ಮೈಸೂರು ಇನ್ಫೋಸಿಸ್ ಆವರಣದಲ್ಲಿ ಚಿರತೆ ಸೆರೆ ಕಾರ್ಯಾಚರಣೆ: ಸಚಿವ ಈಶ್ವರ ಖಂಡ್ರೆ

ಬೀದರ್: ಇಂದು ಮೈಸೂರು ನಗರದ ಇನ್ಫೋಸಿಸ್ ಆವರಣದಲ್ಲಿ ನಸುಕಿನ 4.30ರ ಸುಮಾರಿನಲ್ಲಿ ಚಿರತೆ ಕಾಣಿಸಿಕೊಂಡಿದ್ದು, ಇದರ ಸೆರೆಗೆ ಕಾರ್ಯಾಚರಣೆ ನಡೆಯುತ್ತಿದೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ತಿಳಿಸಿದ್ದಾರೆ. ವಿಷಯ ತಿಳಿದ ಕೂಡಲೇ ಚಿರತೆ ಸೆರೆ ಹಿಡಿಯಲು ಚಿರತೆ ಕಾರ್ಯಪಡೆ ತಂಡವನ್ನು ಕಳುಹಿಸಲಾಗಿದೆ. ತಂಡದಲ್ಲಿ ಪಶುವೈದ್ಯರು, ಚಿರತೆ ಸೆರೆ ತರಬೇತಿ ಪಡೆದ 40 ಸಿಬ್ಬಂದಿ ಇದ್ದಾರೆ. ವನ್ಯಜೀವಿ ವಿಭಾಗದ ಅರಣ್ಯಾಧಿಕಾರಿಗಳೂ ಸ್ಥಳದಲ್ಲಿದ್ದು, ಕಾರ್ಯಾಚರಣೆಯ ಉಸ್ತುವಾರಿ ನೋಡಿಕೊಳ್ಳುತ್ತಿದ್ದಾರೆ ಎಂದು ತಿಳಿಸಿದ್ದಾರೆ. ಸಿಸಿ ಟಿವಿಯಲ್ಲಿ … Continue reading ಮೈಸೂರು ಇನ್ಫೋಸಿಸ್ ಆವರಣದಲ್ಲಿ ಚಿರತೆ ಸೆರೆ ಕಾರ್ಯಾಚರಣೆ: ಸಚಿವ ಈಶ್ವರ ಖಂಡ್ರೆ