ಶಿವಮೊಗ್ಗ : 2022-23 ನೇ ಸಾಲಿನ ಆಡಳಿತ ನ್ಯಾಯಾಧಿಕರಣ ಯೋಜನೆಯಡಿ ಜಿಲ್ಲಾ ವ್ಯಾಪ್ತಿಗೆ ಒಳಪಡುವ 06 ಅಭ್ಯರ್ಥಿಗಳಿಗೆ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖಾ ವತಿಯಿಂದ ಕಾನೂನು ಪದವೀಧರರಿಗೆ ನ್ಯಾಯವಾದಿ ವೃತ್ತಿಯ ಪ್ರಾಯೋಗಿಕ ತರಬೇತಿ ಕಾರ್ಯಕ್ರಮದಡಿ ಶಿಷ್ಯವೇತನ ನೀಡಲು ಪರಿಶಿಷ್ಟ ಪಂಗಡದ ಕಾನೂನು ಪದವೀಧರರಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಅರ್ಹ ಅಭ್ಯರ್ಥಿಗಳು ಆನ್ಲೈನ್ https://tw.kar.nic.in ಮೂಲಕ ಅರ್ಜಿ ಸಲ್ಲಿಸಿ, ಸಲ್ಲಿಸಿದ ಅರ್ಜಿ ಪ್ರತಿಯನ್ನು ಅಗತ್ಯ ದಾಖಲಾತಿಗಳೊಂದಿಗೆ ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿಗಳ ಕಚೇರಿ, ಶಿವಮೊಗ್ಗ ಇಲ್ಲಿಗೆ ನವೆಂಬರ್ 30 ರ ಒಳಗಾಗಿ ಸಲ್ಲಿಸಬೇಕು.
ಅಭ್ಯರ್ಥಿಯ ವಯಸ್ಸು 40 ವರ್ಷದೊಳಗಿದ್ದು ಜಿಲ್ಲೆಯ ಅಭ್ಯರ್ಥಿಗಳು ಮಾತ್ರ ಅರ್ಜಿ ಸಲ್ಲಿಸತಕ್ಕದ್ದು. ಅರ್ಜಿ ಸಲ್ಲಿಸಲು ನಿಗದಿಪಡಿಸಿರುವ ಕೊನೆಯ ದಿನಾಂಕಕ್ಕೆ ಎರಡು ವರ್ಷದ ಒಳಗೆ ಕಾನೂನು ಪದವಿಯನ್ನು ಪಡೆದಿರಬೇಕು. ಕುಟುಂಬದ ವಾರ್ಷಿಕ ಆದಾಯ ರೂ.2.50 ಲಕ್ಷ ಮೀರಿರಬಾರದು. ವಕೀಲರ ಸಂಘದಲ್ಲಿ ಅಭ್ಯರ್ಥಿಯು ಹೆಸರನ್ನು ನೋಂದಾಯಿಸಿರಬೇಕು. ತರಬೇತಿ ಅವಧಿ 2 ವರ್ಷಗಳಾಗಿದ್ದು ಮಾಸಿಕ ರೂ.10,000/- ಗಳ ಶಿಷ್ಯವೇತನ ನೀಡಲಾಗುವುದು.
BIGG NEWS : ಪಡಿತರ ಚೀಟಿದಾರರಿಗೆ ಮತ್ತೊಂದು ಗುಡ್ ನ್ಯೂಸ್ : ನ್ಯಾಯಬೆಲೆ ಅಂಗಡಿಗಳಲ್ಲೇ ಸಿಗಲಿವೆ ಈ ಎಲ್ಲಾ ಸೇವೆಗಳು!
ಹೆಚ್ಚಿನ ಮಾಹಿತಿಗೆ ದೂರವಾಣಿ ಸಂಖ್ಯೆ : 08182-279222, 9482762350 ನ್ನು ಸಂಪರ್ಕಿಸಬಹುದೆಂದು ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ಅಜ್ಜಪ್ಪ ಹೆಚ್.ಇ ತಿಳಿಸಿದ್ದಾರೆ.