ತುಮಕೂರು : ಜಿಲ್ಲೆಯ ಕುಣಿಗಲ್ ತಾಲೂಕಿನ ಮುದ್ದಲಿಂಗಯ್ಯನದೊಡ್ಡಿ ಬಳಿ ತಡ ರಾತ್ರಿ ಮನೆಗೆ ಚಿರತೆಯೊಂದು ನುಗ್ಗಿದನ್ನು ಕಂಡು ಗ್ರಾಮಸ್ಥರು ಭಯಭೀತರಾದ ಘಟನೆ ಬೆಳಕಿಗೆ ಬಂದಿದೆ.
ಮುದ್ದಲಿಂಗಯ್ಯನದೊಡ್ಡಿ ಬಳಿ ನಿನ್ನೆ ರಾತ್ರಿ ತಡ ಏಕಾಏಕಿ ಶಿವಣ್ಣ ಎಂಬುವರ ಚಿರತೆ ಮನೆಗೆ ನುಗ್ಗಿದೆ. ಈ ಸಂದರ್ಭದಲ್ಲಿ ಮನೆಯಲ್ಲಿ ಕೂಡಿ ಹಾಕಿ ಹೊರಗೆ ಓಡೋಡಿ ಬಂದಿದ್ದಾರೆ. ಬಳಿಕ ಶಿವಣ್ಣ ಅವರ ಕುಟುಂಬ ಕೂಡಲೇ ಅರಣ್ಯ ಇಲಾಖೆ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ. ಅರಣ್ಯ ಇಲಾಖೆ ಸಿಬ್ಬಂದಿ ಚಿರತೆಗೆ ಅರಿವಳಿಕೆ ಚುಚ್ಚುಮದ್ದು ನೀಡಿ ಚಿರತೆಯನ್ನು ಸೆರೆ ಹಿಡಿದಿದ್ದಾರೆ. ಚಿರತೆಯ ಸೆರೆ ಹಿಡಿದ ಕಾರಣದಿಂದಾಗಿ ಮುದ್ದಲಿಂಗಯ್ಯನ ದೊಡ್ಡಿ ಗ್ರಾಮಸ್ಥರು ನಿಟ್ಟುಸಿರು ಬಿಟ್ಟಿದ್ದಾರೆ. ಈ ಘಟನೆ ಸಂಬಂಧ ಹುಲಿಯಾರು ದುರ್ಗ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.