ಬೆಂಗಳೂರು : ಕಾಂಗ್ರೆಸ್ ಮುಕ್ತ ಕರ್ನಾಟಕವೇ ಈ ಮೈತ್ರಿ ಉದ್ದೇಶ. ಎರಡೂ ಪಕ್ಷಗಳ ಉದ್ದೇಶ ಒಂದೇ, ಕಾಂಗ್ರೆಸ್ ವಿರೋಧಿ ನೀತಿ. ಹೀಗಾಗಿ ನಾವು ಒಂದಾಗಿದ್ದೇವೆ. ಒಗ್ಗಟ್ಟಾಗಿ ಚುನಾವಣೆ ಎದುರಿಸಿದ್ದೇವೆ. ದೇವೇಗೌಡರು ಮೋದಿ ಅವರು ಈ ಮೈತ್ರಿಗೆ ಕಾರಣರು ಮಾಜಿ ಡಿಸಿಎಂ ಡಾ.ಸಿ.ಎನ್.ಅಶ್ವತ್ಥನಾರಾಯಣ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದರು.
ಸಮೃದ್ಧ ಕರ್ನಾಟಕ ನಿರ್ಮಾಣ ಈ ಮೈತ್ರಿಕೂಟದಿಂದ ಸಾಧ್ಯ. ಕಾಂಗ್ರೆಸ್ ಎದುರಿಸಲು ನಾವು ಒಂದಾಗಿದ್ದೇವೆ. ಕುಮಾರಸ್ವಾಮಿ ಅವರ ಪ್ರೀತಿಗೆ ನಾವು ಪೂರ್ಣವಾಗಿ ಸೋತಿದ್ದೇವೆ. ನಮ್ಮನ್ನೆಲ್ಲ ಪ್ರೀತಿಯಿಂದ ಕರೆದು ಮಾತನಾಡಿದ್ದಾರೆ. ಜನರು ಕಾರ್ಯಕರ್ತರು ನಮ್ಮನ್ನು ಒಪ್ಪಿದ್ದಾರೆ. ಮೊದಲ ಪರೀಕ್ಷೆಯಲ್ಲಿ ನಾವು ಪಾಸಾಗುತ್ತೇವೆ.
ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ವಿಫಲವಾಗಿದೆ. ಬರ ನಿರ್ವಹಣೆ, ಆರೋಗ್ಯ, ಮೂಲ ಸೌಕರ್ಯದಲ್ಲಿಯೂ ವಿಫಲವಾಗಿದೆ ಈ ಸರ್ಕಾರ. ಕೇವಲ ಒಂದು ಸಮುದಾಯವನ್ನು ತುಷ್ಟೀಕರಣ ಮಾಡುತ್ತಿದೆ. ಕೊಲೆ ಸುಲಿಗೆ, ಅತ್ಯಾಚಾರದಂತ ಘಟನೆಗಳು ನಿರಂತರವಾಗಿ ನಡೆಯುತ್ತಿದ್ದರೂ ಅದರ ಬಗ್ಗೆ ಮಾತನಾಡುತ್ತಿಲ್ಲ. ಕಾಂಗ್ರೆಸ್ ನವರು ಭಂಡತನದವರು, ಅವರಿಗೆ ಸೂಕ್ಷ್ಮತೆಯೇ ಇಲ್ಲ. ಅವರ ಐವತ್ತು ವರ್ಷದ ಅನುಭವ ಬರೀ ಭಾಷಣದ ಹಾವಭಾವ ಸೀಮಿತವಾಗಿ, ಸಮಾಜ ಒಡೆಯುವುದಕ್ಕೆ ಮಾತ್ರ ಮೀಸಲಾಗಿದೆ ಎಂದು ದೂರಿದರು.
ಮಾಜಿ ಸಚಿವರಾದ ಕೆ.ಗೋಪಾಲಯ್ಯ, ಮುನಿರತ್ನ, ಸಿ.ಪಿ.ಯೋಗೇಶ್ವರ್, ವಿಧಾನ ಪರಿಷತ್ ಸದಸ್ಯರಾದ ಕೆ.ಎ.ತಿಪ್ಪೇಸ್ವಾಮಿ, ಟಿ.ಎ.ಶರವಣ, ಮಾಜಿ ಶಾಸಕರಾದ ನಿಸರ್ಗ ನಾರಾಯಣಸ್ವಾಮಿ, ಡಾ.ಶ್ರೀನಿವಾಸಮೂರ್ತಿ, ಎ.ಮಂಜುನಾಥ್, ಜೆಡಿಎಸ್ ನಗರ ಘಟಕದ ಅಧ್ಯಕ್ಷ ಹೆಚ್.ಎಂ.ರಮೇಶ್ ಗೌಡ, ರಾಜ್ಯ ಮಹಿಳಾ ಜೆಡಿಎಸ್ ಅಧ್ಯಕ್ಷೆ ರಶ್ಮಿ ರಾಮೇಗೌಡ, ನಾರಾಯಣ ಸ್ವಾಮಿ (ರಾಜರಾಜೇಶ್ವರಿ ನಗರ), ಹಿರಿಯ ನಾಯಕರಾದ ಅಂದಾನಯ್ಯ, ಗಂಗಾಧರ ಮೂರ್ತಿ, ಆರ್.ಪ್ರಕಾಶ್, ರಾಜಣ್ಣ, ತಿಮ್ಮೇಗೌಡ, ಜವರಾಯಿ ಗೌಡ, ಶೈಲಜಾ ರಾವ್, ರೋಷನ್ ಅಬ್ಬಾಸ್ ಸೇರಿ ಎರಡೂ ಪಕ್ಷಗಳ ಅನೇಕ ನಾಯಕರು ಸಭೆಯಲ್ಲಿ ಭಾಗಿಯಾಗಿದ್ದರು.