ಉಡುಪಿ: ಕುಂದಾಪುರದಲ್ಲಿ ಖಾಸಗಿ ಕಾಲೇಜಿನ ಗಣಿತಶಾಸ್ತ್ರ ಉಪನ್ಯಾಸಕ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಆನಂದ ಗೌಡ ನೇಣಿಕೆ ಶರಣಾದ ಉಪನ್ಯಾಸಕ.
ಕುಂದಾಪುರ ಅಂಕದಟ್ಟೆ ಬಾಡಿಗೆ ಮನೆಯಲ್ಲಿ ಇಂದು ಬೆಳಗ್ಗೆ ನೇಣಿಗೆ ಶರಣಾಗಿದ್ದಾರೆ. ಎರಡು ತಿಂಗಳ ಹಿಂದೆ ಆನಂದ್ ಅವರ ಮದುವೆ ನಡೆದಿತ್ತು. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಮಾನಸಿಕ ಖಿನ್ನತೆಯಿಂದ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ.