ಬೆಳಗಾವಿ ಸುವರ್ಣಸೌಧ: ವಿಶ್ವ ವಿದ್ಯಾಲಯಗಳ ಮೇಲಿನ ರಾಜ್ಯಪಾಲರ ಅಧಿಕಾರ ಮೊಟಕುಗೊಳಿಸುವಂತ ಚಾಣಕ್ಯ ವಿವಿ ತಿದ್ದುಪಡಿ ವಿಧೇಯಕಕ್ಕೆ ವಿಧಾನಸಭೆಯ ಬಳಿಕ ವಿಧಾನ ಪರಿಷತ್ತಿನಲ್ಲಿ ಇಂದು ಅಂಗೀಕಾರ ದೊರೆತಿದೆ.
ಮುಖ್ಯಮಂತ್ರಿ ಸಿದ್ಧರಾಮಯ್ಯ ನೇತೃತ್ವದಲ್ಲಿ ನಡೆದಿದ್ದಂತ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಚಾಣಕ್ಯ ವಿವಿ ತಿದ್ದುಪಡಿ ವಿಧೇಯಕಕ್ಕೆ ಅನುಮೋದಿಸಲಾಗಿತ್ತು. ಈ ತಿದ್ದುಪಡಿ ವಿಧೇಯಕದಂತೆ ವಿವಿಗಳಿಗೆ ಸರ್ಕಾರಿ ಅಧಿಕಾರಿ ಉಸ್ತುವಾರಿ ನೇಮಕಕ್ಕೆ ಅವಕಾಶ ನೀಡಲಾಗಿತ್ತು.
ನಿನ್ನೆ ವಿಧಾನಸಭೆಯಲ್ಲಿ ಚಾಣಕ್ಯ ವಿವಿ ತಿದ್ದುಪಡಿ ವಿಧೇಯಕಕ್ಕೆ ಅಂಗೀಕಾರ ದೊರೆತಿತ್ತು. ಇಂದು ಬೆಳಗಾವಿಯ ಚಳಿಗಾಲದ ವಿಧಾನ ಪರಿಷತ್ತಿನಲ್ಲಿ ಸರ್ಕಾರ ಮಂಡಿಸಿತ್ತು. ಇಂತಹ ಚಾಣಕ್ಯ ವಿವಿಯ ತಿದ್ದುಪಡಿ ವಿಧೇಯಕಕ್ಕೆ ಅಂಗೀಕಾರ ದೊರೆತಿದೆ. ಹೀಗಾಗಿ ಇನ್ಮುಂದೆ ವಿವಿ ಮೇಲಿನ ರಾಜ್ಯಪಾಲರ ಅಧಿಕಾರಕ್ಕೆ ಬ್ರೇಕ್ ಹಾಕಲಾಗಿದೆ.
ಇನ್ಮುಂದೆ ಆನ್‌ಲೈನ್ ಮೂಲಕ NEET ಪರೀಕ್ಷೆ.?: ಶೀಘ್ರ ನಿರ್ಧಾರವೆಂದ ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ | NEET exam
ರಾಜ್ಯದ ಸ್ವ ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್: ವಿವಿಧ ಯೋಜನೆಯಡಿ ಸಾಲಸೌಲಭ್ಯಕ್ಕೆ ಅರ್ಜಿ ಆಹ್ವಾನ