ಮೈಸೂರು : ದೇವಸ್ಥಾನಕ್ಕೆ ಹೋಗಿದ್ದ ಯುವಕನೋರ್ವ ಚಿರತೆ ದಾಳಿಗೆ ಬಲಿಯಾದ ಘಟನೆ ತಿ ನರಸೀಪುರ ತಾಲೂಕಿನ ಉಕ್ಕಲಗೆರೆ ಗ್ರಾಮದಲ್ಲಿ ನಡೆದಿದೆ.
ಮೃತನನ್ನು ಘಟನೆ ತಿ ನರಸೀಪುರ ತಾಲೂಕಿನ ಹುಂಡಿ ಗ್ರಾಮದ ಮಂಜುನಾಥ್ (20) ಎಂದು ಗುರುತಿಸಲಾಗಿದೆ. ಮೈಸೂರಿನಲ್ಲಿ ಪದವಿ ಕಾಲೇಜೊಂದರಲ್ಲಿ ಪದವಿ ವ್ಯಾಸಂಗ ಮಾಡುತ್ತಿದ್ದ ಮಂಜುನಾಥ್ ಇಂದು ಮಲ್ಲಿಕಾರ್ಜುನ ದೇವಾಲಯಕ್ಕೆ ತೆರಳಿದ್ದಾನೆ. ಈ ವೇಳೆ ಚಿರತೆ ದಾಳಿ ನಡೆಸಿದೆ ಎಂದು ಹೇಳಲಾಗಿದೆ.
ಮಲ್ಲಿಕಾರ್ಜುನ ಸ್ವಾಮಿ ದೇವಾಲಯದ ಬೆಟ್ಟದ ಮೇಲಿದ್ದು, ಕಲ್ಲು ಬಂಡೆಗಳ ನಡುವೆ ಹಾದು ಹೋಗಬೇಕು. ಈ ವೇಳೆ ಹೊಂಚು ಹಾಕಿದ್ದ ಚಿರತೆ ಕುತ್ತಿಗೆಯನ್ನು ಹಿಡಿದು ಎಳೆದುಕೊಂಡು ಹೋಗಿದೆ. ನಂತರ ಸ್ವಲ್ಪ ದೂರದಲ್ಲಿ ಬಿಟ್ಟು ಹೋಗಿದೆ. ಅಷ್ಟರಲ್ಲೇ ಯುವಕನ ಪ್ರಾಣ ಪಕ್ಷಿ ಹಾರಿ ಹೋಗಿತ್ತು. ದೇವಾಲಯಕ್ಕೆ ಹೋಗುತ್ತಿದ್ದ ವ್ಯಕ್ತಿಯೊಬ್ಬರು ಈ ವಿಷಯವನ್ನು ಮನೆಯವರಿಗೆ ಮುಟ್ಟಿಸಿದ್ದಾರೆ ಎನ್ನಲಾಗಿದೆ.
BIG NEWS: ‘ದಿ ವೈರ್ ಸಂಪಾದಕ ಸಿದ್ಧಾರ್ಥ್ ವರದರಾಜನ್, ಎಂಕೆ ವೇಣು ನಿವಾಸಗಳಲ್ಲಿ ದೆಹಲಿ ಪೊಲೀಸ್ ಶೋಧ
ರಾಜ್ಯದಲ್ಲಿ ಪ್ರೌಢ ಶಾಲೆಗಳನ್ನು ಉನ್ನತೀಕರಣ: 29 ಸರ್ಕಾರಿ ಪದವಿ ಪೂರ್ವ ಕಾಲೇಜು ಪ್ರಾರಂಭ