ಕೊಲಂಬೊ: ಶ್ರೀಲಂಕಾದ ಪದಚ್ಯುತ ಮಾಜಿ ಅಧ್ಯಕ್ಷ ಗೋಟಬಯ ರಾಜಪಕ್ಸ(Gotabaya Rajapaksa) ಶುಕ್ರವಾರ ದೇಶಕ್ಕೆ ಮರಳಿದ್ದಾರೆ ಎಂದು ವಿಮಾನ ನಿಲ್ದಾಣದ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ರಾಜಪಕ್ಸ ಅವರು ದ್ವೀಪದ ಅತ್ಯಂತ ಕೆಟ್ಟ ಆರ್ಥಿಕ ಬಿಕ್ಕಟ್ಟಿನ ಮಧ್ಯೆ ಪಲಾಯನ ಮಾಡಿದ ಏಳು ವಾರಗಳ ನಂತರ ದೇಶಕ್ಕೆ ಮರಳಿದ್ದಾರೆ.
ರಾಜಪಕ್ಸ ಅವರು ಮುಖ್ಯ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಇಳಿಯುತ್ತಿದ್ದಂತೆ ಮಂತ್ರಿಗಳು ಮತ್ತು ರಾಜಕಾರಣಿಗಳು ಸ್ವಾಗತ ಮಾಡಿದ್ದಾರೆ ಅಧಿಕಾರಿಗಳು ತಿಳಿಸಿದ್ದಾರೆ.
ಶ್ರೀಲಂಕಾದ ಆರ್ಥಿಕ ಬಿಕ್ಕಟ್ಟಿನ ನಡುವೆ ರಾಜಪಕ್ಸ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡುವ ಮುನ್ನ ವಿದೇಶಕ್ಕೆ ಕುಟುಂಬ ಸಮೇತ ಪಲಾಯನ ಮಾಡಿದ್ದರು.
Good News : 10 ದಶಲಕ್ಷಕ್ಕೂ ಹೆಚ್ಚು ಮಕ್ಕಳಿಗೆ ‘ಉಚಿತ ಕಂಪ್ಯೂಟರ್ ಸೈನ್ಸ್ ಶಿಕ್ಷಣ’ ನೀಡುವುದಾಗಿ ‘ಗೂಗಲ್’ ಘೋಷಣೆ