ಗದಗ : ಗದಗ ಯಲವಿಗಿ ರೈಲ್ವೆ ಯೋಜನೆ ಅನುಷ್ಠಾನಗೊಳಿಸಲು ತೀರ್ಮಾನಿಸಲಾಗಿದ್ದು, ಈ ಯೋಜನೆಗೆ ರಾಜ್ಯ ಸರ್ಕಾರದ ಪಾಲು 600 ಕೋಟಿ ರೂ. ನೀಡಲಾಗುವುದು. ಈ ರೈಲು ಶಿರಹಟ್ಟಿಯ ಮೂಲಕ ಸಾಗುವ ಬಗ್ಗೆ ಪೂರಕ ಪ್ರಯತ್ನಗಳನ್ನು ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ( Chief Minister Basavaraj Bommai ) ತಿಳಿಸಿದರು.

ಅವರು ಇಂದು ಗದಗ ಜಿಲ್ಲೆಯ ಶಿರಹಟ್ಟಿಯಲ್ಲಿ ಆಯೋಜಿಸಲಾಗಿದ್ದ ಭಾರತೀಯ ಜನತಾ ಪಕ್ಷ ಜನಸಂಕಲ್ಪ ಯಾತ್ರೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ಗದಗ ಜಿಲ್ಲೆಯಲ್ಲಿ ಜಾಲವಾಡಗಿ ನೀರಾವರಿ ಯೋಜನೆಗೆ ಚಾಲನೆ ಹಾಗೂ ತಮಗೊಂಡ ಯೊಜನೆಗಳಿಗೆ ಶೀಘ್ರದಲ್ಲಿ ಮಂಜೂರಾತಿ ನೀಡಲಾಗುವುದು. ಶಿರಹಟ್ಟಿ ಮುಂಡರಗಿ ಕ್ಷೇತ್ರವನ್ನು ಪ್ರವಾಸೋದ್ಯಮದ ಗಮ್ಯವಾಗಿಸಲು ಕ್ರಮ ತೆಗೆದುಕೊಳ್ಳಲಾಗುವುದು ಎಂದರು.

BIG NEWS: ವರ್ಷದ ಕೊನೆಯ ಚಂದ್ರಗ್ರಹಣ ಆರಂಭ: ವಿಶ್ವದ ಹಲವೆಡೆ ಗೋಚರ | Lunar Eclipse 2022

ಲಂಬಾಣಿ ತಾಂಡಾಗಳ ಮನೆಗಳಿಗೆ ಹಕ್ಕುಪತ್ರ 

ಲಂಬಾಣಿ ತಾಂಡಾಗಳನ್ನು ಕಂದಾಯ ಗ್ರಾಮಗಳಾಗಿ ಒಂದು ತಿಂಗಳಲ್ಲಿ ಮಾಡಲಾಗುವುದು. ತಾಂಡಾದ ಪ್ರತಿಯೊಂದು ಮನೆಗೂ ಹಕ್ಕುಪತ್ರಗಳನ್ನು ಒಂದು ತಿಂಗಳಲ್ಲಿ ತಲುಪಿಸಲಾಗುವುದು ಅವರ ಬೇಡಿಕೆಯನ್ನು ಈಡೇರಿಸುವುದು ಸರ್ಕಾರ ಬದ್ಧತೆಯಾಗಿದೆ ಎಂದು ತಿಳಿಸಿದರು.

ಕನಕದಾಸರ ಸಭಾ ಭವನಕ್ಕೆ 1 ಕೋಟಿ ರೂ. ಬಿಡುಗಡೆ 

ಶಿರಹಟ್ಟಿಯಲ್ಲಿ ಕನಕದಾಸರ ಸಭಾ ಭವನ ನಿರ್ಮಾಣಕ್ಕೆ ಬೇಡಿಕೆ ಇದ್ದು, ಇದಕ್ಕಾಗಿ 1. ಕೋಟಿ ರೂ.ಶೀಘ್ರವೇ ಬಿಡುಗಡೆ ಮಾಡಲಾಗುವುದು.ಗದಗ ಜಿಲ್ಲೆಗೆ 1.20 ಲಕ್ಷ ರೈತರಿಗೆ ಮಳೆಯಿಂದ ಹಾನಿಗೊಳಗಾದ ಬೆಳೆಗಳಿಗೆ 209 ಕೋಟಿ ರೂ. ಪರಿಹಾರ ಬಿಡುಗಡೆಯಾಗಿದೆ. ಗದಗ ಜಿಲ್ಲೆಗೆ 97 ಕೋಟಿ ರೂ. ಬೆಳೆ ವಿಮೆ ಬಂದಿದೆ. 9 ಕೋಟಿ ರೂ.ಗಳ ರೈತ ವಿದ್ಯಾನಿಧಿಯನ್ನು ಈ ಜಿಲ್ಲೆಯ ಮಕ್ಕಳಿಗೆ ನೀಡಲಾಗಿದೆ. ಪಿಎಂ ಕಿಸಾನ್ ಯೋಜನೆ, 159 ಕೋಟಿ ರೂ. ಗದಗ ಜಿಲ್ಲೆಗೆ ಬಂದಿದ್ದು, ರೈತಾಪಿ ವರ್ಗವನ್ನು ಬಲಿಷ್ಟಗೊಳಿಸಲು ಈ ಎಲ್ಲ ಕ್ರಮವನ್ನು ತೆಗೆದುಕೊಳ್ಳಲಾಗಿದೆ ಎಂದರು.

BIG BREAKING NEWS: ಕನ್ನಡದ ಹಿರಿಯ ನಟ ಲೋಹಿತಾಶ್ವ ಇನ್ನಿಲ್ಲ

ರೈತ ಯಶಸ್ವಿನಿ ಯೋಜನೆಗೆ 500 ಕೋಟಿ ರೂ

ನಮ್ಮ ನಾಯಕರ ಯಡಿಯೂರಪ್ಪ ಅವರು ಸಂಧ್ಯಾ ಸುರಕ್ಷಾ, ಮಕ್ಕಳಿಗೆ ಸೈಕಲ್,ಭಾಗ್ಯ ಲಕ್ಷ್ಮೀ ಯೊಜನೆ, ರೈತರಿಗೆ 10 ಎಚ್ ಪಿ ಉಚಿತ ವಿದ್ಯುತ್, ಕಿಸಾನ್ ಸಮ್ಮಾನ ಯೋಜನೆಗಳ ಮೂಲಕ ರಾಜ್ಯ ಸರ್ಕಾರದಿಂದ 4000 ರೂ. ಸೇರಿ, ಒಟ್ಟು 10,000 ರೂ. ನೀಡಿದ್ದಾರೆ. ರೈತರ ಮಕ್ಕಳಿಗೆ ವಿದ್ಯಾನಿಧಿ ಯೋಜನೆ ಜಾರಿ ತಂದಿದ್ದು, 10.16 ಲಕ್ಷ ಮಕ್ಕಳಿಗೆ ಇದರ ಪ್ರಯೋಜನ ದೊರೆತಿದೆ.ಕೃಷಿ ಕೂಲಿ ಕಾರ್ಮಿಕರು, ನೇಕಾರರು, ಮೀನುಗಾರರ, ಟ್ಯಾಕ್ಸಿ , ಆಟೋ ಚಾಲಕರ ಮಕ್ಕಳಿಗೂ ಈ ಯೋಜನೆ ವಿಸ್ತರಣೆ ಮಾಡಲಾಗಿದೆ. ರೈತ ಯಶಸ್ವಿ ಯೋಜನೆ ಪ್ರಾರಂಭಿಸಲಾಗಿದ್ದು, ಇದಕ್ಕಾಗಿ 500 ಕೋಟಿ ರೂ. ಇಡಲಾಗಿದೆ. ರೈತಶಕ್ತಿ,ಡೀಸೆಲ್ ಯೋಜನೆಯಿಂದ 28 ಲಕ್ಷ ರೈತರಿಗೆ ಅನುಕೂಲವಾಗಿದೆ ಎಂದರು.

BIG NEWS: ನ.11ರಿಂದ 13ರವರೆಗೆ ‘ರಾಷ್ಟ್ರೀಯ ಶೈಕ್ಷಣಿಕ ಸಮ್ಮೇಳನ’: ‘ಶಾಲಾ-ಕಾಲೇಜು ಶಿಕ್ಷಕ’ರಿಗೆ OODಗೆ ಅನುಮತಿ

5 ಲಕ್ಷ ಮಹಿಳೆಯರು ಹಾಗೂ ಯುವಕರಿಗೆ ಉದ್ಯೋಗ

ಹಿಂದುಳಿದ ವರ್ಗದವರ ವಿದ್ಯಾರ್ಥಿಗಳ ವಸತಿನಿಲಯ ವೇತನ , ವಿದ್ಯಾರ್ಥಿ ಹೆಚ್ಚಿಸಲಾಗಿದೆ. 50 ಕನಕದಾಸ ಹಾಸ್ಟೆಲ್ ಗಳು, 100 ಅಂಬೇಡ್ಕರ್ ವಿದ್ಯಾರ್ಥಿ ನಿಲಯ ನಿರ್ಮಾಣ ಮಾಡಲಾಗುತ್ತಿದೆ. ಎಸ್ ಸಿ ಎಸ್ ಟಿ ಮೀಸಲಾತಿ ಹೆಚ್ಚಿಸುವ ದಿಟ್ಟ ಕ್ರಮವನ್ನು ನಮ್ಮ ಸರ್ಕಾರ ತೆಗೆದುಕೊಂಡಿದೆ. ಸಮಾಜವನ್ನು ಎತ್ತಿಹಿಡಿಯುವ ಕೆಲಸವನ್ನು ಬದ್ಧತೆಯಿಂದ ಮಾಡಲಾಗಿದೆ.

ರಾಜ್ಯದ ಸಮಗ್ರ ಅಭಿವೃದ್ದಿಗಾಗಿ ಪ್ರತಿ ಗ್ರಾಮದಲ್ಲಿ ಸ್ತ್ರೀ ಸಾಮರ್ಥ್ಯ ಯೋಜನೆಯಡಿ, ತಲಾ 2 ಸಂಘಕ್ಕೆ 5 ಲಕ್ಷ ರೂ ನೀಡಲಾಗುವುದು. ಅದೇ ರೀತಿ ಸ್ವಾಮಿ ವಿವೇಕಾನಂದ ಯುವ ಶಕ್ತಿ ಯೋಜನೆಯಡಿ ಪ್ರತಿ ಗ್ರಾಮದ ತಲಾ 2 ಸಂಘಕ್ಕೆ 5 ಲಕ್ಷ ರೂ ಉದ್ಯೋಗ ನೀಡಲಾಗುವುದು. ಇದರಿಂದ 5 ಲಕ್ಷ ಮಹಿಳೆಯರು ಹಾಗೂ 5 ಲಕ್ಷ ಯುವಕರಿಗೆ ಉದ್ಯೋಗ ಕಲ್ಪಿಸುವ ಯೋಜನೆಯಾಗಿದೆ. ಸರ್ಕಾರದ ಅಭಿವೃಧ್ದಿ ಯೋಜನೆ ಗಳಲ್ಲಿ ಜನರು ಪಾಲುದಾರರನ್ನಾಗಿ ಮಾಡುವ ಗುರಿ ನಮ್ಮದಾಗಿದೆ ಎಂದರು.

BIG BREAKING NEWS: ‘ಟ್ವಿಟ್ಟರ್ ಹ್ಯಾಂಡಲ್’ನಿಂದ ‘ಕೆಜಿಎಫ್-2 ಹಾಡು’ ತೆಗೆಯುತ್ತೇವೆ: ‘ಹೈಕೋರ್ಟ್’ಗೆ ಕಾಂಗ್ರೆಸ್ ಪರ ವಕೀಲರ ಮಾಹಿತಿ

ಈ ಸಂದರ್ಭದಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಸಚಿವರಾದ ಗೋವಿಂದ ಕಾರಜೋಳ, ಸಿ.ಸಿ.ಪಾಟೀಲ್, ಬಿ.ಸಿ.ಪಾಟೀಲ್, ರಾಮುಲು, ಸಂಸದ ಶಿವಕುಮಾರ ಉದಾಸಿ ಮತ್ತಿತರು ಹಾಜರಿದ್ದರು.

Share.
Exit mobile version