ಬೆಂಗಳೂರು: ನೈತಿಕ ಪೊಲೀಸ್ ಗಿರಿ ವಿರುದ್ಧ ಯಾವಾಗಲೂ ಮಾತನಾಡುತ್ತಿದ್ದ ಸಿಎಂ ಸಿದ್ದರಾಮಯ್ಯ ಹಾವೇರಿ ಜಿಲ್ಲೆ ಹಾನಗಲ್ ತಾಲೂಕಿನಲ್ಲಿ ನಡೆದಿರುವ ನೈತಿಕ ಪೊಲಿಸ್ ಗಿರಿಯ ಬಗ್ಗೆ ಯಾಕೆ ಮೌನ ವಹಿಸಿದ್ದಾರೆ. ಈ ಪ್ರಕರಣದಲ್ಲಿ ಸಿಎಂ ತಮ್ಮ ನಿಲುವು ಪ್ರಕಟಿಸಬೇಕು ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆಗ್ರಹಿಸಿದ್ದಾರೆ.
ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಅಲ್ಪ ಸಂಖ್ಯಾತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಆಗಿರುವ ಆರೋಪ ಕೇಳಿ ಬಂದಿದ್ದು, ಮಹಿಳೆಯ ವೈದ್ಯಕೀಯ ಪರೀಕ್ಷೆ ನಡೆಸಿ, ಪೊಲೀಸರು ಎಲ್ಲ ಆಯಾಮದಲ್ಲಿಯೂ ತನಿಖೆ ನಡೆಸಿ ತಪ್ಪಿತಸ್ಥರಿಗೆ ತಕ್ಕ ಶಿಕ್ಷೆ ನೀಡಬೇಕು.
ವಿಭಿನ್ನ ಕೋಮಿನವರು ಒಂದು ರೂಮಿನಲ್ಲಿ ಇದ್ದಾಗ ಅವರ ಮೇಲೆ ಹಲ್ಲೆಯಾಗಿದೆ. ಗ್ಯಾಂಗ್ ರೇಪ್ ಆಗಿದೆ ಅಂತ ಆರೋಪ ಇದೆ. ಈ ಬಗ್ಗೆ ಹಾವೇರಿ ಪೊಲಿಸ್ ವರಿಷ್ಠರ ಜೊತೆ ಮಾತನಾಡಿದ್ದೇನೆ. ಅವರು ಅದನ್ನು ಅಲ್ಲಗಳೆಯುತ್ತಿದ್ದಾರೆ. ಆದರೆ, ತಕ್ಷಣ ಮಹಿಳೆಗೆ ವೈದ್ಯಕೀಯ ಪರೀಕ್ಷೆ ನಡೆಸುವಂತೆ ಆಗ್ರಹಿಸಿದ್ದೇನೆ. ನೈತಿಕ ಪೊಲಿಸ್ ಗಿರಿ ಮಾಡಿದರೆ ಸಹಿಸುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳುತ್ತಿದ್ದರು. ಈಗ ಅಲ್ಪ ಸಂಖ್ಯಾತ ಮಹಿಳೆಯ ಮೇಲೆಯೇ ದೌರ್ಜನ್ಯ ಆಗಿದೆ. ಅವರಿಗೆ ರಕ್ಷಣೆ ಕೊಡಲು ಆಗುತ್ತಿಲ್ಲ. ಈ ಪ್ರಕರಣ ದಲ್ಲಿ ಎಲ್ಲ ಆಯಾಮದಲ್ಲೂ ತನಿಖೆ ನಡೆಸಬೇಕು. ತಪ್ಪಿತಸ್ಥರಿಗೆ ಕಠಿಣ ಶಿಕ್ಷೆ ನೀಡಬೇಕು ಎಂದು ಆಗ್ರಹಿಸಿದರು.
ಗ್ಯಾರೆಂಟಿ ಸಮಿತಿ ವಿರುದ್ಧ ಕಾನೂನು ಹೋರಾಟ
ಗ್ಯಾರೆಂಟಿ ಯೋಜನೆಗಳ ಅನುಷ್ಠಾನಕ್ಕೆ ಪಕ್ಷದ ಕಾರ್ಯ ಕರ್ತರಿಗೆ ಅಧಿಕಾರ ನೀಡುತ್ತಿದ್ದು, ಗ್ರಾಮ ಲೆಕ್ಕಿಗನಿಂದ ಹಿಡಿದು ಡಿಸಿ, ಮುಖ್ಯ ಕಾರ್ಯದರ್ಶಿಯವರೆಗೂ ಸರ್ಕಾರಿ ವ್ಯವಸ್ಥೆ ಇದೆ. ಆ ವ್ಯವಸ್ಥೆ ಸತ್ತಿದಿಯಾ ಎಂದು ಪ್ರಶ್ನಿಸಿದರು.
ಸಿಎಂ ಸಿದ್ದರಾಮಯ್ಯ ಅವರ ನಡೆಯ ಬಗ್ಗೆ ನನಗೆ ನಿರಾಸೆಯಾಗಿದೆ. ಇವರು ರಾಜ್ಯದ ಸಿಎಂ ಅಥವಾ ಕಾಂಗ್ರೆಸ್ ಸಿಎಂ ? ಗ್ಯಾರೆಂಟಿ ಹೆಸರಿನಲ್ಲಿ ರಾಜಕೀಯ ಲಾಭ ಮಾಡಿಕೊಳ್ಳುತ್ತಿದ್ದಾರೆ. ಗ್ಯಾರೆಂಟಿ ಜಾರಿಯ ಬಗ್ಗೆ ನೋಡಿಕೊಳ್ಳಲು ಕಾಂಗ್ರೆಸ್ ಕಾರ್ಯಕರ್ತರೇ ಬೇಕಾ ಸರ್ಕಾರದ ಯೋಜನೆಗಳನ್ನು ಕೊಡಲು ನಿಮ್ನ ಕಾರ್ಯಕರ್ತರಿಗೆ ಯಾರು ಅಧಿಕಾರ ಕೊಟ್ಡಿದ್ದಾರೆ. ಇದು ರಾಜ್ಯದ ಜನರ ಬೆವರಿನ ಹಣ, ನಿಮ್ಮ ಕಾರ್ಯಕರ್ತರ ಹಣ ಅಲ್ಲ. ನಿನಗೆ ಚುನಾಯಿಸಿ ಅಧಿಕಾರ ಕೊಟ್ಡಿದ್ದಾರೆ.
ನಿಮ್ಮ ಕಾರ್ಯಕರ್ತರಿಗೆ ಕೊಟ್ಟಿಲ್ಲ. ಅವರಿಗೆ ಕ್ಯಾಬಿನೆಟ್ ದರ್ಜೆ ಕೊಡಲು ತೀರ್ಮಾನಿಸಿದ್ದಾರೆ. ರಾಜ್ಯದಲ್ಲಿ ಶೇ 15% ಕ್ಕಿಂತ ಹೆಚ್ಚಿನಚರಿಗೆ ಕ್ಯಾಬಿಬೆಟ್ ದರ್ಜೆ ಅಧಿಕಾರ ನೀಡಬಾರದು. ಅದರ ವಿರುದ್ದ ಸುಪ್ರೀಂ ಕೋರ್ಟ್ ಆದೇಶ ಇದೆ. ಇದು ಕಾನೂನು ಬಾಹಿರ ಇದು ಕಾನೂನು ಬಾಹಿರ ನೇಮಕಾತಿ ಆಗುತ್ತದೆ. ಮುಖ್ಯ ಕಾರ್ಯದರ್ಶಿಗಳು ಇದಕ್ಕೆ ಅವಕಾಶ ಕೊಡಬಾರದು. ಕೊಟ್ಟರೆ ಅವರೂ ಇದರಲ್ಲಿ ಭಾಗಿಯಾಗುತ್ತಾರೆ. ಇದು ಸ್ವಜನ ಪಕ್ಷಪಾತವಾಗುತ್ತದೆ. ಇದರ ವಿರುದ್ದ ರಾಜ್ಯಪಾಲರಿಗೆ ದೂರು ಕೊಡುತ್ತೇವೆ ಕಾನೂನು ಹೋರಾಟ ಮಾಡುತ್ತೇವೆ ಎಂದು ಹೇಳಿದರು.
ಕಾಂಗ್ರೆಸ್ ನವರೇ ರಾಮಂದಿರ ಕಟ್ಟಿದ್ದರೆ ಅವರ ಪ್ರಧಾನಿಯೇ ಉದ್ಘಾಟಿಸುತ್ತಿದ್ದರು
ಕಾಂಗ್ರೆಸ್ ನಾಯಕರು ರಾಮ ಮಂದಿರ ಉದ್ಘಾಟನೆಗೆ ಹಾಜರಾಗದಿರುವ ಕುರಿತು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ರಾಮ ಮಂದಿರ ನಿರ್ಮಾಣವಾಗಿ ಇಡಿ ದೇಶದಲ್ಲಿ ಐತಿಹಾಸಿಕ ಕಾರ್ಯಕ್ರಮ ನಡೆಯುತ್ತಿದೆ. ಕಾಂಗ್ರೆಸ್ ನವರು ರಾಮಮಂದಿರ ಆಗುವುದಿಲ್ಲ ಎಂದು ಭಾವಿಸಿದ್ದರು. ಅವರು ಮೊದಲಿನಿಂದಲೂ ರಾಮ ಮಂದಿರ ವಿಚಾರದಲ್ಲಿ ರಾಜಕಾರಣ ಮಾಡುತ್ತಿದ್ದಾರೆ. ಈ ಕಾರ್ಯಕ್ರಮವನ್ನು ಇಡೀ ದೇಶದ ಜನರು ಬೆಂಬಲಿಸಿದ್ದಾರೆ. ಜನರಿಂದ ಆಯ್ಕೆಯಾಗಿರುವ. ಪ್ರಧಾನಿ ಪೂಜೆ ಮಾಡುವುದರಲ್ಲಿ ತಪ್ಪೇನಿದೆ. ಜವಾಹರಲಾಲ ನೆಹರು ಪ್ರಧಾನಿಯಾಗಿದ್ದಾಗ ಸೋಮನಾಥ ಮಂದಿರ ಉದ್ಘಾಟನೆಗೆ ಅವಕಾಶ ಇತ್ತು. ಆಗ ಅವರು ಹೋಗಲಿಲ್ಲ. ಹಿಂದೆ ಕಾಂಗ್ರೆಸ್ ನವರೇ ಪ್ರಧಾನಿಯಾಗಿದ್ದರು ಆಗ ರಾಮಮಂದಿರ ನಿರ್ಮಾಣ ಮಾಡಿದ್ದರೆ, ಅವರಿಂದಲೇ ಪೂಜೆ ಮಾಡಿಸುತ್ತಿದ್ದರು ಎಂದು ಹೇಳಿದರು.
ನನ್ನ ಮೇಲೆ ಒತ್ತಡವಿಲ್ಲ.
ಹಾವೇರಿ ಲೋಕಸಭೆ ಟಿಕೆಟ್ ಕುರಿತು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಟಿಕೆಟ್ ಗಾಗಿ ಯಾರು ಬೇಕಾದರೂ ಪ್ರಯತ್ನ ಮಾಡಬಹುದು. ಯಾರೆ ಟಿಕೆಟ್ ಪಡೆದುಕೊಂಡು ಬಂದರೂ ನಾವು ಕೆಲಸ ಮಾಡುತ್ತೇವೆ. ಲೋಕಸಭೆ ಚುನಾವಣೆಗೆ ಸ್ಪರ್ದಿಸುವಂತೆ ನನ್ನ ಮೇಲೆ ಯಾವುದೇ ಒತ್ತವಿಲ್ಲ ಎಂದು ಸ್ಪಷ್ಟಪಡಿಸಿದರು.
‘ಯುವನಿಧಿ ಯೋಜನೆ’ ನಗದು ವರ್ಗಾವಣೆ ಕಾರ್ಯಕ್ರಮಕ್ಕೆ ‘ಶಿವಮೊಗ್ಗ ಸಜ್ಜು’
BREAKING : ರಾಮ ಮಂದಿರ ಉದ್ಘಾಟನೆ ವೇಳೆ ಉಗ್ರ ದಾಳಿಗೆ ಸ್ಕೆಚ್ : ಕೇಂದ್ರ ಗುಪ್ತಚರ ಇಲಾಖೆ ಎಚ್ಚರಿಕೆ