ರೋಮ್: ಇಟಲಿಯ ಇಶಿಯಾ ದ್ವೀಪದಲ್ಲಿರುವ ಜನನಿಬಿಡ ಬಂದರು ನಗರದಲ್ಲಿ ಭಾನುವಾರ ಭೂಕುಸಿತ  ಉಂಟಾಗಿ 7 ಜನರು ಸಾವನ್ನಪ್ಪಿದ್ದಾರೆ ಮತ್ತು ಐವರು ನಾಪತ್ತೆಯಾಗಿದ್ದಾರೆ ಎಂದು ವರದಿಗಳು ತಿಳಿಸಿವೆ.

BIGG NEWS: ದಾವಣಗೆರೆಯಲ್ಲಿ ಏಕಾಏಕಿ ಶಾಲಾ ಮಕ್ಕಳಿಗೆ ರಜೆ ಘೋಷಣೆ; ಶಾಲೆಗೆ ಬೀಗ ಜಡಿದು ಶಿಕ್ಷಕರ ಪ್ರವಾಸ

ಇಶಿಯಾ ದ್ವೀಪದ ಉತ್ತರ ಭಾಗದಲ್ಲಿರುವ ಕ್ಯಾಂಪನಿಯಾದ ಮೆಟ್ರೋಪಾಲಿಟನ್ ಸಿಟಿ ಆಫ್ ನೇಪಲ್ಸ್‌ನಲ್ಲಿರುವ ಕಮ್ಯೂನ್ ಕ್ಯಾಸಮಿಸಿಯೋಲಾದಲ್ಲಿ ಭೂಕುಸಿತ ಉಂಟಾಗಿದ್ದು, ಹಲವರು ಇನ್ನೂ ಅವಶೇಷಗಳಡಿ ಸಿಲುಕಿರುವುದಾಗಿ ಶಂಕಿಸಲಾಗಿದೆ. ಈಗಾಗಲೇ 3 ವಾರದ ಮಗು, ಒಂದು ಜೋಡಿ ಒಡಹುಟ್ಟಿದ ಮಕ್ಕಳು ಸೇರಿದಂತೆ 7 ಜನರ ಶವಗಳನ್ನು ಹೊರತೆಗೆಯಲಾಗಿದೆ.

BIGG NEWS: ದಾವಣಗೆರೆಯಲ್ಲಿ ಏಕಾಏಕಿ ಶಾಲಾ ಮಕ್ಕಳಿಗೆ ರಜೆ ಘೋಷಣೆ; ಶಾಲೆಗೆ ಬೀಗ ಜಡಿದು ಶಿಕ್ಷಕರ ಪ್ರವಾಸ

ಭಾರೀ ಭೂಕುಸಿತದಿಂದಾಗಿ ಅನೇಕ ಕಟ್ಟಡಗಳು ಕುಸಿದಿದ್ದು, ಹಲವು ವಾಹನಗಳು ಸಮುದ್ರ ಪಾಲಾಗಿದೆ ಎಂದು ವರದಿಗಳು ತಿಳಿಸಿವೆ. ಇಟಲಿಯ ಅಗ್ನಿಶಾಮಕದಳ ಸ್ಥಳ ತಲುಪಿದ್ದು, ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿದೆ. ಸಾವಿನ ಸಂಖ್ಯೆ ಹೆಚ್ಚುವ ಸಾಧ್ಯತೆಯಿದೆ ಎನ್ನಲಾಗಿದೆ.

BIGG NEWS: ದಾವಣಗೆರೆಯಲ್ಲಿ ಏಕಾಏಕಿ ಶಾಲಾ ಮಕ್ಕಳಿಗೆ ರಜೆ ಘೋಷಣೆ; ಶಾಲೆಗೆ ಬೀಗ ಜಡಿದು ಶಿಕ್ಷಕರ ಪ್ರವಾಸ

ವರದಿಗಳ ಪ್ರಕಾರ, ಇಶಿಯಾ ದ್ವೀಪದಲ್ಲಿ 6 ಗಂಟೆಗೆ 126 ಮಿ.ಮೀ (ಸುಮಾರು 5 ಇಂಚು) ಮಳೆ ಸುರಿದಿದೆ. ಇದು ಕಳೆದ 20 ವರ್ಷಗಳಲ್ಲೇ ಸುರಿದ ಅತ್ಯಂತ ಹೆಚ್ಚಿನ ಪ್ರಮಾಣದ್ದಾಗಿದೆ. ಈ ಹಿನ್ನೆಲೆ ಭಾರೀ ಭೂಕುಸಿತ ಉಂಟಾಗಿದೆ.

Share.
Exit mobile version