ಪಾಟ್ನಾ: ಆರ್ ಜೆಡಿ ಮುಖ್ಯಸ್ಥ ಲಾಲುಪ್ರಸಾದ್ ಯಾದವ್ ಮನೆಯಲ್ಲಿ ಜಾರಿ ಬಿದ್ದು, ಅವರ ಭುಜದ ಮೂಳೆಗೆ ಹೊಡೆತ ಬಿದ್ದಿದೆ. ಹೀಗಾಗಿ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು, ಐಸಿಯುವಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಇದರಿಂದ ಲಾಲು ಪ್ರಸಾದ್ ಯಾದವ್ ಅವರ ಪುತ್ರನಿಗೆ ಕರೆ ಮಾಡಿ ಪ್ರಧಾನಿ ಮೋದಿ ಆರೋಗ್ಯ ವಿಚಾರಿಸಿದ್ದಾರೆ. ಈ ಕುರಿತಂತೆ ಆರ್ಜೆಡಿ ವಕ್ತಾರ ಚಿತ್ರರಂಜನ್ ಗಗನ್ ಅವರು ಮಾತನಾಡಿದ್ದು, ಪ್ರಧಾನಿ ಮೋದಿ ಅವರು ಮಂಗಳವಾರ ತೇಜಸ್ವಿ ಯಾದವ್ ಅವರೊಂದಿಗೆ ಕರೆ ಮಾಡಿ ಲಾಲು ಪ್ರಸಾದ್ ಯಾದವ್ ಅವರ ಆರೋಗ್ಯವನ್ನು ವಿಚಾರಿಸಿದ್ದಾರೆ ಮತ್ತು ಅವರು ಶೀಘ್ರವೇ ಗುಣಮುಖರಾಗಲಿ ಎಂದು ಹಾರೈಸಿದ್ದಾರೆ ಎಂದು ತಿಳಿಸಿದ್ದಾರೆ.