ಗದಗ: ಗೃಹ ಲಕ್ಷ್ಮಿ ಯೋಜನೆಯಿಂದ ಫ್ರಿಡ್ಜ್, ಟಿವಿ, ಊರಿಗೆ ಹೋಳಿಗೆ ಊಟ, ಮಗನಿಗೆ ಬೈಕ್ ಕೊಡಿಸಿದ ಸುದ್ದಿ ಕೇಳಿದ್ವಿ. ಇಲ್ಲೊಬ್ಬ ಮಹಿಳೆ ಗೃಹ ಲಕ್ಷ್ಮಿ ಹಣವನ್ನು ಕೂಡಿಟ್ಟು ದೇವಸ್ಥಾನಕ್ಕೆ ದೇಣಿಗೆಯಾಗಿ ನೀಡಿದ್ದಾರೆ.
ಆರ್ಥಿಕ ಸ್ವಾವಲಂಬನೆಯೊಂದಿಗೆ ಸಮಾಜ ಸೇವೆ: ತಿಮ್ಮಾಪುರ ಮಹಿಳೆಯರ ಮಾದರಿ ನಡೆ ಎಂದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್
ಗದಗ ಜಿಲ್ಲೆಯ ತಿಮ್ಮಾಪುರ ಗ್ರಾಮದ 850 ಕ್ಕೂ ಹೆಚ್ಚು ಮಹಿಳೆಯರು ತಮ್ಮ ಗೃಹಲಕ್ಷ್ಮೀ ಯೋಜನೆಯ ಮಾಸಿಕ ಹಣವನ್ನು ಕೂಡಿಟ್ಟು, ಗ್ರಾಮದ ಶ್ರೀ ರೇಣುಕಾ ಯಲ್ಲಮ್ಮ ದೇವಸ್ಥಾನದ ನಿರ್ಮಾಣಕ್ಕೆ ದೇಣಿಗೆ ನೀಡಿರುವುದು ನಿಜಕ್ಕೂ ಮಾದರಿಯಾದ ಕೆಲಸ ಎಂಬುದಾಗಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಶ್ಲಾಘಿಸಿದ್ದಾರೆ.
ಆರ್ಥಿಕ ಸ್ವಾವಲಂಬನೆಯ ಜೊತೆಗೆ, ಇಂತಹ ಸತ್ಕಾರ್ಯಗಳಲ್ಲಿ ನಮ್ಮ ಮಹಿಳೆಯರು ತೋರುತ್ತಿರುವ ಉತ್ಸಾಹ ನನಗೆ ಹೆಮ್ಮೆ ತಂದಿದೆ. ಮಹಿಳೆಯರ ಕೈಬಲಪಡಿಸುವುದು ಎಂದರೆ ಇಡೀ ಸಮಾಜವನ್ನು ಬಲಪಡಿಸುವುದು ಎಂದರ್ಥ, ಅವರ ಈ ನಿಸ್ವಾರ್ಥ ಸೇವೆಗೆ ನನ್ನ ಹೃದಯಪೂರ್ವಕ ಅಭಿನಂದನೆಗಳನ್ನು ತಿಳಿಸಿದ್ದಾರೆ.









