ಬೆಂಗಳೂರು: ಬಿಡಿಎ ವ್ಯಾಪ್ತಿಯಲ್ಲಿ ನಡೆದಿರುವ ಭೂ ಒತ್ತುವರಿ ಪ್ರಕರಣವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದೆ.
ಅಧಿಕಾರಿಗಳು ಒತ್ತುವರಿದಾರರ ವಿರುದ್ಧ ದಾಳಿ ಮುಂದುವರಿಸಿದ್ದು, ಜೆ.ಪಿ.ನಗರದಲ್ಲಿ ₹ 30 ಕೋಟಿ ಮೌಲ್ಯದ ಆಸ್ತಿಯನ್ನು ಜಪ್ತಿ ಮಾಡಿದ್ದಾರೆ. ಜೆ.ಪಿ.ನಗರ 9ನೇ ಹಂತ, 1ನೇ ಬ್ಲಾಕ್ನ ಆಲಹಳ್ಳಿಯಲ್ಲಿ ಸರ್ವೆ ನಂಬರ್ 4/1ರಲ್ಲಿ 22 ಗುಂಟೆ ಜಾಗವನ್ನು ಬಿಡಿಎ ಮತ್ತೆ ತನ್ನ ವಶಕ್ಕೆ ತೆಗೆದುಕೊಂಡಿದೆ. ಈ ಜಾಗದಲ್ಲಿ ಕಳೆದ 10 ವರ್ಷಗಳಿಂದ ತಾತ್ಕಾಲಿಕ್ ಶೆಡ್ಗಳನ್ನು ನಿರ್ಮಿಸಿಕೊಂಡು ಹಲವರು ವ್ಯಾಪಾರ ಮಾಡುತ್ತಿದ್ದರು. ಪೊಲೀಸ್ ಬಂದೋಬಸ್ತ್ನಲ್ಲಿ 6 ತಾತ್ಕಾಲಿಕ ಶೆಡ್ಗಳನ್ನು ತೆರವುಗೊಳಿಸಲಾಯಿತು. ಇಂಥ ಶೆಡ್ಗಳಲ್ಲಿ ಇರುವವರು ನಿರಾಪೇಕ್ಷಣಾ ಪತ್ರ ನೀಡಬೇಕು. ನಕಲಿ ಎನ್ಒಸಿ ಕೊಟ್ಟರೆ, ಅಂಥವರ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಲಾಗುವುದು ಎಂದು ಬಿಡಿಎ ಎಚ್ಚರಿಸಿದೆ.