂಕರ್ 600ಕ್ಕೆ 542 ಅಂಕ

09/04/2026 8:14 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.