ನವದೆಹಲಿ: ಆರ್ ಜೆ ಡಿ ಮುಖ್ಯಸ್ಥ ಲಾಲು ಪ್ರಸಾದ್ ಯಾದವ್ ಅವರ ಆರೋಗ್ಯ ಹಠಾತ್ತನೆ ಹದಗೆಟ್ಟಿದೆ. ಅವರನ್ನು ದೆಹಲಿ ಏಮ್ಸ್ ಗೆ ದಾಖಲಿಸಲಾಗಿದೆ. ವೈದ್ಯರ ಮೇಲ್ವಿಚಾರಣೆಯಲ್ಲಿ ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ.
ಸದ್ಯ ಅವರ ಆರೋಗ್ಯ ಸ್ಥಿರವಾಗಿದೆ. ಕುಟುಂಬ ಸದಸ್ಯರು ಆಸ್ಪತ್ರೆಯಲ್ಲಿದ್ದಾರೆ. ಈ ಬಗ್ಗೆ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.