ಚಾಮರಾಜನಗರ: ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನಲ್ಲಿ ಚಿರತೆ ಹಾವಳಿ ಮುಂದುವರೆದಿದೆ. ಕಳೆದ 4 ದಿನಗಳ ಹಿಂದೆ ಕಿಲಗೆರೆಯಲ್ಲಿ ಕುರಿ ಮೇಲೆ ಚಿರತೆಯೊಂದು ದಾಳಿ ಮಾಡಿತ್ತು.
BIGG NEWS: ವಿವಿಧ ಬೇಡಿಕೆ ಈಡೇರಿಕೆ ಆಗ್ರಹಿಸಿ NSUI ವಿದ್ಯಾರ್ಥಿಗಳಿಂದ ಪ್ರತಿಭಟನೆ
ಇದೀಗ ಚಾಮರಾಜನಗರ ತಾಲೂಕಿನಲ್ಲಿರುವ ವೆಂಕಟರಮಣಸ್ವಾಮಿ ಬೆಟ್ಟದ ತಪ್ಪಲಿನಲ್ಲಿ ಚಿರತೆ ಪ್ರತ್ಯಕ್ಷಗೊಂಡಿದ್ದು, ಸಾರ್ವಜನಿಕರ ಮೊಬೈಲ್ನಲ್ಲಿ ಚಿರತೆ ಸಂಚಾರದ ವಿಡಿಯೋ ಸೆರೆಯಾಗಿದೆ. ಹಲವು ದಿನಗಳಿಂದ ಉಪಟಳ ನೀಡುತ್ತಿರುವ ಈ ಚಿರತೆ ಅರಣ್ಯ ಇಲಾಖೆ ಸಿಬ್ಬಂದಿ ಇಟ್ಟಿರುವ ಬೋನಿಗೆ ಬೀಳದೆ ಎಲ್ಲಾ ಕಡೆಗಳಲ್ಲಿ ಓಡಾಡುತ್ತಿದ್ದು, ಇದರಿಂದಾಗಿ ಮನೆಯಿಂದ ಹೊರಬರಲು ಜನರು ಆಂತಕ ಪಡುತ್ತಿದ್ದಾರೆ. ಕೂಡಲೇ ಅರಣ್ಯಾಧಿಕಾರಿಗಳು ಚಿರತೆ ಸೆರೆ ಹಿಡಿಯಬೇಕಿದೆ ಎಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ.