ಬೆಂಗಳೂರು : ಲೋಕಸಭೆಯ ವಿರೋಧ ಪಕ್ಷದ ನಾಯಕನಾಗಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರು ಆಯ್ಕೆಯಾಗಿದ್ದಾರೆ. ಈ ಕುರಿತಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಟ್ವೀಟ್ ಮೂಲಕ ರಾಹುಲ್ ಗಾಂಧಿಯವರಿಗೆ ಅಭಿನಂದಿಸಿದ್ದಾರೆ.
ಟ್ವೀಟ್ ನಲ್ಲಿ ಅಭಿನಂದಿಸಿದ ಸಿಎಂ ಸಿದ್ದರಾಮಯ್ಯ ಲೋಕಸಭೆಯಲ್ಲಿ ವಿರೋಧ ಪಕ್ಷದ ನಾಯಕರಾಗಿ ಆಯ್ಕೆಯಾದ ನಮ್ಮೆಲ್ಲರ ನೆಚ್ಚಿನ ನಾಯಕ ರಾಹುಲ್ ಗಾಂಧಿ ಅವರಿಗೆ ಅಭಿನಂದನೆಗಳು. ಸೇಡಿನ ರಾಜಕಾರಣ ಮತ್ತು ನಿರಂತರವಾದ ವೈಯಕ್ತಿಕ ಚಾರಿತ್ರ್ಯಹನನವನ್ನು ಎದುರಿಸುತ್ತಲೇ ತನ್ನ ದಣಿವರಿಯದ ಹೋರಾಟದ ಮೂಲಕ ಸರ್ವಾಧಿಕಾರಿ ಆಡಳಿತದಿಂದ ದೇಶವನ್ನು ರಕ್ಷಿಸಿದರಾಹುಲ್ ಗಾಂಧಿಯವರು ಸಾಧನೆಯ ಮೂಲಕ ಈ ಪದವಿಯನ್ನು ಗಳಿಸಿದ್ದಾರೆ.
ಸೈದ್ಧಾಂತಿಕ ಬದ್ಧತೆ, ದೂರದರ್ಶಿತ್ವ ಮತ್ತು ಜನಪರ ಕಾಳಜಿಯ ರಾಹುಲ್ ಗಾಂಧಿಯವರು ಲೋಕಸಭೆಯಲ್ಲಿ ವಿರೋಧ ಪಕ್ಷದ ನಾಯಕರಾಗಿ ಆಡಳಿತ ಪಕ್ಷಕ್ಕೆ ಸಿಂಹ ಸ್ವಪ್ನರಾಗಲಿದ್ದಾರೆ ಎಂದು ಅವರು ತಿಳಿಸಿದ್ದಾರೆ.
ಲೋಕಸಭೆಯಲ್ಲಿ ವಿರೋಧ ಪಕ್ಷದ ನಾಯಕರಾಗಿ ಆಯ್ಕೆಯಾದ ನಮ್ಮೆಲ್ಲರ ನೆಚ್ಚಿನ ನಾಯಕ @RahulGandhi ಅವರಿಗೆ ಅಭಿನಂದನೆಗಳು.
ಸೇಡಿನ ರಾಜಕಾರಣ ಮತ್ತು ನಿರಂತರವಾದ ವೈಯಕ್ತಿಕ ಚಾರಿತ್ರ್ಯಹನನವನ್ನು ಎದುರಿಸುತ್ತಲೇ ತನ್ನ ದಣಿವರಿಯದ ಹೋರಾಟದ ಮೂಲಕ ಸರ್ವಾಧಿಕಾರಿ ಆಡಳಿತದಿಂದ ದೇಶವನ್ನು ರಕ್ಷಿಸಿದ
ರಾಹುಲ್ ಗಾಂಧಿಯವರು ಸಾಧನೆಯ ಮೂಲಕ ಈ ಪದವಿಯನ್ನು… pic.twitter.com/bUP8tkJ25n— Siddaramaiah (@siddaramaiah) June 25, 2024