ಬೆಂಗಳೂರು: ರಾಜ್ಯದಲ್ಲಿ ರಾಸಾಯನಿಕ ಮಿಶ್ರಿತ ಶೇಂದಿ ಮಾರಾಟ ಮಾಡುತ್ತಿರುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವುದಾಗಿ ಅಬಕಾರಿ ಸಚಿವ ಆರ್.ಬಿ ತಿಮ್ಮಾಪುರ ತಿಳಿಸಿದ್ದಾರೆ.
ಬಳ್ಳಾರಿ ಜಿಲ್ಲೆಯಲ್ಲಿ ಆಂಧ್ರಪ್ರದೇಶದಿಂದ ತಂದ ಕ್ಲೋರಲ್ ಹೈಡ್ರೇಟ್ ಎಂಬ ಅಪಾಯಕಾರಿ ರಾಸಾಯನಿಕ ಮಿಶ್ರಿತ ಶೇಂದಿಯನ್ನು ಮಾರಾಟ ಮಾಡುತ್ತಿರುವವರ ವಿರುದ್ಧ ಗೂಂಡಾ ಕಾಯ್ದೆ ಬಳಕೆ ಮಾಡಲಾಗುವುದು ಎಂಬುದಾಗಿ ಎಚ್ಚರಿಸಿದರು.
ಕಳೆದ 3 ವರ್ಷಗಳಲ್ಲಿ ಬಳ್ಳಾರಿ ಜಿಲ್ಲಾ ವ್ಯಾಪ್ತಿಯಲ್ಲಿ ಶೇಂದಿ ಕಳ್ಳಸಾಗಾಣಿಕೆಗೆ ಸಂಬಂಧಿಸಿದಂತೆ 140 ಪ್ರಕರಣಗಳನ್ನು ದಾಖಲಿಸಿ, 160 ಆರೋಪಿಗಳನ್ನು ಬಂಧಿಸಲಾಗಿದೆ. 1,691 ಲೀ. ಶೇಂದಿಯನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಅಬಕಾರಿ ಸಚಿವರಾದ ಆರ್.ಬಿ.ತಿಮ್ಮಾಪುರ ಅವರು ವಿಧಾನ ಮಂಡಲದ ಅಧಿವೇಶನದಲ್ಲಿ ಪ್ರಶ್ನೋತ್ತರ ಕಲಾಪದ ವೇಳೆ ತಿಳಿಸಿದರು.
ಬಳ್ಳಾರಿ ಜಿಲ್ಲೆಯಲ್ಲಿ ಆಂಧ್ರಪ್ರದೇಶದಿಂದ ತಂದ ಕ್ಲೋರಲ್ ಹೈಡ್ರೇಟ್ ಎಂಬ ಅಪಾಯಕಾರಿ ರಾಸಾಯನಿಕ ಮಿಶ್ರಿತ ಶೇಂದಿಯನ್ನು ಮಾರಾಟ ಮಾಡುತ್ತಿರುವವರ ವಿರುದ್ಧ ಗೂಂಡಾ ಕಾಯ್ದೆ ಬಳಕೆ ಮಾಡಲಾಗುವುದು. ಕಳೆದ 3 ವರ್ಷಗಳಲ್ಲಿ ಬಳ್ಳಾರಿ ಜಿಲ್ಲಾ ವ್ಯಾಪ್ತಿಯಲ್ಲಿ ಶೇಂದಿ ಕಳ್ಳಸಾಗಾಣಿಕೆಗೆ ಸಂಬಂಧಿಸಿದಂತೆ 140 ಪ್ರಕರಣಗಳನ್ನು ದಾಖಲಿಸಿ, 160 ಆರೋಪಿಗಳನ್ನು… pic.twitter.com/xYF1sXzQe6
— DIPR Karnataka (@KarnatakaVarthe) August 13, 2025
ಕೃತಕ ಬುದ್ದಿಮತ್ತೆ ಕ್ಷೇತ್ರದಲ್ಲಿ ‘ಸಚಿವ ಪ್ರಿಯಾಂಕ್ ಖರ್ಗೆ’ ಸಾಧನೆ: ದೇಶದ 10 ಪ್ರಭಾವಿಶಾಲಿ ಗಣ್ಯರ ಸಾಲಿಗೆ ಸೇರ್ಪಡೆ
ರಾಜ್ಯದ ನಗರ ಸ್ಥಳೀಯ ಸಂಸ್ಥೆಗಳ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರಿಗೆ ಸಿಹಿಸುದ್ದಿ: ಗೌರವ ಧನ ಹೆಚ್ಚಳ