ಮೈಸೂರು: ಜಿಲ್ಲೆಯ ಟಿ.ನರಸೀಪುರ ತಾಲೂಕಿನಲ್ಲಿ ಚಿರತೆ ದಾಳಿಯಿಂದ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಮೃತಪಟ್ಟಿದ್ದಾಳೆ.
ಮೃತ ಯುವತಿಯನ್ನು ಮೇಘನಾ ಎಂದು ಗುರುತಿಸಲಾಗಿದೆ. ಮೈಸೂರು ಜಿಲ್ಲೆಯ ಟಿ.ನರಸೀಪುರ ತಾಲೂಕಿನ ಎಸ್.ಕೆಬ್ಬೆಹುಂಡಿಯಲ್ಲಿ ಚಿರತೆಯೊಂದು ಮನೆಯ ಮುಂದೆ ಕುಳಿತಿದ್ದಂತ ಯುವತಿಯ ಮೇಲೆ ದಾಳಿ ನಡೆಸಿತ್ತು, ಗಂಭೀರವಾಗಿ ಗಾಯಗೊಂಡಿದ್ದ ಆಕೆಯನ್ನು ಆಸ್ಪತ್ರೆಗೆ ಸೇರಿಸಿದರೂ ಚಿಕಿತ್ಸೆ ಫಲಕಾರಿಯಾಗದೇ ಆಕೆ ಮೃತಪಟ್ಟಿದ್ದಾಳೆ. ಈ ಮೂಲಕ ಜಿಲ್ಲೆಯಲ್ಲಿ ಚಿರತೆ ದಾಳಿಗೆ ಮೂವರು ಬಲಿಯಾದಂತಾಗಿದೆ. ಎಸ್.ಕೆಬ್ಬೆಹುಂಡಿ ಗ್ರಾಮದ ಮೇಘನಾ ಎಂಬ ಯುವತಿ ಚಿರತೆ ದಾಳಿಯಿಂದ ಗಾಯಗೊಂಡಿದ್ದಳು.
ಈ ಹಿಂದೆ ಅನೇಕ ಬಾರಿ ಮೈಸೂರು ಜಿಲ್ಲೆಯ ಟಿ.ನರಸೀಪುರ ತಾಲೂಕಿನಲ್ಲಿ ಚಿರತೆ ದಾಳಿ ಪ್ರಕರಣಗಳು ನಡೆದಿದ್ದವು. ಜನರ ಮೇಲೆ ದಾಳಿ ನಡೆಸುತ್ತಿರುವಂತ ಚಿರತೆ ಸೆರೆಗೂ ಅರಣ್ಯ ಇಲಾಖೆ ಸಿಬ್ಬಂದಿಗಳು ಕಾರ್ಯಾಚರಣೆ ನಡೆಸುತ್ತಿದ್ದಾರೆ.
BIG NEWS: ‘ಒಪ್ಪಂದದ ಮೇರೆ’ಗೆ ‘KSRTC ಬಸ್’ ಬುಕ್ ಮಾಡೋರಿಗೆ ಬಿಗ್ ಶಾಕ್: ದರ ಹೆಚ್ಚಳ | KSRTC Bus