ಮಂಡ್ಯ : ಜಮೀನಿಗೆ ನೀರು ಹಾಯಿಸಲು ಹೋದಾಗ ರೈತನ ಮೇಲೆ ಏಕಾಏಕಿ ಚಿರತೆ ದಾಳಿ ಮಾಡಿರುವ ಘಟನೆ ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಕೆಸ್ತೂರು ಗ್ರಾಮದಲ್ಲಿ ಈ ಒಂದು ಘಟನೆ ನಡೆದಿದೆ.
ಕೆಸ್ತೂರು ಗ್ರಾಮದಲ್ಲಿ ರೈತನ ಮೇಲೆ ಚಿರತೆ ದಾಳಿ ಮಾಡಿದ್ದು, ಜಮೀನಿಗೆ ತೆರಳಿದ್ದ ವೇಳೆ ಚಿರತೆ ದಾಳಿ ಮಾಡಿದೆ. ಚಿರತೆ ದಾಳಿಗೆ ರೈತ ರಾಮು ಬೆನ್ನು, ಕುತ್ತಿಗೆ ಭಾಗಕ್ಕೆ ಗಂಭೀರವಾದ ಗಾಯಗಳಾಗಿವೆ. ಜಮೀನಿಗೆ ನೀರು ಹಾಯಿಸಲು ಹೋಗಿದ್ದಾಗ ರಾಮು ಮೇಲೆ ಚಿರತೆ ದಾಳಿ ಮಾಡಿದೆ. ಮದ್ದೂರು ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಅದೃಷ್ಟವಶಾತ್ ರೈತ ರಾಮು ಪ್ರಾಣಪಾಯದಿಂದ ಪಾರಾಗಿದ್ದಾನೆ.