ಲಾಹೋರ್: ಲಶ್ಕರ್-ಎ-ತೊಯ್ಬಾದ ಮೋಸ್ಟ್ ವಾಂಟೆಡ್ ಭಯೋತ್ಪಾದಕ ಅಬು ಖತಲ್ ನನ್ನು ಶನಿವಾರ ರಾತ್ರಿ ಪಾಕಿಸ್ತಾನದಲ್ಲಿ ಹತ್ಯೆ ಮಾಡಲಾಗಿದೆ. ಭಯೋತ್ಪಾದಕ ಸಂಘಟನೆಯ ಪ್ರಮುಖ ಕಾರ್ಯಕರ್ತನಾಗಿದ್ದ ಖತಾಲ್, ಜಮ್ಮು ಮತ್ತು ಕಾಶ್ಮೀರದಲ್ಲಿ ಅನೇಕ ದಾಳಿಗಳನ್ನು ಯೋಜಿಸಿದ್ದನು.
26/11 ಮುಂಬೈ ಭಯೋತ್ಪಾದಕ ದಾಳಿಯ ಮಾಸ್ಟರ್ ಮೈಂಡ್ ಹಫೀಜ್ ಸಯೀದ್ ನ ನಿಕಟವರ್ತಿಯಾಗಿರುವ ಅಬು ಖತಾಲ್, ಜೂನ್ 9 ರಂದು ರಿಯಾಸಿಯ ಶಿವ ಖೋರಿ ದೇವಸ್ಥಾನದಿಂದ ಹಿಂದಿರುಗುತ್ತಿದ್ದ ಯಾತ್ರಾರ್ಥಿಗಳನ್ನು ಕರೆದೊಯ್ಯುತ್ತಿದ್ದ ಬಸ್ ಮೇಲೆ ನಡೆದ ದಾಳಿಯಲ್ಲಿ ನಿರ್ಣಾಯಕ ಪಾತ್ರ ವಹಿಸಿದ್ದಾನೆ. ಈ ದಾಳಿಯನ್ನು ಖತಾಲ್ ನಾಯಕತ್ವದಲ್ಲಿ ಆಯೋಜಿಸಲಾಗಿತ್ತು.
2023 ರ ರಾಜೌರಿ ದಾಳಿಯಲ್ಲಿ ಭಾಗಿಯಾಗಿದ್ದಕ್ಕಾಗಿ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್ಐಎ) ತನ್ನ ಚಾರ್ಜ್ಶೀಟ್ನಲ್ಲಿ ಅಬು ಖತಾಲ್ ಹೆಸರನ್ನು ಉಲ್ಲೇಖಿಸಿದೆ