ಕನಕಪುರ: ಜಮೀನು ವಿವಾದಕ್ಕೆ ಸಂಬಂಧಿಸಿದಂತೆ ಡೆಡ್ಲಿ ಅಟ್ಯಾಕ್ ಒಂದು ಕನಕಪುರ ಬಸ್ ನಿಲ್ದಾಣದಲ್ಲಿ ನಡೆದಿದೆ. ಕೆ ಎಸ್ ಆರ್ ಟಿ ಸಿ ಬಸ್ ಗೆ ನುಗ್ಗಿ ವ್ಯಕ್ತಿಯೊಬ್ಬರಿಗೆ ಮಾರಣಾಂತಿಕ ಹಲ್ಲೆ ಮಾಡಲಾಗಿದೆ.
ಕನಕಪುರದ ಕೆ ಎಸ್ ಆರ್ ಟಿ ಸಿ ಬಸ್ ನಿಲ್ದಾಣದಲ್ಲಿ ಜಮೀನು ವಿವಾದಕ್ಕೆ ಸಂಬಂಧಿಸಿದಂತೆ ದಿಮ್ಮದಹಳ್ಳಿ ಮಾರೇಗೌಡ ಎಂಬುವರ ಮೇಲೆ ಮಾರಣಾಂತಿಕ ಹಲ್ಲೆ ಮಾಡಲಾಗಿದೆ.
ಕನಕಪುರ ಬಸ್ ನಿಲ್ದಾಣದಲ್ಲಿಯೇ ಪ್ರಯಾಣಿಕರ ಎದುರೇ ಮಚ್ಚಿನಿಂದ ಮಾದೇಗೌಡ ಹೊಡೆದು ಆದಿತ್ಯ ಹಾಗೂ ಸಲ್ಮಾನ್ ಎಂಬುವರು ಪರಾರಿಯಾಗಿದ್ದಾರೆ. ಮಾರಣಾಂತಿಕ ಹಲ್ಲೆಗೊಳಗಾದಂತ ಮಾರೇಗೌಡ ಸ್ಥಿತಿ ಗಂಭೀರವಾಗಿದ್ದು, ಕನಕಪುರ ತಾಲ್ಲೂಕು ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ಬಳಿಕ, ಹೆಚ್ಚಿನ ಚಿಕಿತ್ಸೆಗಾಗಿ ವಿಕ್ಟೋರಿಯಾ ಆಸ್ಪತ್ರೆಗೆ ರವಾನಿಸಲಾಗಿದೆ.
ಈ ವಿಷಯ ತಿಳಿದು ಸ್ಥಳಕ್ಕೆ ಆಗಮಿಸಿರುವಂತ ಕನಕಪುರ ಠಾಣೆಯ ಪೊಲೀಸರು, ಪರಿಶೀಲಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಮಾದೇಗೌಡ ಮೇಲೆ ಮಾರಣಾಂತಿಕ ಹಲ್ಲೆ ಮಾಡಿ ಪರಾರಿಯಾಗಿರುವಂತ ಆದಿತ್ಯ, ಸಲ್ಮಾನ್ ಪತ್ತೆಗೆ ಬಲೆ ಬೀಸಿದ್ದಾರೆ.
BREAKING: ಬೆಂಗಳೂರಲ್ಲಿ ಮತ್ತೊಂದು ಭೀಕರ ಅಗ್ನಿ ಅವಘಡ: ಪೇಪರ್ ಪ್ಲೇಟ್ ಅಂಗಡಿ ಸುಟ್ಟು ಭಸ್ಮ
ಸಾಗರ ನಗರಸಭೆ ‘ಪೌರಾಯುಕ್ತ ಹೆಚ್.ಕೆ ನಾಗಪ್ಪ’ಗೆ ‘ಕಾರ್ಯನಿರತ ಪತ್ರಕರ್ತರ ಸಂಘ’ದಿಂದ ಸನ್ಮಾನ