ಬೆಂಗಳೂರು: ಬಳ್ಳಾರಿಯಲ್ಲಿ ಬಾಣಂತಿಯರ ಸಾವು ಸಂಭವಿಸಿದೆ. ದಿನೇಶ್ ಗುಂಡೂರಾವ್ ಅವರು ಆರೋಗ್ಯ ಸಚಿವರಾಗಲು ಯೋಗ್ಯರೇ? ಅವರೇನು ವೈದ್ಯರೇ? ಎಂಬಿಬಿಎಸ್ ಓದಿದವರೇ? ಪಿಎಚ್‍ಡಿ ಆಗಿದೆಯೇ? ಎಂದು ಕೇಳಿದರು. ದನಕರುಗಳಿಗೆ ಕೊಡುವ ಔಷಧಿಗಳು ಆಸ್ಪತ್ರೆಗೆ ಸರಬರಾಜಾದ ಬಗ್ಗೆ ಸದನದಲ್ಲಿ ಕೇಳಿದ್ದೆವು. ಅದು ಮುದ್ರಣದ ತಪ್ಪು ಎಂದಿದ್ದರು. ಬಳಿಕ ವರದಿ ಬಂದಾಗ ಅದಾಗಿದ್ದು ನಿಜ; ವಿಷಯ ತಿಳಿದು ವಾಪಸ್ ಕಳಿಸಿದ್ದಾಗಿ ಹೇಳಿದ್ದರು ಎಂದು ಛಲವಾದಿ ನಾರಾಯಣಸ್ವಾಮಿ ಅವರು ವಿವರಿಸಿದರು.
ಯಾದಗಿರಿಯಲ್ಲಿ ವೆಟರ್ನರಿ ಔಷಧಿ ಆಸ್ಪತ್ರೆಗೆ ಸರಬರಾಜಾಗಿದೆ. ಬಾಣಂತಿಯರಿಗೆ ಕೊಟ್ಟ ಔಷಧಿ ಕಳಪೆ ಆಗಿದ್ದುದಲ್ಲದೇ, ಕೊಟ್ಟ ದ್ರಾವಣಗಳು ಕಳಪೆ ಎಂದು ವರದಿ ಬರುತ್ತಿದೆ. ಹೀಗಿದ್ದರೂ ಅವರನ್ನು ಬದಲಿಸಿಲ್ಲ; ಇದು ಜೀವಗಳ ಜೊತೆ ಆಟ. ದಿನೇಶ್ ಗುಂಡೂರಾವ್ ಅವರನ್ನು ತಕ್ಷಣ ವಜಾ ಮಾಡಬೇಕೆಂದು ಆಗ್ರಹಿಸಿದರು.
BREAKING NEWS: ಐಸಿಸಿ ಚಾಂಪಿಯನ್ಸ್ ಟ್ರೋಫಿಗೆ ಭಾರತ ತಂಡ ಪಾಕಿಸ್ತಾನಕ್ಕೆ ಭೇಟಿ ನೀಡುವುದಿಲ್ಲ: MEA ಸ್ಪಷ್ಟನೆ
BIG NEWS : ಬಳ್ಳಾರಿ ಜಿಲ್ಲಾಸ್ಪತ್ರೆಯಲ್ಲಿ ಬಾಣಂತಿಯರ ಸಾವು ಪ್ರಕರಣ : ತನಿಖೆಯಲ್ಲಿ ಸ್ಪೋಟಕ ಅಂಶ ಬಹಿರಂಗ!