ಮಂಡ್ಯ : ಕ್ಯಾನ್ ಬಾಟಲಿಗಳಿಗೆ ಪೆಟ್ರೋಲ್ ತುಂಬಿಸಿ ಕೊಟ್ಟರೆ ಕಾನೂನು ಕ್ರಮ ಕೈಗೊಳ್ಳಲಾಗುತ್ತೆ ಎಂದು ಪೆಟ್ರೋಲ್ ಬಂಕ್ ಮಾಲೀಕರಿಗೆ ಮಂಡ್ಯ ಜಿಲ್ಲಾಧಿಕಾರಿ ಡಾ. ಕುಮಾರ್ ಎಚ್ಚರಿಕೆ ಕೊಟ್ಟಿದ್ದಾರೆ.ಪೆಟ್ರೋಲ್ ಬಂಕ್ ಮಾಲೀಕರ ಜೊತೆಗೆ ಈಗಾಗಲೇ ಸಭೆ ನಡೆಸಲಾಗಿದೆ. ಮಂಡ್ಯ ಜಿಲ್ಲೆಯಲ್ಲಿ ಅಗತ್ಯ ಇರುವಷ್ಟು ಪೆಟ್ರೋಲ್ ಡೀಸೆಲ್ ಸಂಗ್ರಹವಿದೆ ಸಾರ್ವಜನಿಕರು ಆತಂಕ ಪಡುವ ಅಗತ್ಯವಿಲ್ಲ ಎಂದು ತಿಳಿಸಿದರು.
ಕ್ಯಾನ್ ಗಳಿಗೆ ಪೆಟ್ರೋಲ್ ತುಂಬಿಸಿದರೆ ಬಂಕ್ ವಿರುದ್ಧ ಕಠಿಣ ಕ್ರಮ ಕೈಗೊಳ್ಳುತ್ತೇವೆ. ಕ್ಯಾನ್, ಬಾಟಲಿಗಳಲ್ಲಿ ಪೆಟ್ರೋಲ್ ತುಂಬಿಸುವುದು ಸುರಕ್ಷಿತ ಕ್ರಮವಲ್ಲ. ಗೃಹ ಬಳಕೆ ಗ್ಯಾಸ್ ಸಮಸ್ಯೆ ಇಲ್ಲ ಸಾರ್ವಜನಿಕರು ಆತಂಕ ಪಡಬೇಕಿಲ್ಲ ಗ್ಯಾಸ್ ಬುಕಿಂಗ್ ಆನ್ಲೈನ್ ಸಮಸ್ಯೆ ಸರಿಪಡಿಸಲು ಸೂಚನೆ ನೀಡಿದ್ದೇನೆ. ಕಾಳಸಂತೆಯಲ್ಲಿ ಗೃಹ ಬಳಕೆ ಸಿಲಿಂಡರ್ ಮಾರಾಟವಾದರೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುತ್ತದೆ ಗ್ಯಾಸ್ ಏಜೆನ್ಸಿಗಳ ಮಾಲೀಕರಿಗೆ ಮಂಡ್ಯ ಜಿಲ್ಲಾಧಿಕಾರಿ ಡಾಕ್ಟರ್ ಕುಮಾರ್ ಎಚ್ಚರಿಕೆ ನೀಡಿದರು.








