ನವದೆಹಲಿ: ಅನಾರೋಗ್ಯದಿಂದ ಬಳಲುತ್ತಿರುವ ರಾಷ್ಟ್ರೀಯ ಜನತಾ ದಳ (ಆರ್ಜೆಡಿ) ಮುಖ್ಯಸ್ಥ ಲಾಲು ಪ್ರಸಾದ್ ಯಾದವ್ ಅವರು ಮೂತ್ರಪಿಂಡ(ಕಿಡ್ನಿ)ದ ಸಮಸ್ಯೆಯಿಂದ ಬಳಲುತ್ತಿದ್ದು, ಅವರ ಪುತ್ರಿ ರೋಹಿಣಿ ಆಚಾರ್ಯ ಅವರು ತಮ್ಮ ತಂದೆಗೆ ಕಿಡ್ನಿ ದಾನ ಮಾಡಲಿದ್ದಾರೆ ಎಂದು ಕುಟುಂಬ ಮೂಲ ತಿಳಿಸಿದೆ.
74 ವರ್ಷದ ಲಾಲು ಯಾದವ್ ಅವರು ಕಳೆದ ತಿಂಗಳು ಸಿಂಗಾಪುರದಿಂದ ತಮ್ಮ ಮೂತ್ರಪಿಂಡದ ಸಮಸ್ಯೆಯ ಚಿಕಿತ್ಸೆಗಾಗಿ ತೆರಳಿದ್ದರು. ಅನೇಕ ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿರುವ ಲಾಲುಗೆ ಮೂತ್ರಪಿಂಡ ಕಸಿ ಮಾಡುವಂತೆ ಸಲಹೆ ನೀಡಲಾಗಿತ್ತು.
ಸಿಂಗಾಪುರದಲ್ಲಿ ನೆಲೆಸಿರುವ ಅವರ ಪುತ್ರಿ ರೋಹಿಣಿ ಆಚಾರ್ಯ ತನ್ನ ತಂದೆಗೆ ಹೊಸ ಜೀವನ ನೀಡಲು ಮುಂದಾಗಿದ್ದಾಳೆ ಎಂದು ಕುಟುಂಬದ ಸದಸ್ಯರೊಬ್ಬರು ಪ್ರೆಸ್ ಟ್ರಸ್ಟ್ ಆಫ್ ಇಂಡಿಯಾಗೆ ತಿಳಿಸಿದ್ದಾರೆ.
ಸದ್ಯ ದೆಹಲಿಯಲ್ಲಿರುವ ಲಾಲು ಯಾದವ್ ಜಾಮೀನಿನ ಮೇಲೆ ಹೊರಗಿದ್ದಾರೆ. ಮೇವು ಪ್ರಕರಣಗಳಲ್ಲಿ ಭಾಗಿಯಾಗಿ ಜೈಲು ಪಾಲಾಗಿದ್ದ ಅವರು ಚಿಕಿತ್ಸೆಗಾಗಿ ದೆಹಲಿ ಮತ್ತು ರಾಂಚಿಯಲ್ಲಿ ಹಲವು ಬಾರಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಕಿಡ್ನಿ ಕಸಿ ಶಸ್ತ್ರಚಿಕಿತ್ಸೆ ಎಲ್ಲಿ ಮತ್ತು ಯಾವಾಗ ನಡೆಯುತ್ತದೆ ಎಂಬುದು ಸ್ಪಷ್ಟವಾಗಿಲ್ಲ.
BIGG NEWS: ಮೋದಿಗೆ ರಾಜ್ಯದಲ್ಲಿ ಹೇಗಾದ್ರೂ ಮಾಡಿ ಚುನಾವಣೆ ಗೆಲ್ಲಬೇಕು: ಪ್ರಿಯಾಂಕ್ ಖರ್ಗೆ
BIG NEWS: ಮುಂಬೈನಲ್ಲಿ ಏಕಾಏಕಿ ದಡಾರ ಹೆಚ್ಚಳ, ವ್ಯಾಕ್ಸಿನೇಷನ್ ಡ್ರೈವ್ ಪ್ರಾರಂಭ
BIGG NEWS: ಮೋದಿಗೆ ರಾಜ್ಯದಲ್ಲಿ ಹೇಗಾದ್ರೂ ಮಾಡಿ ಚುನಾವಣೆ ಗೆಲ್ಲಬೇಕು: ಪ್ರಿಯಾಂಕ್ ಖರ್ಗೆ