Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಮನೆಯಲ್ಲಿ ಇನ್ವರ್ಟರ್ ಎಲ್ಲಿಡಬೇಕು? ಸುರಕ್ಷತೆಗಾಗಿ ಈ ಕ್ರಮಗಳನ್ನು ತಪ್ಪದೇ ಪಾಲಿಸಿ

08/04/2026 9:20 AM

SHOCKING : ಪ್ರಜ್ಞೆ ತಪ್ಪಿಸಿ ದೇವಮಾನವನಿಂದ ಅತ್ಯಾಚಾರ : ಬಾಲಕಿಯ ರೋದನೆಯ ವಿಡಿಯೋ ವೈರಲ್ | WATCH VIDEO

08/04/2026 9:10 AM

​’ಕೇವಲ ಹಿಂದುಳಿದ ವರ್ಗಕ್ಕೆ ಸೇರಿದರೆ ಸಾಲದು, ಅರ್ಹತೆಯೂ ಬೇಕು’: ಸರ್ಕಾರಿ ಕೆಲಸದಲ್ಲಿ ರಿಯಾಯಿತಿ ಬಗ್ಗೆ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು!

08/04/2026 9:05 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » GOOD NEWS: ರಾಜ್ಯದಲ್ಲಿ ‘ಭೂ ಪರಿವರ್ತನೆ ನಿಯಮ’ ಸರಳೀಕರಣ: 2 ಎಕರೆಗಿನ ಸಣ್ಣ ಕೈಗಾರಿಕೆಗಳಿಗೆ ‘ಕನ್ವರ್ಷನ್’ ಬೇಕಿಲ್ಲ
KARNATAKA

GOOD NEWS: ರಾಜ್ಯದಲ್ಲಿ ‘ಭೂ ಪರಿವರ್ತನೆ ನಿಯಮ’ ಸರಳೀಕರಣ: 2 ಎಕರೆಗಿನ ಸಣ್ಣ ಕೈಗಾರಿಕೆಗಳಿಗೆ ‘ಕನ್ವರ್ಷನ್’ ಬೇಕಿಲ್ಲ

By kannadanewsnow0910/12/2025 3:43 PM

ಬೆಳಗಾವಿ: ಕರ್ನಾಟಕ ಭೂ ಕಂದಾಯ ಕಾಯ್ದೆ 1964ರ ತಿದ್ದುಪಡಿಗೆ ಕಳೆದ ಅಕ್ಟೋಬರ್ ತಿಂಗಳಲ್ಲೇ ಕರಡು ರಚಿಸಲಾಗಿದ್ದು, ಮುಂದಿನ ಒಂದು ತಿಂಗಳೊಳಗೆ ಅಧಿಸೂಚನೆ ಹೊರಡಿಸಿ ಕಾರ್ಯರೂಪಕ್ಕೆ ತರಲಾಗುವುದು ಎಂದು ಸಚಿವ ಕೃಷ್ಣ ಬೈರೇಗೌಡ ಅವರು ವಿಧಾನ ಪರಿಷತ್ ಗೆ ಮಾಹಿತಿ ನೀಡಿದ್ದಾರೆ.

ಬುಧವಾರ ಪರಿಷತ್ನ ಪ್ರಶ್ನೋತ್ತರ ಅವಧಿಯ ವೇಳೆ ಶಾಸಕ ರಾಮೋಜಿ ಗೌಡ ಅವರು, “ಕರ್ನಾಟಕ ಭೂ ಕಂದಾಯ ಕಾಯ್ದೆ 1964 ಕಲಂ 95ರ ತಿದ್ದುಪಡಿ ಅಧಿಸೂಚನೆಯನ್ನು ಇದುವರೆವಿಗೂ ಜಾರಿಗೆ ತರದಿರಲು ಕಾರಣಗಳೇನು.? ಕಳೆದ ಅಧಿವೇಶನದಲ್ಲಿ ಈ ಅಧಿಸೂಚನೆಯನ್ನು ಗೊತ್ತುಪಡಿಸಿದ ದಿನಾಂಕದಿಂದ ಜಾರಿಗೆ ಬರುವುದು ಎಂದು ತಿಳಿಸಲಾಗಿತ್ತು. ಆದರೆ, ಇದುವರೆವಿಗೂ ಈ ಅಧಿಸೂಚನೆಯನ್ನು ಜಾರಿಗೆ ತರದಿರುವುದರಿಂದ ನಗರ ಪ್ರದೇಶದ ಜನತೆಗೆ ತೊಂದರೆಯಾಗುತ್ತಿರುವುದು ಸರ್ಕಾರದ ಗಮನಕ್ಕೆ ಬಂದಿದೆಯೇ? ಎಂದು ಪ್ರಶ್ನೆ ಮಾಡಿದ್ದರು.

ಈ ಪ್ರಶ್ನೆಗೆ ಉತ್ತರ ನೀಡಿದ ಸಚಿವ ಕೃಷ್ಣ ಬೈರೇಗೌಡ ಅವರು, “ಕರ್ನಾಟಕ ಭೂ ಕಂದಾಯ ಕಾಯ್ದೆ 1964 ರಲ್ಲಿ ಜಾರಿಯಾಗಿದ್ದರೂ ಈ ಹಿಂದೆ ಅಗತ್ಯ ತಿದ್ದುಪಡಿಗಳಾಗಿರಲಿಲ್ಲ. ಆದರೆ, ಪ್ರಸ್ತುತ ಅತ್ಯಧಿಕ ಹಾಗೂ ಅಗತ್ಯ ತಿದ್ದುಪಡಿಗಳನ್ನು ತರಲಾಗುತ್ತಿದೆ. ಕಲಂ 95ರಕ್ಕೆ ಸಾಕಷ್ಟು ತಿದ್ದುಪಡಿ ಮಾಡಿದ್ದು, ಕಳೆದ ಅಕ್ಟೋಬರ್ 20 ರಂದೇ ಕರಡು ರಚಿಸಲಾಗಿದೆ. ಈ ಪೈಕಿ ಬಹುಮುಖ್ಯವಾಗಿ ಜನರಿಗೆ ಅನುಕೂಲವಾಗಲಿ ಎಂಬ ಕಾರಣಕ್ಕೆ ಭೂ ಪರಿವರ್ತನೆಯನ್ನು ಮತ್ತಷ್ಟು ಸರಳೀಕರಣಗೊಳಿಸಲಾಗಿದೆ. ಬಹು ಕಾಲದಿಂದಲೂ ಭೂ ಪರಿವರ್ತನೆ ಎಂಬುದೇ ಹಗರಣ ಎಂಬಂತಹ ಪರಿಸ್ಥಿತಿ ಇತ್ತು. ಇದರಲ್ಲಿ ಅಧಿಕಾರಿಗಳು ಭಾಗಿಯಾಗಿದ್ದಾರೋ.. ಇಲ್ಲವೋ ನಮಗೆ ಗೊತ್ತಿಲ್ಲ. ಆದರೆ, ಅನೇಕ ಮಧ್ಯವರ್ತಿಗಳಂತೂ ಹುಟ್ಟಿಕೊಂಡಿದ್ದಾರೆ. ಇದರಿಂದ ಅಧಿಕಾರಿಗಳಿಗೂ ಕೆಟ್ಟ ಹೆಸರು, ಸರ್ಕಾರಕ್ಕೂ ಕೆಟ್ಟ ಹೆಸರು. ಹೀಗಾಗಿ ಈ ಭೂ ಪರಿವರ್ತನೆ ದಂಧೆಗೆ ಸಂಪೂರ್ಣ ಬ್ರೇಕ್ ಹಾಕುವ ನಿಟ್ಟಿನಲ್ಲಿ ಮಹತ್ವದ ತಿದ್ದುಪಡಿಗಳನ್ನು ತರಲಾಗಿದೆ” ಎಂದರು.

“ಮಾಸ್ಟರ್ ಪ್ಲಾನ್ ಪ್ರಕಾರ ಉದ್ಯಮ ನಡೆಸುವವರಿಗೆ ಆಟೋ ಕನ್ವರ್ಷನ್ಗೆ ಅವಕಾಶ ನೀಡಲಾಗಿದೆ. ಮಾಸ್ಟರ್ ಪ್ಲಾನ್ ಹೊರಗಿನ ಹಾಗೂ ಡೀಮ್ಡ್ ಕನ್ವರ್ಷನ್ಗೂ ಸಹ ಈ ಹಿಂದೆ ಮೂರು ನಾಲ್ಕು ತಿಂಗಳು ಸಮಯ ಆಗುತ್ತಿತ್ತು. ಆದರೆ, ಪ್ರಸ್ತುತ 30 ದಿನಗಳಲ್ಲಿ ಭೂ ಪರಿವರ್ತನೆಗೆ ಅವಕಾಶ ನೀಡಲಾಗುತ್ತಿದೆ. ಭೂ ಪರಿವರ್ತನೆಗೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ. ಜಿಲ್ಲಾಧಿಕಾರಿಗಳು 30ದಿನಗಳ ಒಳಗಾಗಿ ಸಂಬಂಧಿತ ಯಾವುದೇ ಇಲಾಖೆಯ ಜೊತೆಗೆ ಚರ್ಚಿಸಿ ಪರಿವರ್ತನೆಗೆ ಅವಕಾಶ ನೀಡಬಹುದು ಅಥವಾ ತಿರಸ್ಕರಿಸಬಹುದು. 30ದಿನಗಳ ಒಳಗಾಗಿ ಜಿಲ್ಲಾಧಿಕಾರಿಗಳು ಯಾವ ನಿರ್ಧಾರವೂ ತೆಗೆದುಕೊಳ್ಳದಿದ್ದಲ್ಲಿ, ಆಟೋಮೇಟಿಕ್ ಆಗಿ ಭೂ ಪರಿವರ್ತನೆಗೆ ಅವಕಾಶ ಲಭ್ಯವಾಗುತ್ತದೆ” ಎಂದು ಮಾಹಿತಿ ನೀಡಿದರು.

ಸಣ್ಣ ಕೈಗಾರಿಕೆಗಳು ಎರಡು ಎಕರೆ ವರೆಗೆ ಕೈಗಾರಿಕಾ ಉದ್ದೇಶಕ್ಕಾಗಿ ಭೂ ಪರಿವರ್ತನೆ ಅಗತ್ಯವಿಲ್ಲ

ಸಣ್ಣ ಕೈಗಾರಿಕೆಗಳು ಎರಡು ಎಕರೆ ವರೆಗೆ ಕೈಗಾರಿಕಾ ಉದ್ದೇಶಕ್ಕಾಗಿ ಭೂ ಪರಿವರ್ತನೆ ಅಗತ್ಯ ಇಲ್ಲ. ಭಾರತ ದೇಶದಲ್ಲಿ ಪ್ರಸ್ತುತ ನವೀಕರಿಸಬಹುದಾದ ಇಂಧನದ ಕಡೆ ಹೆಜ್ಜೆ ಇಡುತ್ತಿದೆ. ಹೀಗಾಗಿ ಇದಕ್ಕೂ ಭೂ ಪರಿವರ್ತನೆ ಬೇಕಿಲ್ಲ. ಇಂಧನ ಇಲಾಖೆಯ ಅನುಮತಿ ಪಡೆದಿದ್ದರೆ, ನವೀಕರಿಸಬಹುದಾದ ಇಂಧನದ ಪ್ಲಾಂಟ್ ನಿರ್ಮಿಸಲು ಭೂ ಪರಿವರ್ತನೆ ಅಗತ್ಯ ಇಲ್ಲ. ಹೀಗೆ ಭೂ ಪರಿವರ್ತನೆಗೆ ಸಂಬಂಧಿಸಿದ ಅನೇಕ ವಿಚಾರಗಳನ್ನು ಸರಳೀಕರಣಗೊಳಿಸಲಾಗಿದೆ” ಎಂದು ತಿಳಿಸಿದರು.

ಇದಲ್ಲದೆ, “ಉಪ ವಿಭಾಗಾಧಿಕಾರಿಗಳ ಕಂದಾಯ ನ್ಯಾಯಾಲಯಗಳನ್ನು ಹೇಗೆ ನಡೆಸಬೇಕು ಎಂದು ಈ ಹಿಂದೆ ಯಾವುದೇ ಸ್ಪಷ್ಟ ನಿಯಮ (ರೂಲ್ಸ್) ಇರಲಿಲ್ಲ. ಪರಿಣಾಮ ಉಪ ವಿಭಾಗಾಧಿಕಾರಿಗಳು ಕೋರ್ಟ್ನಲ್ಲಿ ತಮ್ಮ ಅಧಿಕಾರ ವ್ಯಾಪ್ತಿ ಮೀರಿ ಅನೇಕ ಆದೇಶಗಳನ್ನು ಹೊರಡಿಸಿರುವ ಉದಾಹರಣೆಗಳು ಸಾಕಷ್ಟಿವೆ. ಹೀಗಾಗಿ ಅದಕ್ಕೂ ನಿಯಮಗಳನ್ನು ರೂಪಿಸಿ ಸರಿಪಡಿಸಿದ್ದೇವೆ. ಈ ಅನೇಕ ಸೆಕ್ಷನ್ಗಳಿಗೆ ಹೊಸ ನಿಯಮಗಳನ್ನು ತಿದ್ದುಪಡಿ ಮೂಲಕ ಜಾರಿಗೊಳಿಸುತ್ತಿದ್ದೇವೆ. ಮುಂದಿನ ಒಂದು ತಿಂಗಳೊಳಗೆ ಅಧಿಸೂಚನೆ ಹೊರಡಿಸಿ ಕಾರ್ಯರೂಪಕ್ಕೆ ತರಲಾಗುವುದು” ಎಂದು ಪರಿಷತ್ನಲ್ಲಿ ಸಚಿವ ಕೃಷ್ಣ ಬೈರೇಗೌಡ ಅವರು ಭರವಸೆ ನೀಡಿದರು.

Share. Facebook Twitter LinkedIn WhatsApp Email

Related Posts

ಮನೆಯಲ್ಲಿ ಇನ್ವರ್ಟರ್ ಎಲ್ಲಿಡಬೇಕು? ಸುರಕ್ಷತೆಗಾಗಿ ಈ ಕ್ರಮಗಳನ್ನು ತಪ್ಪದೇ ಪಾಲಿಸಿ

08/04/2026 9:20 AM1 Min Read

ನಾಳೆ ಬಾಗಲಕೋಟೆ, ದಾವಣಗೆರೆ ದಕ್ಷಿಣ ಕ್ಷೇತ್ರದ ಉಪಚುನಾವಣೆ : `ವೋಟರ್ ಐಡಿ’ ಇಲ್ಲದಿದ್ದರೆ ಈ ದಾಖಲೆಗಳನ್ನು ತೋರಿಸಿ ಮತದಾನ ಮಾಡಬಹುದು.!

08/04/2026 8:47 AM1 Min Read

ಸಾರ್ವಜನಿಕರೇ ಗಮನಿಸಿ : `ಡಿಜಿಟಲ್ ಅರೆಸ್ಟ್’ಗೆ ಒಳಗಾಗಿದ್ದರೆ ಭಯ ಬೇಡ, ಜಸ್ಟ್ ಹೀಗೆ ದೂರು ಸಲ್ಲಿಸಿ.!

08/04/2026 8:20 AM1 Min Read
Recent News

ಮನೆಯಲ್ಲಿ ಇನ್ವರ್ಟರ್ ಎಲ್ಲಿಡಬೇಕು? ಸುರಕ್ಷತೆಗಾಗಿ ಈ ಕ್ರಮಗಳನ್ನು ತಪ್ಪದೇ ಪಾಲಿಸಿ

08/04/2026 9:20 AM

SHOCKING : ಪ್ರಜ್ಞೆ ತಪ್ಪಿಸಿ ದೇವಮಾನವನಿಂದ ಅತ್ಯಾಚಾರ : ಬಾಲಕಿಯ ರೋದನೆಯ ವಿಡಿಯೋ ವೈರಲ್ | WATCH VIDEO

08/04/2026 9:10 AM

​’ಕೇವಲ ಹಿಂದುಳಿದ ವರ್ಗಕ್ಕೆ ಸೇರಿದರೆ ಸಾಲದು, ಅರ್ಹತೆಯೂ ಬೇಕು’: ಸರ್ಕಾರಿ ಕೆಲಸದಲ್ಲಿ ರಿಯಾಯಿತಿ ಬಗ್ಗೆ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು!

08/04/2026 9:05 AM

SHOCKING : ಗೊರಕೆ ಹೊಡೆಯುವವರಿಗೆ ಶೇ. 71 ರಷ್ಟು `ಹೃದಯಾಘಾತ’ ಸಂಭವಿಸುವ ಸಾಧ್ಯತೆ : ವರದಿ

08/04/2026 9:00 AM
State News
KARNATAKA

ಮನೆಯಲ್ಲಿ ಇನ್ವರ್ಟರ್ ಎಲ್ಲಿಡಬೇಕು? ಸುರಕ್ಷತೆಗಾಗಿ ಈ ಕ್ರಮಗಳನ್ನು ತಪ್ಪದೇ ಪಾಲಿಸಿ

By kannadanewsnow5708/04/2026 9:20 AM KARNATAKA 1 Min Read

ಇಂದಿನ ದಿನಗಳಲ್ಲಿ ವಿದ್ಯುತ್ ಕೈಕೊಟ್ಟಾಗ ಮನೆಯಲ್ಲಿ ಬೆಳಕು ಮತ್ತು ಗಾಳಿ ಇರಬೇಕೆಂದರೆ ಇನ್ವರ್ಟರ್ ಅತ್ಯಗತ್ಯ. ಆದರೆ, ಅಸಮರ್ಪಕ ಜಾಗದಲ್ಲಿ ಇನ್ವರ್ಟರ್…

ನಾಳೆ ಬಾಗಲಕೋಟೆ, ದಾವಣಗೆರೆ ದಕ್ಷಿಣ ಕ್ಷೇತ್ರದ ಉಪಚುನಾವಣೆ : `ವೋಟರ್ ಐಡಿ’ ಇಲ್ಲದಿದ್ದರೆ ಈ ದಾಖಲೆಗಳನ್ನು ತೋರಿಸಿ ಮತದಾನ ಮಾಡಬಹುದು.!

08/04/2026 8:47 AM

ಸಾರ್ವಜನಿಕರೇ ಗಮನಿಸಿ : `ಡಿಜಿಟಲ್ ಅರೆಸ್ಟ್’ಗೆ ಒಳಗಾಗಿದ್ದರೆ ಭಯ ಬೇಡ, ಜಸ್ಟ್ ಹೀಗೆ ದೂರು ಸಲ್ಲಿಸಿ.!

08/04/2026 8:20 AM

ಮಾನಸಿಕ ಆರೋಗ್ಯ ಮತ್ತು ನೆಮ್ಮದಿಯ ಜೀವನಕ್ಕಾಗಿ ಈ 9 ದೈನಂದಿನ ಅಭ್ಯಾಸಗಳನ್ನು ರೂಢಿಸಿಕೊಳ್ಳಿ

08/04/2026 8:00 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.