ಬೆಂಗಳೂರು: ನಗರದ ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಸ್ಫೋಟಗೊಂಡಿರುವ ಘಟನೆ ರಾಜಧಾನಿಯ ಜನರನ್ನು ಬೆಚ್ಚಿಬೀಳಿಸಿದೆ. ಕಾಂಗ್ರೆಸ್ ಸರ್ಕಾರದ ಆಡಳಿತದಲ್ಲಿ ಕಾನೂನು ಸುವ್ಯವಸ್ಥೆ ದಿನದಿಂದ ದಿನಕ್ಕೆ ಕುಸಿಯಲಾರಂಭಿಸಿದೆ ಎಂಬುದಾಗಿ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ವಾಗ್ಧಾಳಿ ನಡೆಸಿದ್ದಾರೆ.
ಈ ಬಗ್ಗೆ ಇಂದು ಎಕ್ಸ್ ಮಾಡಿರುವಂತ ಅವರು, ಕೊಲೆ, ಸುಲಿಗೆ, ಗೂಂಡಾಗಿರಿ, ಮಹಿಳಾ ದೌರ್ಜನ್ಯಗಳು ಸರಣೀ ರೂಪದಲ್ಲಿ ವರದಿಯಾಗುತ್ತಲೇ ಇವೆ, ದೇಶ ಕಂಟಕ ಶಕ್ತಿಗಳು ವಿಧಾನ ಸೌಧದೊಳಗೇ ಬಂದು ‘ಪಾಕಿಸ್ತಾನ್ ಜಿಂದಾಬಾದ್’ ಘೋಷಣೆ ಕೂಗುವಷ್ಟರ ಮಟ್ಟಿಗೆ ಅಟ್ಟಹಾಸ ಮೆರೆಯುತ್ತಿದ್ದಾರೆ. ಇದೀಗ ಜನನಿಬಿಡ ಹೋಟೆಲ್ ಪ್ರವೇಶಿಸಿ ಬಾಂಬ್ ಸ್ಫೋಟಿಸಿ ಅಮಾಯಕರನ್ನು ಗಾಯಗೊಳಿಸಿ ತೀವ್ರ ಆತಂಕದ ವಾತಾವರಣ ಸೃಷ್ಠಿಸಿದೆ ಎಂದಿದ್ದಾರೆ.
ಸುಭದ್ರ ಕರ್ನಾಟಕಕ್ಕೆ ಗಂಡಾಂತರದ ಆತಂಕ ತರುವ ಚಟುವಟಿಕೆಗಳನ್ನು ಬಗ್ಗುಬಡಿಯುವಲ್ಲಿ ಮೀನಾಮೇಷ ಎಣಿಸುತ್ತಾ ಕಾಂಗ್ರೆಸ್ ಸರ್ಕಾರ ಮತ ಬ್ಯಾಂಕ್ ಲೆಕ್ಕಾಚಾರದ ಹೆಜ್ಜೆಗಳ ದಾರಿ ಬದಲಿಸಿಕೊಳ್ಳದೇ ಹೋದರೆ ಅಧಿಕಾರದಿಂದ ಕೆಳಗಿಳಿಸಿ ವಿಧಾನ ಸೌಧದಿಂದ ಹೊರ ಕಳಿಸುವ ದಾರಿ ತೋರಿಸುವ ಹೋರಾಟ ಬಿಜೆಪಿ ಕೈಗೆತ್ತಿಕೊಳ್ಳಲಿದೆ ಎಂದು ಎಚ್ಚರಿಸಿದ್ದಾರೆ.
ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಸ್ಫೋಟಗೊಂಡಿರುವ ಘಟನೆ ರಾಜಧಾನಿಯ ಜನರನ್ನು ಬೆಚ್ಚಿಬೀಳಿಸಿದೆ. ಕಾಂಗ್ರೆಸ್ ಸರ್ಕಾರದ ಆಡಳಿತದಲ್ಲಿ ಕಾನೂನು ಸುವ್ಯವಸ್ಥೆ ದಿನದಿಂದ ದಿನಕ್ಕೆ ಕುಸಿಯಲಾರಂಭಿಸಿದೆ.
ಕೊಲೆ, ಸುಲಿಗೆ, ಗೂಂಡಾಗಿರಿ, ಮಹಿಳಾ ದೌರ್ಜನ್ಯಗಳು ಸರಣೀ ರೂಪದಲ್ಲಿ ವರದಿಯಾಗುತ್ತಲೇ ಇವೆ, ದೇಶ ಕಂಟಕ ಶಕ್ತಿಗಳು ವಿಧಾನ ಸೌಧದೊಳಗೇ… pic.twitter.com/kuBi5kjgWU
— Vijayendra Yediyurappa (@BYVijayendra) March 1, 2024
ಉದ್ಯೋಗ ವಾರ್ತೆ: ‘KPSC’ಯಿಂದ ‘364 ಭೂಮಾಪಕರ’ ಹುದ್ದೆ ಭರ್ತಿಗೆ ಅರ್ಜಿ ಆಹ್ವಾನ, ಇಲ್ಲಿದೆ ಸಂಪೂರ್ಣ ಮಾಹಿತಿ
‘ರಾಜ್ಯ ಸರ್ಕಾರಿ ನೌಕರ’ರಿಗೆ ಮಹತ್ವದ ಮಾಹಿತಿ: ಪ್ರಥಮ ಅಧಿವೇಶನ ‘ಇಲಾಖಾ ಪರೀಕ್ಷೆ’ಗೆ ಅರ್ಜಿ ಆಹ್ವಾನ