Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ‘ಸುಪ್ರೀಂ ಕೋರ್ಟ್ ತೀರ್ಪಿನೊಂದಿಗೆ ಆಟವಾಡಲು ಬಯಸುವ ಯಾವುದೇ ದೇಶ…’: ಹೆಚ್ಚಿನ ಸುಂಕದ ಬಗ್ಗೆ ಟ್ರಂಪ್ ಎಚ್ಚರಿಕೆ

23/02/2026 9:50 PM

ಆರೋಗ್ಯಕರ ಲೈಂಗಿಕ ಜೀವನಕ್ಕೆ ಮಾತ್ರೆಗಳ ಅಗತ್ಯವಿಲ್ಲ: ಇಲ್ಲಿದೆ ನೈಸರ್ಗಿಕ ದಾರಿಗಳ ಬಗ್ಗೆ ಕಂಪ್ಲೀಟ್ ಗೈಡ್

23/02/2026 9:43 PM

‘ಮನರೇಗಾ’ ಹೆಸರು ಬದಲಿಸಿದ್ದು ‘ಮೋದಿ ಸರ್ಕಾರ’ದಿಂದ ಮನೆ ಹಾಳು ನಿರ್ಧಾರ: ಸಚಿವ ಬೈರತಿ ಸುರೇಶ್ ಆಕ್ರೋಶ

23/02/2026 9:38 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ರಾಜ್ಯದಲ್ಲಿ ಕಾನೂನು ವ್ಯವಸ್ಥೆ ಹದಗೆಟ್ಟಿದೆ, ಜರ ರಕ್ಷಣೆಯನ್ನು ಮಾಡುವವರೇ ಇಲ್ಲ: ಆರ್.ಅಶೋಕ್ ಕಿಡಿ
KARNATAKA

ರಾಜ್ಯದಲ್ಲಿ ಕಾನೂನು ವ್ಯವಸ್ಥೆ ಹದಗೆಟ್ಟಿದೆ, ಜರ ರಕ್ಷಣೆಯನ್ನು ಮಾಡುವವರೇ ಇಲ್ಲ: ಆರ್.ಅಶೋಕ್ ಕಿಡಿ

By kannadanewsnow0918/01/2025 2:19 PM

ಬೆಂಗಳೂರು: ಕರ್ನಾಟಕ ದರೋಡೆ ರಾಜ್ಯವಾಗಿ ಬದಲಾಗಿದ್ದು, ಜನರು ಆತಂಕದಲ್ಲಿ ಬದುಕುತ್ತಿದ್ದಾರೆ. ಜನರ ರಕ್ಷಣೆಯನ್ನು ಮಾಡುವವರೇ ಇಲ್ಲ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಆಕ್ರೋಶ ವ್ಯಕ್ತಪಡಿಸಿದರು.

ವಿಧಾನಸೌಧದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬೀದರ್‌ನಲ್ಲಿ ಬ್ಯಾಂಕ್‌ನ ಹಣದ ದರೋಡೆ ಹಾಗೂ ಸಿಬ್ಬಂದಿ ಕೊಲೆ ನಡೆದಿದೆ. ಮಂಗಳೂರಿನಲ್ಲಿ ಹಾಲಿವುಡ್‌ ಸಿನಿಮಾ ಶೈಲಿಯಲ್ಲಿ 15 ಕೋಟಿ ರೂ. ಬ್ಯಾಂಕ್‌ ಹಣ ಲೂಟಿಯಾಗಿದೆ. ರಾಜ್ಯದ ಪೊಲೀಸರ ಬಗ್ಗೆ ಯಾರಿಗೂ ಭಯವಿಲ್ಲ. ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಪೊಲೀಸ್‌ ಅಧಿಕಾರಿಗಳ ಮೇಲೆ ಎಷ್ಟು ಹಿಡಿತ ಇದೆ ಎಂದು ಇದರಿಂದ ತಿಳಿಯುತ್ತದೆ. ರಾಜ್ಯದ ಕಾನೂನು ವ್ಯವಸ್ಥೆ ಎಷ್ಟು ಹದಗೆಟ್ಟಿದೆ ಎಂದು ಗೊತ್ತಾಗಿದೆ ಎಂದರು.

ಬೇರೆ ರಾಜ್ಯಗಳಿಂದ ಕಳ್ಳರು ಬಂದು ದರೋಡೆ ಮಾಡಿಕೊಂಡು ಬಸ್ಸು, ರೈಲಿನಲ್ಲಿ ಹೋಗುತ್ತಿದ್ದಾರೆ. ಜನರು ಅವರ ರಕ್ಷಣೆಯನ್ನು ಅವರೇ ಮಾಡಿಕೊಳ್ಳುವ ಪರಿಸ್ಥಿತಿ ಬಂದಿದೆ. ಪೊಲೀಸರ ಕೈಯಲ್ಲಿ ಪಿಸ್ತೂಲ್‌ ಇಲ್ಲ. ಆದರೆ ದರೋಡೆ ಮಾಡುವವರ ಕೈಯಲ್ಲಿ ಆಧುನಿಕ ಶಸ್ತ್ರಾಸ್ತ್ರಗಳಿವೆ ಎಂದರು.

ಲವ್‌ ಜಿಹಾದ್‌, ಕೋಮುಗಲಭೆ, ಹಸುಗಳ ಕೆಚ್ಚಲು ಕತ್ತರಿಸಿದ್ದು ಮೊದಲಾದ ಘಟನೆಗಳ ವಿರುದ್ಧ ಕಠಿಣ ಕ್ರಮ ವಹಿಸಲಿಲ್ಲ. ಪೊಲೀಸ್‌ ಇಲಾಖೆ ವರ್ಗಾವಣೆ ದಂಧೆಯಲ್ಲಿ ತೊಡಗಿದ್ದು, ಅಧಿಕಾರಿಗಳು ಸಾಯುತ್ತಿದ್ದಾರೆ. ಇಷ್ಟಾದರೂ ಮುಖ್ಯಮಂತ್ರಿ ಸಿದ್ದರಾಮಯ್ಯ ಗೃಹ ಇಲಾಖೆಯ ಸಭೆ ಕರೆದು ಮಾತನಾಡಿಲ್ಲ. ಡಿ.ಕೆ.ಶಿವಕುಮಾರ್‌-ಸತೀಶ್‌ ಜಾರಕಿಹೊಳಿ ಗಲಾಟೆ, ಸಿಎಂ ನಿರ್ಗಮನ ಮೊದಲಾದ ರಾಜಕೀಯದಲ್ಲೇ ಸರ್ಕಾರ ಮುಳುಗಿದೆ. ಹೀಗಾಗಿ ಅಧಿಕಾರಿಗಳಿಗೆ ಕೆಲಸ ಮಾಡಲು ಆಸಕ್ತಿ ಇಲ್ಲ ಎಂದು ದೂರಿದರು.

ಕರ್ನಾಟಕ ದರೋಡೆಕೋರರ ಸ್ವರ್ಗವಾಗಿರುವುದರಿಂದ ಹೂಡಿಕೆದಾರರು ಮುಂದೆ ಬರುತ್ತಿಲ್ಲ. ಇದು ಪಶ್ಚಿಮ ಬಂಗಾಳದಂತೆಯೇ ಆಗುತ್ತಿದೆ. ಎಲ್ಲರೂ ಆತಂಕದಲ್ಲೇ ಬದುಕುತ್ತಿದ್ದಾರೆ ಎಂದರು.

ಶ್ವೇತಪತ್ರ ಬಿಡುಗಡೆ ಮಾಡಿ

ಬಸವರಾಜ ಬೊಮ್ಮಾಯಿ ಅವಧಿಯಲ್ಲಿ ಎಷ್ಟು ಅನುದಾನ ಬಿಡುಗಡೆ ಮಾಡಿದ್ದಾರೆ, ಸಿಎಂ ಸಿದ್ದರಾಮಯ್ಯ ಎಷ್ಟು ಅನುದಾನ ನೀಡಿದ್ದಾರೆ ಎಂದು ಶ್ವೇತಪತ್ರ ಬಿಡುಗಡೆ ಮಾಡಲಿ. ಬಿಜೆಪಿ ಅವಧಿಯಲ್ಲಿ ಎಷ್ಟು ಸಾಲ ಮಾಡಲಾಗಿದೆ, ಕಾಂಗ್ರೆಸ್‌ ಅವಧಿಯಲ್ಲಿ 60 ವರ್ಷಗಳಲ್ಲಿ ಎಷ್ಟು ಸಾಲ ಮಾಡಲಾಗಿದೆ ಎಂದು ಕೂಡ ತಿಳಿಸಲಿ ಎಂದು ಸವಾಲೆಸೆದರು.

ಕ್ಲೀನ್‌ಚಿಟ್‌ಗೆ ಸಿದ್ಧತೆ

ಮುಡಾಗೆ ಸಂಬಂಧಿಸಿದಂತೆ ಕೇಳಿದ ಪ್ರಶ್ನೆಗೆ ನನಗೆ ಉತ್ತರ ನೀಡಿಲ್ಲ. ಲೋಕಾಯುಕ್ತ ಪೊಲೀಸರು ತನಿಖೆ ಮಾಡಲು ಆಸಕ್ತಿ ತೋರದೆ ಕ್ಲೀನ್‌ಚಿಟ್‌ ನೀಡಲು ಸಿದ್ಧತೆ ಮಾಡಿಕೊಂಡಿರುವಂತಿದೆ. ಜಾರಿ ನಿರ್ದೇಶನಾಲಯ ಮಧ್ಯವರ್ತಿಗಳ ಹಣವನ್ನು ವಶಕ್ಕೆ ಪಡೆದಿದೆ. ಆದರೆ ಲೋಕಾಯುಕ್ತ ಪೊಲೀಸರು ಏನೂ ಮಾಡಿಲ್ಲ. ಆದ್ದರಿಂದ ಸಿಬಿಐ ತನಿಖೆಗೆ ವಹಿಸಿ ಎಂದು ಒತ್ತಾಯಿಸಿದ್ದೇವೆ ಎಂದರು.

ಬೆಂಗಳೂರಿನಲ್ಲಿ ರಸ್ತೆ ಗುಂಡಿಗಳು ಹೆಚ್ಚಿವೆ, ಸರ್ಕಾರಿ ಆಸ್ಪತ್ರೆಗಳಲ್ಲಿ ಬಾಣಂತಿಯರ ಬದುಕಿಗೆ ಗ್ಯಾರಂಟಿ ಇಲ್ಲ. ಇಂತಹ ಪರಿಸ್ಥಿತಿಯಲ್ಲೂ ಸರ್ಕಾರ ದರ ಏರಿಕೆ ಮಾಡುತ್ತಿದೆ. ಈ ರೀತಿ ಮಾಡುವ ಬದಲು ಒಂದೇ ಬಾರಿಗೆ ದರ ಏರಿಕೆ ಮಾಡಲಿ ಎಂದರು.

‘BPL, APL ಕಾರ್ಡ್’ದಾರರೇ ಗಮನಿಸಿ: ಜ.31 ‘e-KYC’ಗೆ ಲಾಸ್ಟ್ ಡೇಟ್, ಮಾಡಿಸದಿದ್ರೆ ಬರಲ್ಲ ರೇಷನ್

ರಾಜ್ಯದ ‘ದ್ವಿತೀಯ PUC ವಿದ್ಯಾರ್ಥಿ’ಗಳ ಗಮನಕ್ಕೆ: ‘ಅಂಕಪಟ್ಟಿ’ಯಲ್ಲಿನ ‘ತಪ್ಪು ತಿದ್ದುಪಡಿ’ಗೆ ಅವಕಾಶ

Share. Facebook Twitter LinkedIn WhatsApp Email

Related Posts

‘ಮನರೇಗಾ’ ಹೆಸರು ಬದಲಿಸಿದ್ದು ‘ಮೋದಿ ಸರ್ಕಾರ’ದಿಂದ ಮನೆ ಹಾಳು ನಿರ್ಧಾರ: ಸಚಿವ ಬೈರತಿ ಸುರೇಶ್ ಆಕ್ರೋಶ

23/02/2026 9:38 PM2 Mins Read

ಬೆಂಗಳೂರಲ್ಲಿ 688 ಕೋಟಿ ರೂಪಾಯಿ ಬಾಕಿ ಆಸ್ತಿ ತೆರಿಗೆ ವಸೂಲಾತಿ ಮಾಡಿದ GBA

23/02/2026 9:32 PM2 Mins Read

ಛೇ..! ಇವನೆಂಥ ಮಾವ! ಮಗಳನ್ನು ಪ್ರೀತಿಸಿ ಮದುವೆಯಾದ ಹುಡುಗನ ಮನೆಗೆ ಬೆಂಕಿ ಹಚ್ಚಿದ ಪಾಪಿ ತಂದೆ!

23/02/2026 9:29 PM1 Min Read
Recent News

BREAKING : ‘ಸುಪ್ರೀಂ ಕೋರ್ಟ್ ತೀರ್ಪಿನೊಂದಿಗೆ ಆಟವಾಡಲು ಬಯಸುವ ಯಾವುದೇ ದೇಶ…’: ಹೆಚ್ಚಿನ ಸುಂಕದ ಬಗ್ಗೆ ಟ್ರಂಪ್ ಎಚ್ಚರಿಕೆ

23/02/2026 9:50 PM

ಆರೋಗ್ಯಕರ ಲೈಂಗಿಕ ಜೀವನಕ್ಕೆ ಮಾತ್ರೆಗಳ ಅಗತ್ಯವಿಲ್ಲ: ಇಲ್ಲಿದೆ ನೈಸರ್ಗಿಕ ದಾರಿಗಳ ಬಗ್ಗೆ ಕಂಪ್ಲೀಟ್ ಗೈಡ್

23/02/2026 9:43 PM

‘ಮನರೇಗಾ’ ಹೆಸರು ಬದಲಿಸಿದ್ದು ‘ಮೋದಿ ಸರ್ಕಾರ’ದಿಂದ ಮನೆ ಹಾಳು ನಿರ್ಧಾರ: ಸಚಿವ ಬೈರತಿ ಸುರೇಶ್ ಆಕ್ರೋಶ

23/02/2026 9:38 PM

ಬೆಂಗಳೂರಲ್ಲಿ 688 ಕೋಟಿ ರೂಪಾಯಿ ಬಾಕಿ ಆಸ್ತಿ ತೆರಿಗೆ ವಸೂಲಾತಿ ಮಾಡಿದ GBA

23/02/2026 9:32 PM
State News
KARNATAKA

‘ಮನರೇಗಾ’ ಹೆಸರು ಬದಲಿಸಿದ್ದು ‘ಮೋದಿ ಸರ್ಕಾರ’ದಿಂದ ಮನೆ ಹಾಳು ನಿರ್ಧಾರ: ಸಚಿವ ಬೈರತಿ ಸುರೇಶ್ ಆಕ್ರೋಶ

By kannadanewsnow0923/02/2026 9:38 PM KARNATAKA 2 Mins Read

ಚಿಕ್ಕಬಳ್ಳಾಪುರ: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಮನರೇಗಾ ಯೋಜನೆಯನ್ನು ಬದಲಾಯಿಸಿ ವಿಬಿಜಿ ರಾಮ್ ಜಿ ಎಂದು ನಾಮಕರಣ…

ಬೆಂಗಳೂರಲ್ಲಿ 688 ಕೋಟಿ ರೂಪಾಯಿ ಬಾಕಿ ಆಸ್ತಿ ತೆರಿಗೆ ವಸೂಲಾತಿ ಮಾಡಿದ GBA

23/02/2026 9:32 PM

ಛೇ..! ಇವನೆಂಥ ಮಾವ! ಮಗಳನ್ನು ಪ್ರೀತಿಸಿ ಮದುವೆಯಾದ ಹುಡುಗನ ಮನೆಗೆ ಬೆಂಕಿ ಹಚ್ಚಿದ ಪಾಪಿ ತಂದೆ!

23/02/2026 9:29 PM

ಅಸ್ಪೃಶ್ಯತೆ ನಿರ್ಮೂಲನೆಗೆ ಎಲ್ಲರೂ ದೃಢ ಸಂಕಲ್ಪ ಮಾಡಿ: SC, ST ಮೇಲ್ವಿಚಾರಕಿ ಮತ್ತು ಬಲವರ್ಧನೆ ಸಮಿತಿ ಸಂಚಾಲಕಿ ಪಿ.ಯಶೋಧ

23/02/2026 9:25 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.