Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BIG NEWS: ಪ್ರಾಂಕ್ ಹೆಸರಲ್ಲಿ ಹುಚ್ಚಾಟ ಮೆರೆದ್ರೆ FIR ಫಿಕ್ಸ್: ಬೆಂಗಳೂರು ಪೊಲೀಸರಿಂದ ಖಡಕ್ ಎಚ್ಚರಿಕೆ

18/05/2025 5:10 PM

BIG NEWS : ಸಚಿವ ಸಂಪುಟ ವಿಸ್ತರಣೆ ಆದರೆ ಹೊಸ ಲೀಡರ್ ಶಿಪ್ ಬೆಳೆಯುತ್ತೆ : ಸಚಿವ ಸತೀಶ್ ಜಾರಕಿಹೊಳಿ

18/05/2025 5:03 PM

BREAKING: ಅಹಮದಾಬಾದ್ ನಲ್ಲಿ ತಿರಂಗ ಯಾತ್ರೆಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಚಾಲನೆ | Tiranga Yatra

18/05/2025 5:02 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING NEWS: ವಿಧಾನ ಪರಿಷತ್ತಿನಲ್ಲಿ ‘ಗ್ರೇಟರ್ ಬೆಂಗಳೂರು ವಿಧೇಯಕ’ ಅಂಗೀಕಾರ
KARNATAKA

BREAKING NEWS: ವಿಧಾನ ಪರಿಷತ್ತಿನಲ್ಲಿ ‘ಗ್ರೇಟರ್ ಬೆಂಗಳೂರು ವಿಧೇಯಕ’ ಅಂಗೀಕಾರ

By kannadanewsnow0912/03/2025 6:58 PM

ಬೆಂಗಳೂರು: ಆಡಳಿತ ವೀಕೆಂದ್ರಿಕರಣ ದೃಷ್ಟಿಯಿಂದ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಸಂಖ್ಯೆಯನ್ನು ಹೆಚ್ಚು ಮಾಡುವ ಉದ್ದೇಶದ ‘ಗ್ರೇಟರ್ ಬೆಂಗಳೂರು ಆಡಳಿತ ವಿಧೇಯಕ 2024’ವನ್ನು ವಿಧಾನಪರಿಷತ್ತಿನಲ್ಲಿ ಪ್ರತಿಪಕ್ಷಗಳ ಸಭಾತ್ಯಾಗದ ನಡುವೆ ಬುಧವಾರ ಅಂಗೀಕರಿಸಲಾಯಿತು.

ಬೆಂಗಳೂರು ನಗರಾಭಿವೃದ್ಧಿ ಸಚಿವರೂ ಆದ ಡಿಸಿಎಂ ಡಿ ಕೆ ಶಿವಕುಮಾರ್ ಅವರು 20 ಗ್ರೇಟರ್ ಬೆಂಗಳೂರು ಆಡಳಿತ ವಿಧೇಯಕ 2024 ಅನ್ನು ಸದನದಲ್ಲಿ ಮಂಡಿಸಿ, ಅದರ ಉದ್ದೇಶವನ್ನು ವಿವರಿಸಿದರು. ನಂತರ ಪ್ರತಿಪಕ್ಷಗಳ ಸದಸ್ಯರು ತಮ್ಮ ಅಭಿಪ್ರಾಯ, ಆಕ್ಷೇಪ ಕಾರಣಗಳನ್ನು ತಿಳಿಸಿದರು.

ಇದಕ್ಕೆ ಪ್ರತಿಕ್ರಿಯೆ ಕೊಟ್ಟ ಡಿ ಕೆ ಶಿವಕುಮಾರ್ ಅವರು, “ಚರ್ಚೆಯಲ್ಲಿ ಭಾಗವಹಿಸಿದ ಎಲ್ಲಾ ಶಾಸಕರನ್ನು ಅಭಿನಂದಿಸುತ್ತೇನೆ. ವಿರೋಧ ಪಕ್ಷಗಳ ನಾಯಕರು ತಮ್ಮದೇ ಆದ ಅಭಿಪ್ರಾಯ ತಿಳಿಸಿದ್ದಾರೆ. ಅವರು ಅಭಿಪ್ರಾಯವನ್ನು ನಾನು ವಿರೋಧಿಸುವುದಿಲ್ಲ. ಅವರಲ್ಲಿ ಕೆಲವರಿಗೆ ರಾಜಕೀಯ ಇಚ್ಚಾಶಕ್ತಿಯೂ ಇದೆ. ಅದರಲ್ಲಿ ತಪ್ಪಿಲ್ಲ. ಈಗಿರುವ ವ್ಯವಸ್ಥೆಯಲ್ಲಿಯೇ ಬೆಂಗಳೂರು ನಗರವನ್ನು ಮುನ್ನಡೆಸುವುದು ಅಸಾಧ್ಯ ಎಂದು ಅವರು ಆತ್ಮಸಾಕ್ಷಿ ಮೂಲಕ ಒಪ್ಪಿದ್ದಾರೆ. ತ್ಯಾಜ್ಯ ನಿರ್ವಹಣೆ, ಕುಡಿಯುವ ನೀರು ಆಡಳಿತಕ್ಕೆ ದೊಡ್ಡ ಸಮಸ್ಯೆ ಎಂಬ ಅರಿವು ಅವರಿಗಿದೆ. ಬೆಂಗಳೂರು ನಗರ ಕೆಂಪೇಗೌಡರು ಕಟ್ಟಿಸಿದ ಗೋಪುರ ಮೀರಿ ಬೆಳೆದಿದೆ. ಈಗಲೂ ಅದನ್ನು ನಿಲ್ಲಿಸಲು ಆಗುವುದಿಲ್ಲ, ಮುಂದೆಯೂ ಆಗುವುದಿಲ್ಲ. ಯಲಹಂಕ, ಕೆಂಗೇರಿ ಉಪನಗರಗಳು ಈಗ ಪಾಲಿಕೆ ವ್ಯಾಪ್ತಿಗೆ ಸೇರಿವೆ. ಹೀಗೆ ಬೆಳೆದಿರುವ ಬೆಂಗಳೂರಿನ ಆಡಳಿತವನ್ನು ನಾವು ವಿಕೇಂದ್ರೀಕರಣ ಮಾಡಲು ಮುಂದಾಗಿದ್ದೇವೆ” ಎಂದು ತಿಳಿಸಿದರು.

“ದೆಹಲಿ ಪರಿಸ್ಥಿತಿಯೇ ಬೇರೆ. ಇನ್ನು ಮುಂಬೈಯಲ್ಲಿ ಮೊದಲೇ ಅವರು ಅಧಿಕಾರ ನೀಡಿದ್ದರು. ಈಗ ಇಲ್ಲಿ ನಾವು ಹಣಕಾಸಿನ ವಿಚಾರ ಚರ್ಚೆ ಮಾಡುತ್ತಿದ್ದೇವೆ. ನಾವು ಬೆಂಗಳೂರನ್ನು ಛಿದ್ರ ಮಾಡಲು ಹೋಗುತ್ತಿಲ್ಲ, ಬೆಂಗಳೂರನ್ನು ಗಟ್ಟಿ ಮಾಡುತ್ತಿದ್ದೇವೆ. ಬೆಂಗಳೂರಿನ ಗೌರವ ಉಳಿಸಬೇಕು. ಮಾಜಿ ಪ್ರಧಾನಿ ವಾಜಪೇಯಿ ಅವರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಉದ್ಘಾಟನೆಗಾಗಿ ಬೆಂಗಳೂರಿಗೆ ಬಂದಾಗ, “ಇಷ್ಟು ದಿನ ವಿಶ್ವ ನಾಯಕರು ಮೊದಲು ದೆಹಲಿಗೆ ಬಂದು, ನಂತರ ದೇಶದ ಇತರ ನಗರಗಳಿಗೆ ಹೋಗುತ್ತಿದ್ದರು. ಆದರೆ ಈಗ ಪರಿಸ್ಥಿತಿ ಬದಲಾಗಿದೆ. ವಿಶ್ವದ ನಾಯಕರು ಮೊದಲು ಬೆಂಗಳೂರಿಗೆ ಬಂದು, ನಂತರ ದೇಶದ ಇತರ ನಗರಗಳಿಗೆ ಹೋಗುತ್ತಿದ್ದಾರೆ” ಎಂದು ಹೇಳಿದ್ದರು. ಇದಕ್ಕೆ ಕಾರಣ ಇಲ್ಲಿನ ಆಡಳಿತ. ಕೇವಲ ಕೃಷ್ಣ ಅವರ ಸರ್ಕಾರ ಅಥವಾ ಮತ್ತೊಂದು ಸರ್ಕಾರ ಮಾತ್ರ ಇದಕ್ಕೆ ಕಾರಣವಲ್ಲ. ಇಲ್ಲಿನ ಜನ ಅಷ್ಟರ ಮಟ್ಟಿಗೆ ವಿದ್ಯಾವಂತರು, ಬುದ್ದಿವಂತರು, ಪ್ರಜ್ಞಾವಂತರಿದ್ದಾರೆ. ನೆಹರೂ ಅವರು ಇಲ್ಲಿಯೇ ಇಸ್ರೋ, ಹೆಚ್ಎಂಟಿ, ಹೆಚ್ಎಎಲ್, ಐಟಿಐ ಆರಂಭಿಸಿದ್ದು ಏಕೆ? ಅನೇಕ ಮಹಾನ್ ಸಂಶೋಧಕರು, ಉದ್ದಿಮೆದಾರರು ಬೆಂಗಳೂರಿನಲ್ಲೇ ಓದಿದ್ದಾರೆ” ಎಂದು ವಿವರಿಸಿದರು.

ಆರ್ಥಿಕವಾಗಿ ಹಿಂದುಳಿದ ಪಾಲಿಕೆಗಳಿಗೆ ಸರ್ಕಾರದಿಂದ ನೆರವು

“ಅಧಿಕಾರ ವಿಕೇಂದ್ರಿಕರಣದ ಉದ್ದೇಶದಿಂದ ಬೆಂಗಳೂರು ಮೂರು ಜಿಲ್ಲೆಯಾಯಿತು, ಉಡುಪಿ ಹಾಗೂ ದಕ್ಷಿಣ ಕನ್ನಡ ಬೇರೆ ಜಿಲ್ಲೆಯಾದವು, ಗದಗ ಹಾಗೂ ಹಾವೇರಿ ಎರಡು ಜಿಲ್ಲೆಗಳಾದವು. ಅಶ್ವತ್ಥ್ ನಾರಾಯಣ ಅವರು ನಾಮನಿರ್ದೇಶಿತ ಸದಸ್ಯರಿಗೆ ಮತದಾನದ ಹಕ್ಕು ನೀಡಬೇಡಿ ಎನ್ನುತ್ತಿದ್ದರು. ಜಿಬಿಎಯಲ್ಲಿ (ಗ್ರೇಟರ್ ಬೆಂಗಳೂರು ಅಥಾರಿಟಿ) ನಾಮನಿರ್ದೇಶಿತ ಸದಸ್ಯರಿರುವುದಿಲ್ಲ. ಕೇವಲ ಲೋಕಸಭೆ, ರಾಜ್ಯಸಭೆ, ವಿಧಾನಸಭೆ ಹಾಗೂ ಪರಿಷತ್ತಿನ ಚುನಾಯಿತ ಪ್ರತಿನಿಧಿಗಳು ಮಾತ್ರ ಮತದಾನ ಹಕ್ಕನ್ನು ಹೊಂದಿರುತ್ತಾರೆ” ಎಂದು ಸ್ಪಷ್ಟನೆ ನೀಡಿದರು.

“ನಾವು ಕೂಡ ಆಡಳಿತಾತ್ಮಕ ದೃಷ್ಟಿಯಿಂದಲೇ ಪಾಲಿಕೆ ವಿಭಜನೆ ಮಾಡುತ್ತಿದ್ದೇವೆ. ಯಾಕೆ ಮಾಡಬೇಕು. ಇದರಿಂದ ಅನುದಾನದ ಸಮಸ್ಯೆಯಾಗುತ್ತದೆ ಎಂದು ಕೆಲವು ಸದಸ್ಯರು ಪ್ರಸ್ತಾಪಿಸಿದ್ದಾರೆ. ನಾವು ಕೂಡ ಈ ವಿಚಾರವನ್ನು ಅವರುಗಳಂತೆಯೇ ಆಲೋಚನೆ ಮಾಡಿದ್ದೇವೆ. 75ನೇ ತಿದ್ದುಪಡಿ ಪ್ರಕಾರ ಸ್ಥಳೀಯ ಸಂಸ್ಥೆಗಳ ಹಣವನ್ನು ನಾವು ಬೇರೆಡೆಗೆ ವರ್ಗಾವಣೆ ಮಾಡಲು ಸಾಧ್ಯವಿಲ್ಲ. ಜತೆಗೆ ಎಲ್ಲವನ್ನು ಒಟ್ಟಿಗೆ ಸಂಗ್ರಹಿಸಿ ಹಂಚಿಕೆ ಮಾಡಲು ಆಗುವುದಿಲ್ಲ. ಹೀಗಾಗಿ ನಾವು ಸರ್ಕಾರದಿಂದ ಆರ್ಥಿಕವಾಗಿ ದುರ್ಬಲವಾಗಿರುವ ಪಾಲಿಕೆಗಳಿಗೆ ಸಹಾಯ ಮಾಡಬೇಕು ಎಂದು ಈ ಮಸೂದೆಯಲ್ಲಿ ಪ್ರಸ್ತಾಪಿಸಿದ್ದೇವೆ” ಎಂದು ತಿಳಿಸಿದರು.

ಬೆಂಗಳೂರಿನ ಬಗ್ಗೆ ಮುಖ್ಯಮಂತ್ರಿಗಳಿಗೂ ಜವಾಬ್ದಾರಿ ಇರಬೇಕು:

“ಇನ್ನು ಮುಖ್ಯಮಂತ್ರಿಗಳಿಗೆ ಸಮಯಾವಕಾಶ ಇರುವುದಿಲ್ಲ ಎಂಬ ವಿಚಾರ ಪ್ರಸ್ತಾಪಿಸಿದ್ದಾರೆ. ನನಗೂ ಗೊತ್ತಿದೆ. ಸುಮಾರು 1.50 ಕೋಟಿ ಜನರು, ಅಂದರೆ ರಾಜ್ಯದ ಜನಸಂಖ್ಯೆಯಲ್ಲಿ ಶೇ. 25 ರಷ್ಟು ಜನಸಂಖ್ಯೆ ಇರುವ ನಗರದ ಬಗ್ಗೆ ಮುಖ್ಯಮಂತ್ರಿಗಳು ಸಭೆ ಮಾಡಲೇಬೇಕು. ಇದು ಅವರ ಕರ್ತವ್ಯ. ಮುಖ್ಯಮಂತ್ರಿಗಳಾದವರು ಕೇವಲ ಸಿಟಿ ರೌಂಡ್ಸ್ ಮಾಡಿದರೆ ಸಾಲುವುದಿಲ್ಲ. ಅವರೂ ಸಭೆ ಮಾಡಬೇಕು. ಹಣಕಾಸು ಹಂಚಿಕೆ ಮಾಡುವವರು ಅವರು. ನಾವು ಇಂದು ಪೆರಿಫೆರಲ್ ರಿಂಗ್ ರಸ್ತೆ, ಟನಲ್ ರಸ್ತೆ ಬಗ್ಗೆ ಮಾತನಾಡುತ್ತೇವೆ. ಅಂದೇ ಪಿಆರ್ ಆರ್ ಯೋಜನೆ ಮಾಡಿದ್ದರೆ 3-4 ಸಾವಿರ ಕೋಟಿಯಲ್ಲಿ ಪೂರ್ಣಗೊಳ್ಳುತ್ತಿತ್ತು. ಇಂದು ಆ ವೆಚ್ಚ 26 ಸಾವಿರ ಕೋಟಿ ರೂ. ಆಗುತ್ತಿದೆ. ಅಂದಿನ ಕಾಲದಲ್ಲಿಯೇ ಮೆಟ್ರೋ ಡಬಲ್ ಡೆಕ್ಕರ್ ಮಾಡಿದ್ದರೆ ಇಂದು ಈ ಪರಿಸ್ಥಿತಿ ಇರುತ್ತಿರಲಿಲ್ಲ. ನೀವು ಬೆಂಗಳೂರಿನ ಯಾವುದೇ ಭಾಗದಲ್ಲಿ ರಸ್ತೆ ಅಗಲೀಕರಣಕ್ಕೆ ಕಟ್ಟಡ ಕೆಡವಬೇಕಾದರೆ ದುಪ್ಪಟ್ಟು ಪರಿಹಾರ ನೀಡಬೇಕು. ಇದೆಲ್ಲವನ್ನು ನೋಡಿಯೇ, ಸಾಲವಾದರೂ ಸರಿ, ಎಲ್ಲ ಯೋಜನೆಗಳನ್ನು ಅನುಷ್ಠಾನಕ್ಕೆ ತರಬೇಕು ಎಂದು ಹೊರಟಿದ್ದೇವೆ. ನಮ್ಮ ಮನೆಯಲ್ಲಿ ನಮ್ಮ ಮಕ್ಕಳೇ ಸಂಚಾರ ದಟ್ಟಣೆ ವಿಚಾರವಾಗಿ ನನಗೆ ಬಯ್ಯುತ್ತಿರುತ್ತಾರೆ. ನಾನು ಮುಂಬೈ, ದೆಹಲಿ, ಹೈದರಾಬಾದ್ ಮತ್ತಿತರ ನಗರಗಳಲ್ಲಿ ಸಂಚಾರಿ ದಟ್ಟಣೆ ನೋಡಿದ್ದೇನೆ. ನಮಗಿಂತ ಅಲ್ಲಿ ಹದಗೆಟ್ಟ ಪರಿಸ್ಥಿತಿ ಇದೆ. ಹಾಗೆಂದು ನಮ್ಮ ಜವಾಬ್ದಾರಿ ಮರೆಯುವಂತಿಲ್ಲ. ನಾವು ಸೇನೆಯವರ ಜತೆ ಮಾತನಾಡಿ ಅವರ ಜಾಗವನ್ನು ಪಡೆಯುತ್ತಿದ್ದೇವೆ. ಇದು ಅಷ್ಟು ಸುಲಭವಾದ ಕೆಲಸವಲ್ಲ. ಇದನ್ನು ಒಂದೇ ದಿನದಲ್ಲಿ ಮಾಯಾ ಮಂತ್ರ ಮಾಡಿ ಸರಿಪಡಿಸಲು ಆಗುವುದಿಲ್ಲ ಎಂದೇ ದೇವರ ವಿಚಾರ ಪ್ರಸ್ತಾಪ ಮಾಡಿದ್ದೆ. ಇದಕ್ಕಾಗಿ ಸರಿಯಾದ ಯೋಜನೆ ಮಾಡಿ, ಅದನ್ನು ಪರಿಣಾಮಕಾರಿಯಾಗಿ ಜಾರಿ ಮಾಡುವ ಅಗತ್ಯವಿದೆ” ಎಂದು ತಿಳಿಸಿದರು.

“ಬೆಂಗಳೂರಿಗೆ ಹೊಸ ದಿಕ್ಕು ನೀಡಬೇಕು ಎಂದು ನಾವು ಪ್ರಯತ್ನ ಮಾಡುತ್ತಿದ್ದು, ಮುಖ್ಯವಾಗಿ ಇಂಧನ ವಿಚಾರವಾಗಿ ಬೆಂಗಳೂರಿನಲ್ಲಿ ಮೊದಲ ಬಾರಿಗೆ ಅನಿಲ ವಿದ್ಯುತ್ ಉತ್ಪಾದನಾ ಘಟಕ ಮಾಡಿದ್ದು ನಾವು. ಇನ್ನು ನಗರ ಯೋಜನೆ ವಿಚಾರವಾಗಿ ಕೆಲವು ತಿದ್ದುಪಡಿಯನ್ನು ತಂದಿದ್ದೇವೆ. ದೇವರು ವರವನ್ನು ಕೊಡಲ್ಲ, ಶಾಪವನ್ನು ಕೊಡಲ್ಲ, ಕೇವಲ ಅವಕಾಶ ಮಾತ್ರ ನೀಡುತ್ತಾನೆ. ಈ ಅವಕಾಶದಲ್ಲಿ ಬೆಂಗಳೂರನ್ನು ಅಂತರರಾಷ್ಟ್ರೀಯ ನಗರವನ್ನಾಗಿ ಮಾಡಿ ಗಟ್ಟಿಗೊಳಿಸಲು ಈ ಮಸೂದೆ ಜಾರಿಗೆ ತರುತ್ತಿದ್ದೇವೆ” ಎಂದು ತಿಳಿಸಿದರು.

ಗ್ರೇಟರ್ ಬೆಂಗಳೂರು ಪವಿತ್ರವಾದ ಮಸೂದೆ

ಇದಕ್ಕೂ ಮೊದಲು ವಿಧೇಯಕ ಮಂಡನೆ ಕುರಿತ ಪ್ರಸ್ತಾವನೆ ವೇಳೆ ಮಾತನಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು, “ಗ್ರೇಟರ್ ಬೆಂಗಳೂರು ಆಡಳಿತ ವಿಧೇಯಕದಲ್ಲಿ 74ನೇ ತಿದ್ದುಪಡಿಗೆ ಯಾವುದೇ ಧಕ್ಕೆಯಾಗುವುದಿಲ್ಲ. ಬೆಂಗಳೂರಿನ ಭವಿಷ್ಯದ ಹಿತದೃಷ್ಟಿಯಿಂದ ಈ ವಿಧೇಯಕ ಪವಿತ್ರವಾದದ್ದು. ಬೆಂಗಳೂರು ವೇಗವಾಗಿ ಬೆಳೆಯುತ್ತಿರುವ ಕಾರಣ ಓರ್ವ ಪಾಲಿಕೆ ಆಯುಕ್ತರು, ಮುಖ್ಯ ಇಂಜಿನಿಯರ್ ಗಳಿಂದ ನಿಭಾಯಿಸಲು ಕಷ್ಟವಾಗುತ್ತಿದೆ. ಹೀಗಾಗಿ ಈ ಮಸೂದೆಯಲ್ಲಿ 7 ಪಾಲಿಕೆ ರಚನೆಗೆ ಮುಂದಾಗಿದ್ದೇವೆ. ಭವಿಷ್ಯದ ಹಿತದೃಷ್ಟಿಯನ್ನು ಗಮನದಲ್ಲಿಟ್ಟುಕೊಂಡು ಈ ಪ್ರಸ್ತಾವನೆ ಸಲ್ಲಿಸಿದ್ದೇವೆ. ಸ್ಥಳೀಯ ಮಟ್ಟದಲ್ಲಿ ಶಾಸಕರಿಗೆ ನಿಯಂತ್ರಣ ಇರಬೇಕು, ವಾರ್ಡ್ ಸಮಿತಿಗಳಾಗಬೇಕು, ಅಲ್ಲಿ ಜನಪ್ರತಿನಿಧಿಗಳು ಇರಬೇಕು. ಈ ಮಸೂದೆಯಲ್ಲಿ ಎಲ್ಲಾ ಶಾಸಕರು, ಸಂಸದರು ಕೂಡ ಸದಸ್ಯರಾಗಿರುತ್ತಾರೆ. ಮುಖ್ಯಮಂತ್ರಿಗಳು ಇದರ ಅಧ್ಯಕ್ಷರಾಗಿರುತ್ತಾರೆ. ಜಿಲ್ಲಾ ಉಸ್ತುವಾರಿ ಸಚಿವರು ಇದಕ್ಕೆ ಉಪಾಧ್ಯಕ್ಷರಾಗಿರುತ್ತಾರೆ. ಪಾಲಿಕೆ ರಚನೆಯನ್ನು ನಾವು ಯಾವುದೇ ರೀತಿ ಬದಲವಾವಣೆ ಮಾಡುತ್ತಿಲ್ಲ” ಎಂದು ತಿಳಿಸಿದರು.

ಪಾಲಿಕೆಯಲ್ಲಿ ಎಲ್ಲಾ ವಿಭಾಗಗಳಿಗೂ ಹೊಣೆಗಾರಿಗೆ, ಜವಾಬ್ದಾರಿ

“ತೆರಿಗೆ ವಿಚಾರವಾಗಿ ಈ ಹಿಂದೆ ದೆಹಲಿಯಿಂದ ಕೆಲವು ಸೂಚನೆ ನೀಡಲಾಗಿತ್ತು. ಇಲ್ಲಿನ ತೆರಿಗೆಯನ್ನು ನಾವು ಕೆಲವು ತಿದ್ದುಪಡಿ ಮಾಡಿದ್ದೆವು. ಗ್ರೇಟರ್ ಬೆಂಗಳೂರು ಅಥಾರಿಟಿಯಲ್ಲಿ ನಾವು ಪೊಲೀಸರು, ನೀರು ಸರಬರಾಜು, ಬಿಎಂಟಿಸಿ, ಬಿಎಂಆರ್ ಟಿಸಿ, ವಿಪತ್ತು ನಿರ್ವಹಣೆ, ಅಗ್ನಿಶಾಮಕದಳ, ಸಂಚಾರಿ ಪೊಲೀಸ್, ಕೊಳೆಗೇರಿ ಅಭಿವೃದ್ಧಿ ಮಂಡಳಿ, ಬೆಸ್ಕಾಂ, ಬಿಎಂಎಲ್ ಟಿಎ, ಬಿಡಿಎ ಸೇರಿದಂತೆ ಇತರೆ ವಿಭಾಗಗಳ ಆಯುಕ್ತರು, ಎಂ.ಡಿ ಹಾಗೂ ಸಿಇಓಗಳನ್ನು ಒಳಗೊಂಡಿದ್ದೇವೆ. ಇಲ್ಲಿ ಪ್ರತಿಯೊಬ್ಬರಿಗೂ ಹೊಣೆಗಾರಿಕೆ ಹಾಗೂ ಜವಾಬ್ದಾರಿ ನೀಡಲಾಗಿದೆ” ಎಂದು ತಿಳಿಸಿದರು.

“ಇನ್ನು ತಜ್ಞರ ಸಮಿತಿಯನ್ನು ರಚಿಸಿದ್ದು, ಆರು ಸಮಿತಿಗಳನ್ನು ನೇಮಿಸಲಾಗಿದೆ. ನಮ್ಮ ಮಸೂದೆಯಲ್ಲಿ 1ರಿಂದ 7 ಪಾಲಿಕೆ ಮಾಡಲು ಅವಕಾಶವಿದೆಯೇ ಹೊರತು, 7ಕ್ಕಿಂತ ಹೆಚ್ಚು ಮಾಡಲು ಅವಕಾಶವಿಲ್ಲ. ಒಂದಾದರೂ ಮಾಡಬಹುದು, ಎರಡು, ಮೂರು, ನಾಲ್ಕು ಹೀಗೆ ಮಾಡಬಹುದು. ಈ ವಿಚಾರದಲ್ಲಿ ಶಾಸಕರ ಅಭಿಪ್ರಾಯವನ್ನು ಪಡೆದು ನಂತರ ತೀರ್ಮಾನ ಮಾಡಲಾಗುವುದು. ಇಲ್ಲಿ ಪ್ರತಿ ಪಾಲಿಕೆಯ ಜನಸಂಖ್ಯೆ 10 ಲಕ್ಷಕ್ಕಿಂತ ಹೆಚ್ಚಾಗಿರಬೇಕು. ಕನಿಷ್ಠ 300 ಕೋಟಿಯಷ್ಟು ಆದಾಯ ಸಂಗ್ರಹವಾಗಬೇಕು. ಕೃಷಿಯೇತರ ಉದ್ಯೋಗ ಶೇ.50 ಕ್ಕಿಂತ ಹೆಚ್ಚಾಗಿರಬೇಕು. ಈ ಪಾಲಿಕೆಗೆ ಬೆಂಗಳೂರು ಉತ್ತರ, ದಕ್ಷಿಣ, ಕೇಂದ್ರ ಎಂದೇ ಹೆಸರಿಡಬೇಕು. ಯಾವುದೇ ಕಾರಣಕ್ಕೂ ಬೇರೆ ಹೆಸರು ಇಡುವಂತಿಲ್ಲ. ಆದಷ್ಟು ವಿಧಾನಸಭಾ ಕ್ಷೇತ್ರಗಳನ್ನು ಇಬ್ಬಾಗ ಮಾಡದಂತೆ ನೋಡಿಕೊಳ್ಳಬೇಕು. ಅಗತ್ಯ ಬಿದ್ದರೆ ಮಾತ್ರ ಎರಡು ಪಾಲಿಕೆಗೆ ಮಾತ್ರ ವಿಭಾಗಿಸಬೇಕು. ಈ ಪಾಲಿಕೆ ಆಡಳಿತಾವಧಿ 5 ವರ್ಷ ನಿಗದಿ ಮಾಡಿದ್ದು, ಇಲ್ಲಿ ಪ್ರತಿ ಪಾಲಿಕೆಯಲ್ಲಿ 100ರಿಂದ 150 ಸದಸ್ಯರಿಗೆ ಅವಕಾಶ ಮಾಡಿಕೊಡಲಾಗಿದೆ. ಮೇಯರ್, ಉಪಮೇಯರ್ ಅಧಿಕಾರವಧಿ ಎರಡೂವರೆ ವರ್ಷಗಳಿಗೆ ವಿಸ್ತರಿಸಲಾಗಿದೆ. ಮೇಯರ್ ವಿರುದ್ಧ ಅವಿಶ್ವಾಸ ನಿರ್ಣಯ ಮಂಡಿಸಬೇಕಾದರೆ ಆತ ಮೇಯರ್ ಆಗಿ ಆರು ತಿಂಗಳು ಕಳೆದಿರಬೇಕು” ಎಂದು ಹೇಳಿದರು.

“ವಿಧಾಸಭಾ ಕ್ಷೇತ್ರ ಮಟ್ಟದ ಸಮಿತಿಗೆ ಆಯಾ ಶಾಸಕರೇ ಮುಖ್ಯಸ್ಥರಾಗಿರುತ್ತಾರೆ. ಇನ್ನು ಈ ಸಮಿತಿಯ ಸದಸ್ಯರಾಗಲು ಆ ಕ್ಷೇತ್ರದ ನಿವಾಸಿಯಾಗಿ, ಆ ಕ್ಷೇತ್ರದ ಮತದಾರನಾಗಿರಬೇಕು. ಆ ಭಾಗದ ಪರಿಷತ್ ಸದಸ್ಯರು, ಕಾರ್ಪೊರೇಟರ್, ಇತರೆ ವಿಭಾಗಗಳ ಅಧಿಕಾರಿಗಳು ಸದಸ್ಯರಾಗಿರುತ್ತಾರೆ. ಒಟ್ಟು ವಿವಿಧ 6 ಸಮಿತಿಗಳನ್ನು ಹೊಂದಿದ್ದು ಇದರ ಕಾಲಾವಧಿ ಎರಡೂವರೆ ವರ್ಷಗಳಿರಬೇಕು. ಈ ಸಮಿತಿಯ ಸದಸ್ಯರ ಸಂಖ್ಯೆಯು ಮುಖ್ಯಸ್ಥ ಸೇರಿದಂತೆ 9-15 ಜನ ಇರಬೇಕು. ವಾರ್ಡ್ ಸಮಿತಿಯ ಕಾಲಾವಧಿ 20 ತಿಂಗಳು ನಿಗದಿ ಮಾಡಲಾಗಿದ್ದು, ಕಾರ್ಪೊರೇಟರ್ ಇದರ ಮುಖ್ಯಸ್ಥರಾಗಿರುತ್ತಾರೆ. ಇಲ್ಲಿ ನಾಲ್ವರು ಸದಸ್ಯರನ್ನು ಜಿಬಿಎ ಮೂಲಕ ನಾಮನಿರ್ದೇಶನ ಮಾಡಲು ಅವಕಾಶವಿರುತ್ತದೆ. ಇನ್ನು ಪಾಲಿಕೆಯಲ್ಲಿ ಈಗಿರುವ ಮೀಸಲಾತಿ ಮುಂದುವರಿಯಲಿದೆ. ಪಾಲಿಕೆ ಅನುದಾನವನ್ನು ಸೆಕ್ಷನ್ 176 ಪ್ರಕಾರ ಅವಕಾಶ ನೀಡಲಾಗುವುದು” ಎಂದು ಹೇಳಿದರು.

“ಇವಿಷ್ಟು ಹೊರತಾಗಿ ಬಿಜೆಪಿ ಸರ್ಕಾರ ತಂದಿದ್ದ ಯಾವುದೇ ವಿಚಾರ ಬದಲಾವಣೆ ಮಾಡಿಲ್ಲ. ಇನ್ನು ನಮ್ಮ ಸದಸ್ಯರು ಕೂಡ ಸೆಕ್ಷನ್ 9, 10, 15, 84ನಲ್ಲಿ ಕೆಲವು ತಿದ್ದುಪಡಿಗೆ ಸಲಹೆ ನೀಡಿದ್ದು, ಅವುಗಳನ್ನು ಸೇರಿಸಲಾಗಿದೆ. ಈ ಮಸೂದೆಯ ಬಗ್ಗೆ ಎಲ್ಲರೂ ಚರ್ಚಿಸಿದಷ್ಟು ಒಳ್ಳೆಯದು. ಬೆಂಗಳೂರಿನ ಹಿತಾಸಕ್ತಿಗಾಗಿ ಎಲ್ಲರೂ ಒಟ್ಟಾಗಿ ಶ್ರಮಿಸೋಣ. ನಮ್ಮ ಮುಖ್ಯಮಂತ್ರಿಗಳು ಮಂಡಿಸಿರುವ ಬಜೆಟ್ ನಲ್ಲಿ ಬೆಂಗಳೂರಿಗೆ ಸುಮಾರು ರೂ.1 ಲಕ್ಷ ಕೋಟಿಯಷ್ಟು ಮೊತ್ತದ ಯೋಜನೆಗಳನ್ನು ಘೋಷಣೆ ಮಾಡಿದ್ದಾರೆ. ಬೆಂಗಳೂರನ್ನು ಉಳಿಸಬೇಕು ಎಂದು ನಮ್ಮ ಸರ್ಕಾರ ಅತ್ಯಂತ ಧೈರ್ಯದ ನಿರ್ಧಾರ ತೆಗೆದುಕೊಂಡಿದೆ. ಬೆಂಗಳೂರಿನ ರಕ್ಷಣೆಯಲ್ಲಿ ಎಲ್ಲರ ಸಹಕಾರ ಅಗತ್ಯವಿದೆ” ಎಂದು ಡಿಸಿಎಂ ಕರೆ ನೀಡಿದರು.

ಡಿಸಿಎಂ ಡಿ.ಕೆ ಶಿವಕುಮಾರ್ ಗ್ರೇಟರ್ ಬೆಂಗಳೂರು ವಿಧೇಯಕದ ಮೇಲಿನ ಚರ್ಚೆಯ ನಂತ್ರ ಬಿಜೆಪಿ ಸದಸ್ಯರು ವಿಧಾನ ಪರಿಷತ್ತಿನಲ್ಲಿ ಸಭಾತ್ಯಾಗ ಮಾಡಿದರು. ವಿಪಕ್ಷ ನಾಯಕರ ಸಭಾತ್ಯಾಗದ ನಡುವೆ ವಿಧಾನ ಪರಿಷತ್ತಿನಲ್ಲಿ ಗ್ರೇಟರ್ ಬೆಂಗಳೂರು ವಿಧೇಯಕ ಅಂಗೀಕಾರಗೊಂಡಿದೆ.

BREAKING: SSLC ವಿದ್ಯಾರ್ಥಿಗಳಿಗೆ ಮಹತ್ವದ ಮಾಹಿತಿ: ಪರೀಕ್ಷೆ-1ಕ್ಕೆ ಅಂತಿಮ ಪ್ರವೇಶ ಪತ್ರ ಬಿಡುಗಡೆ | Karnataka SSLC Exam

BIG NEWS: ಇನ್ಮುಂದೆ ಸರ್ಕಾರಿ ಆಸ್ಪತ್ರೆಗಳಲ್ಲಿ ವೈದ್ಯರು ಬೆಳಿಗ್ಗೆ 9ರಿಂದ ಸಂಜೆ 4ರವರೆಗೆ ಕರ್ತವ್ಯ ನಿರ್ವಹಣೆ ಕಡ್ಡಾಯ: ಸಚಿವ ಡಾ.ಶರಣಪ್ರಕಾಶ್ ಪಾಟೀಲ್

Share. Facebook Twitter LinkedIn WhatsApp Email

Related Posts

BIG NEWS: ಪ್ರಾಂಕ್ ಹೆಸರಲ್ಲಿ ಹುಚ್ಚಾಟ ಮೆರೆದ್ರೆ FIR ಫಿಕ್ಸ್: ಬೆಂಗಳೂರು ಪೊಲೀಸರಿಂದ ಖಡಕ್ ಎಚ್ಚರಿಕೆ

18/05/2025 5:10 PM1 Min Read

BIG NEWS : ಸಚಿವ ಸಂಪುಟ ವಿಸ್ತರಣೆ ಆದರೆ ಹೊಸ ಲೀಡರ್ ಶಿಪ್ ಬೆಳೆಯುತ್ತೆ : ಸಚಿವ ಸತೀಶ್ ಜಾರಕಿಹೊಳಿ

18/05/2025 5:03 PM1 Min Read

BREAKING : ಸ್ಟೇಡಿಯಂಗೆ ನುಗ್ಗಿ ಕೊಹ್ಲಿಯನ್ನು ಅಪ್ಪಿಕೊಳ್ಳುತ್ತೇನೆ : ಇನ್ಸ್ಟಾಗ್ರಾಂನಲ್ಲಿ ವಿಡಿಯೋ ಹಾಕಿದ್ದ ಯುವಕ ಅರೆಸ್ಟ್, ‘FIR’ ದಾಖಲು!

18/05/2025 4:22 PM2 Mins Read
Recent News

BIG NEWS: ಪ್ರಾಂಕ್ ಹೆಸರಲ್ಲಿ ಹುಚ್ಚಾಟ ಮೆರೆದ್ರೆ FIR ಫಿಕ್ಸ್: ಬೆಂಗಳೂರು ಪೊಲೀಸರಿಂದ ಖಡಕ್ ಎಚ್ಚರಿಕೆ

18/05/2025 5:10 PM

BIG NEWS : ಸಚಿವ ಸಂಪುಟ ವಿಸ್ತರಣೆ ಆದರೆ ಹೊಸ ಲೀಡರ್ ಶಿಪ್ ಬೆಳೆಯುತ್ತೆ : ಸಚಿವ ಸತೀಶ್ ಜಾರಕಿಹೊಳಿ

18/05/2025 5:03 PM

BREAKING: ಅಹಮದಾಬಾದ್ ನಲ್ಲಿ ತಿರಂಗ ಯಾತ್ರೆಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಚಾಲನೆ | Tiranga Yatra

18/05/2025 5:02 PM

ಗುಲ್ಜಾರ್ ಹೌಜ್ ಬೆಂಕಿ ದುರಂತ: ಮೃತಪಟ್ಟವರ ಕುಟುಂಬಗಳಿಗೆ 5 ಲಕ್ಷ ಪರಿಹಾರ ಘೋಷಿಸಿದ ತೆಲಂಗಾಣ ಸರ್ಕಾರ

18/05/2025 4:54 PM
State News
KARNATAKA

BIG NEWS: ಪ್ರಾಂಕ್ ಹೆಸರಲ್ಲಿ ಹುಚ್ಚಾಟ ಮೆರೆದ್ರೆ FIR ಫಿಕ್ಸ್: ಬೆಂಗಳೂರು ಪೊಲೀಸರಿಂದ ಖಡಕ್ ಎಚ್ಚರಿಕೆ

By kannadanewsnow0918/05/2025 5:10 PM KARNATAKA 1 Min Read

ಬೆಂಗಳೂರು: ಸ್ಟೇಡಿಯಂಗೆ ನುಗ್ಗಿ ಕೊಹ್ಲಿ ಅಪ್ಪಿಕೊಳ್ಳುವುದಾಗಿ ವೀಡಿಯೋವನ್ನು ಇನ್ಸ್ ಸ್ಟಾಗ್ರಾಂನಲ್ಲಿ ಶೇರ್ ಮಾಡಿದ್ದಂತ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದರು. ಇದು ಹುಚ್ಚಾಟವಾಗಿದೆ.…

BIG NEWS : ಸಚಿವ ಸಂಪುಟ ವಿಸ್ತರಣೆ ಆದರೆ ಹೊಸ ಲೀಡರ್ ಶಿಪ್ ಬೆಳೆಯುತ್ತೆ : ಸಚಿವ ಸತೀಶ್ ಜಾರಕಿಹೊಳಿ

18/05/2025 5:03 PM

BREAKING : ಸ್ಟೇಡಿಯಂಗೆ ನುಗ್ಗಿ ಕೊಹ್ಲಿಯನ್ನು ಅಪ್ಪಿಕೊಳ್ಳುತ್ತೇನೆ : ಇನ್ಸ್ಟಾಗ್ರಾಂನಲ್ಲಿ ವಿಡಿಯೋ ಹಾಕಿದ್ದ ಯುವಕ ಅರೆಸ್ಟ್, ‘FIR’ ದಾಖಲು!

18/05/2025 4:22 PM

BREAKING : ಆಂಧ್ರಪ್ರದೇಶದಲ್ಲಿ ಭೀಕರ ಅಪಘಾತ : ಕಾರು ಬಾವಿಗೆ ಉರುಳಿ ಬಿದ್ದು ಕರ್ನಾಟಕದ ಮೂವರು ಸಾವು!

18/05/2025 4:00 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.