ಬೆಂಗಳೂರು: ಲಕ್ಷ್ಮಣ್ ಸವದಿ ಅವರನ್ನು ಭೇಟಿ ಮಾಡಿದ್ದ ಬಗ್ಗೆ ಕೇಳಿದಾಗ, ನಾನು ಶೆಟ್ಟರ್ ಅವರ ಜತೆಗೆ ಬಂದವನಲ್ಲ. ನಾನು ನನ್ನ ವೈಯಕ್ತಿಕ ನಿರ್ಧಾರದಿಂದ ಕಾಂಗ್ರೆಸ್ ಪಕ್ಷಕ್ಕೆ ಬಂದಿದ್ದೇನೆ. ನಾವೆಲ್ಲರೂ ಒಟ್ಟಾಗಿ ಕೆಲಸ ಮಾಡೋಣ ಎಂದು ಸವದಿ ಅವರು ಸ್ಪಷ್ಟವಾಗಿ ಹೇಳಿದ್ದಾರೆ. ಜತೆಗೆ ಅವರೇ ಮಾಧ್ಯಮಗಳಿಗೆ ಉತ್ತರ ನೀಡಿದ್ದಾರೆ. ಅವರು ಈಗ ನಮ್ಮ ಪಕ್ಷದ ನಾಯಕರು ಹಾಗೂ ಪ್ರಮುಖ ಆಸ್ತಿ ಎಂದು ಡಿಸಿಎಂ ಡಿ.ಕೆ ಶಿವಕುಮಾರ್ ತಿಳಿಸಿದರು.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಬಿಜೆಪಿಯವರು ಸವದಿ ಅವರನ್ನು ಸೆಳೆಯುವ ಪ್ರಯತ್ನ ಮಾಡುತ್ತಿರುವ ಬಗ್ಗೆ ಕೇಳಿದಾಗ, “ಬಿಜೆಪಿಯವರು ಯಾರನ್ನೂ ಬಿಡುತ್ತಿಲ್ಲ. ಎಲ್ಲರನ್ನು ಸೆಳೆಯುವ ಪ್ರಯತ್ನ ಮಾಡುತ್ತಿದ್ದಾರೆ. ನಮಗೂ ಆ ಕೆಲಸ ಗೊತ್ತಿದೆ. ನಾವು ಮನಸ್ಸು ಮಾಡಿದ್ದರೆ ಎಷ್ಟೋ ಮನೆಗಳು ಖಾಲಿಯಾಗಿರುತ್ತಿದ್ದವು” ಎಂದು ತಿಳಿಸಿದರು.
ನಮ್ಮ ಸಿದ್ಧಾಂತದಲ್ಲಿದ್ದವರನ್ನು ಮತ್ತೆ ಕರೆತರುವ ಪ್ರಯತ್ನದಲ್ಲಿದ್ದೇವೆ ಎಂಬ ಸುನೀಲ್ ಕುಮಾರ್ ಅವರ ಹೇಳಿಕೆ ಬಗ್ಗೆ ಕೇಳಿದಾಗ, “ನಮ್ಮ ಪಕ್ಷದಿಂದ ಕರೆದುಕೊಂಡು ಹೋದರಲ್ಲ, ಅವರಿಗೆ ಯಾವ ಸಿದ್ಧಾಂತವಿತ್ತು? ಈಗ ಅವರಿಗೆ ಯಾವ ಸಿದ್ಧಾಂತದ ಪಾಠ ಮಾಡುತ್ತಿದ್ದಾರೆ? ಆಗ ಅವರೆಲ್ಲರೂ ಆ ಸಿದ್ಧಾಂತ ಒಪ್ಪಿದ್ದಾರಾ? ಈ ಬಗ್ಗೆ ಅವರ ಕ್ಷೇತ್ರದ ಕಾರ್ಯಕರ್ತರನ್ನು ಕೇಳಿ ನೋಡಿ, ಹೇಳುತ್ತಾರೆ” ಎಂದು ತಿಳಿಸಿದರು.
ಮುಂದೆ ಪಕ್ಷಕ್ಕೆ ಸೇರಿಸಿಕೊಳ್ಳುವಾಗ ತತ್ವ ಸಿದ್ಧಾಂತಕ್ಕೆ ಬದ್ಧರಾಗಿರುವವರನ್ನು ಸೇರಿಸಿಕೊಳ್ಳಿ ಎಂಬ ಖರ್ಗೆ ಅವರ ಸಲಹೆ ಬಗ್ಗೆ ಕೇಳಿದಾಗ, “ಖಂಡಿತವಾಗಿ ದೊಡ್ಡವರು ಹೇಳಿದ ಸಲಹೆಗಳನ್ನು ಸ್ವೀಕರಿಸುತ್ತೇವೆ. ಕೆಲವು ವಿಚಾರದಲ್ಲಿ ಹಿರಿಯರ ಸಲಹೆ ಬಹಳ ಮುಖ್ಯ” ಎಂದು ತಿಳಿಸಿದರು.
ಸೆಲೆಬ್ರಿಟಿಗಳ 1,000 ಕ್ಕೂ ಹೆಚ್ಚು ‘ಡೀಪ್‌ಫೇಕ್’ ಹಗರಣ ಜಾಹೀರಾತು ವೀಡಿಯೊಗಳನ್ನು ಅಳಿಸಿದ YouTube
BIG NEWS : ಬಿಜೆಪಿ ಜೆಡಿಎಸ್ ನಿಂದ 30 ಜನ ಬರ್ತಾರೆ : ಸ್ಪೋಟಕ ಹೇಳಿಕೆ ನೀಡಿದ ಸಚಿವ ಚೆಲುವರಾಯಸ್ವಾಮಿ