ಮಡಿಕೇರಿ : 2022-23ನೇ ಸಾಲಿಗೆ ಕೊಡಗು ಜಿಲ್ಲೆಯಲ್ಲಿರುವ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ ಬಾಲಕ/ ಬಾಲಕಿಯರ ವಿದ್ಯಾರ್ಥಿ ನಿಲಯಗಳಿಗೆ ಹಿಂದುಳಿದ ವರ್ಗಗಳ ಪ್ರವರ್ಗ-1, 2ಎ, 2ಬಿ, 3ಎ ಹಾಗೂ 3ಬಿ, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಕ್ಕೆ ಸೇರಿದ ಸ್ನಾತಕೋತ್ತರ ಹಾಗೂ ವೃತ್ತಿಪರ ಕೋರ್ಸುಗಳ ಅರ್ಹ ವಿದ್ಯಾರ್ಥಿಗಳಿಂದ ಮಾತ್ರ ಪ್ರವೇಶಕ್ಕೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಧಿಯನ್ನು ಮಾರ್ಚ್, 27 ರವರೆಗೆ ವಿಸ್ತರಿಸಲಾಗಿದೆ.
ಅರ್ಜಿಯನ್ನು http://shp.karnataka.gov.in ವೆಬ್ಸೈಟ್ನಲ್ಲಿ ಸಲ್ಲಿಸಬಹುದು. ವಿದ್ಯಾರ್ಥಿಯ ಪೋಷಕರ ವಾರ್ಷಿಕ ಆದಾಯ ಮಿತಿ ಪ್ರವರ್ಗ-1, ಎಸ್ಸಿ ಮತ್ತು ಎಸ್ಟಿ ರೂ.2.50 ಲಕ್ಷ ಹಾಗೂ ಪ್ರವರ್ಗ-2ಎ, 2ಬಿ, 3ಎ, 3ಬಿ ರೂ. 1 ಲಕ್ಷ ಆಗಿರುತ್ತದೆ. ಹೆಚ್ಚಿನ ಮಾಹಿತಿಗೆ ಇಲಾಖಾ ವೆಬ್ಸೈಟ್ ವಿಳಾಸ www.bcwd.karnataka.gov.in ನ್ನು ಸಂಪರ್ಕಿಸಬಹುದು ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಎನ್.ಮಂಜುನಾಥ್ ತಿಳಿಸಿದ್ದಾರೆ.
BIGG NEWS : ಮಾ.31 ರಿಂದ ‘SSLC’ ಪರೀಕ್ಷೆ ಆರಂಭ : ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಆರ್.ಲತಾ ಮಹತ್ವದ ಸೂಚನೆ
BIGG NEWS : ಮಾ.31 ರಿಂದ ‘SSLC’ ಪರೀಕ್ಷೆ ಆರಂಭ : ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಆರ್.ಲತಾ ಮಹತ್ವದ ಸೂಚನೆ
ದೇಶದ ಕಟ್ಟ ಕಡೆಯ ವ್ಯಕ್ತಿಯೂ ನಿರ್ಭೀತಿಯಿಂದ ಬದುಕುತ್ತಿದ್ದರೇ ಡಾ.ಬಿ.ಆರ್.ಅಂಬೇಡ್ಕರ್ ಕಾರಣ – ರಾಜರತ್ನಂ ಅಂಬೇಡ್ಕರ್